Chamarajanagar: ಗಡಿಯಲ್ಲಿ ಕಮಲ ಅರಳಿಸಲು ಸಚಿವ ಸೋಮಣ್ಣ ಮಾಸ್ಟರ್‌ ಪ್ಲಾನ್‌

By Govindaraj SFirst Published Dec 12, 2022, 2:20 PM IST
Highlights

ಹಳೇ ಮೈಸೂರು ಪ್ರಾಂತ್ಯದಲ್ಲಿ ಹೆಚ್ಚು ಸ್ಥಾನಗಳಿಸುವ ಮೂಲಕ ಈ ಬಾರಿ ಶತಾಯಗತಾಯ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲೇಬೇಕು ಎಂದು ಬಿಜೆಪಿ ಚಾಣಾಕ್ಷ ಅಮಿತ್‌ ಷಾ ಈ ಭಾಗದ ನಾಯಕರಿಗೆ ಟಾಸ್ಕ್‌ ನೀಡುತ್ತಲೇ ಬಂದಿದ್ದಾರೆ. 

ದೇವರಾಜು ಕಪ್ಪಸೋಗೆ

ಚಾಮರಾಜನಗರ (ಡಿ.12): ಹಳೇ ಮೈಸೂರು ಪ್ರಾಂತ್ಯದಲ್ಲಿ ಹೆಚ್ಚು ಸ್ಥಾನಗಳಿಸುವ ಮೂಲಕ ಈ ಬಾರಿ ಶತಾಯಗತಾಯ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲೇಬೇಕು ಎಂದು ಬಿಜೆಪಿ ಚಾಣಾಕ್ಷ ಅಮಿತ್‌ ಷಾ ಈ ಭಾಗದ ನಾಯಕರಿಗೆ ಟಾಸ್ಕ್‌ ನೀಡುತ್ತಲೇ ಬಂದಿದ್ದಾರೆ. ಇದೀಗ ರಾಜ್ಯದ ಗಡಿ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲೂ ಕಮಲ ಅರಳಿಸುವ ಮೂಲಕ ಪಕ್ಷ ಬಲಪಡಿಸಬೇಕು ಎಂಬ ರಣೋತ್ಸಾಹದೊಂದಿಗೆ ಜನ ಸಂಕಲ್ಪ ಯಾತ್ರೆಗೆ ಮುನ್ನವೇ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾಸ್ಟರ್‌ ಪ್ಲಾನ್‌ ರೂಪಿಸಿದ್ದು, ಕಾಂಗ್ರೆಸ್‌ ಪಕ್ಷದ ಹ್ಯಾಟ್ರಿಕ್‌ ಶಾಸಕರಿರುವ ಚಾಮರಾಜನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ಭರ್ಜರಿ ಸಮಾವೇಶ ನಡೆಸುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿಸಲು ಸಂಕಲ್ಪ ತೊಟ್ಟಿದ್ದಾರೆ.

ಹಳೇ ಮೈಸೂರು ಪ್ರಾಂತ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಎರಡು ದಶಕಗಳಿಂದ ತಮ್ಮದೇ ಆದ ಹಿಡಿತ ಹೊಂದಿರುವ ಸಚಿವ ವಿ. ಸೋಮಣ್ಣ ಚುನಾವಣೆಗಳ ಉಸ್ತುವಾರಿ ವಹಿಸಿಕೊಳ್ಳುವ ಮೂಲಕ ಕೆಲ ಸ್ಧಾನಗಳಿಗೆ ಮಾತ್ರ ಸೀಮಿತವಾಗಿದ್ದ ಬಿಜೆಪಿಯನ್ನು ಜಿಲ್ಲಾ ಪಂಚಾಯಿತಿಯಲ್ಲಿ ಪ್ರಬಲ ವಿರೋಧಪಕ್ಷವಾಗಿಸುವಲ್ಲಿ ಮತ್ತು ಚಾಮರಾಜನಗರ ತಾಲೂಕು ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯುವ ಮಟ್ಟಿಗೆ ಸಂಘಟಿಸಿದ್ದರು. ಇದರ ಫಲವಾಗಿ ವಿಧಾನಸಭಾ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯಿತು. ಚಾಮರಾಜನಗರ ಮತ್ತು ಹನೂರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಕಡಿಮೆ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಲೋಕಸಭಾ ಚುನಾವಣೆಯಲ್ಲೂ ಮೊದಲ ಬಾರಿಗೆ ಕಮಲ ಅರಳಿತು. ಬಳಿಕ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್‌. ಮಹೇಶ್‌ ಸಹ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಆನೆಗೆ ಕಬ್ಬು ನೀಡಿ 75 ಸಾವಿರ ದಂಡ ತೆತ್ತ ಲಾರಿ ಚಾಲಕ!

ನಗರಸಭೆ, ಚಾಮುಲ್‌, ಎಪಿಎಂಸಿ, ಟಿಎಪಿಸಿಎಂಎಸ್‌, ಪಿಎಲ್‌ಡಿ ಬ್ಯಾಂಕ್‌, ಇತ್ತೀಚಿಗೆ ನಡೆದ ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ 7 ಸ್ಥಾನಗಳ ಪೈಕಿ 6ರಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕು ಸ್ದಾನಗಳಲ್ಲೂ ಕಮಲ ಅರಳಿಸುವ ಮೂಲಕ ಪಕ್ಷಕ್ಕೆ ದೊಡ್ಡ ಕಾಣಿಕೆ ನೀಡಬೇಕು ಎಂದು ಸಚಿವ ಸೋಮಣ್ಣ ತಂತ್ರಗಾರಿಕೆ ಎಣಿಯುವ ಮೂಲಕ ಕಾರ್ಯಕರ್ತರು ಮತ್ತು ಮುಖಂಡರನ್ನು ಅಖಾಡಕ್ಕಿಳಿಸಿದ್ದಾರೆ.

ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ರಮೇಶ್‌

ನನಗೆ ಜಿಲ್ಲೆಯ ಅಭಿವೃದ್ಧಿ ಮುಖ್ಯ. ಚುನಾವಣೆ ಬರುವ ತನಕ ಆಡಳಿತ ಮತ್ತು ವಿರೋಧಪಕ್ಷ ಎಂಬ ಬೇಧಭಾವವಿಲ್ಲದೆ ಕೆಲಸ ಮಾಡೋಣ ಎಂದು ನಾನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಬಂದಾಗಿನಿಂದಲೂ ಹೇಳುತ್ತಿದ್ದೇನೆ. ಈಗ ಜಿಲ್ಲೆಯ ಪ್ರಮುಖ ಯೋಜನೆಗಳಿಗೆ ಚಾಲನೆ ಕೊಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದೇವೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಆಗಮಿಸುತ್ತಾರೆ. ಎಲ್ಲರೂ ಒಟ್ಟಾಗಿ ಅವರನ್ನು ಸ್ವಾಗತಿಸೋಣ. ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸೋಣ.
- ವಿ. ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ, ಚಾಮರಾಜನಗರ ಜಿಲ್ಲೆ

click me!