ಜೆಡಿಎಸ್‌ ಬಿಜೆಪಿಯ ಬಿ ಟೀಮ್‌ ಎಂಬುದು ಸಾಬೀತು: ಸಚಿವ ಜಮೀರ್‌ ಅಹಮದ್‌

By Kannadaprabha NewsFirst Published Sep 23, 2023, 8:02 AM IST
Highlights

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಜೆಡಿಎಸ್‌ ಬಿಜೆಪಿಯ ಬಿ ಟೀಮ್‌ ಎಂಬುದು ಸಾಬೀತಾಗಿದೆ. ಈ ಮೈತ್ರಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಅನುಕೂಲವಾಗಲಿದೆ. ಅಲ್ಲದೆ ಜೆಡಿಎಸ್‌ ಇನ್ನು ಮುಂದೆ ಜಾತ್ಯಾತೀತ ಪದವನ್ನು ತೆಗೆಯುವುದು ಸೂಕ್ತ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು (ಸೆ.23): ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಜೆಡಿಎಸ್‌ ಬಿಜೆಪಿಯ ಬಿ ಟೀಮ್‌ ಎಂಬುದು ಸಾಬೀತಾಗಿದೆ. ಈ ಮೈತ್ರಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಅನುಕೂಲವಾಗಲಿದೆ. ಅಲ್ಲದೆ ಜೆಡಿಎಸ್‌ ಇನ್ನು ಮುಂದೆ ಜಾತ್ಯಾತೀತ ಪದವನ್ನು ತೆಗೆಯುವುದು ಸೂಕ್ತ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತ್ತು. ಆದರೆ, ನಾವು ಪ್ರತ್ಯೇಕವಾಗಿ ಚುನಾವಣೆ ಎದುರಿಸಿದ್ದರೆ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುತ್ತಿದ್ದೆವು. ಜೆಡಿಎಸ್‌ ಜತೆ ಹೋಗಿದ್ದಕ್ಕೆ ಸಿಂಗಲ್‌ ಡಿಜಿಟ್‌ಗೆ ಇಳಿದೆವು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಥಿತಿಯೂ ಹಾಗೇ ಆಗಲಿದೆ ಎಂದರು.

ಡಿಸಿಎಂ ಹುದ್ದೆ ಆಸೆ ಪಡೋರಿಗೆ ನಾನು ಉತ್ತರ ಕೊಡೋದಿಲ್ಲ: ಡಿಕೆಶಿ

ಮೈತ್ರಿ ಮಾತುಕತೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಕರೆದಿಲ್ಲ. ಅವರು ಮುಸ್ಲಿಂ ಸಮುದಾಯದವರು ಎಂಬ ಕಾರಣಕ್ಕಾಗಿ ಅವರನ್ನು ಕರೆದಿಲ್ಲ ಎಂಬ ಅನುಮಾನವಿದೆ. ಈ ಹಿಂದೆ ಜೆಡಿಎಸ್-ಬಿಜೆಪಿ ಸರ್ಕಾರ ರಚನೆಯಾದಾಗ ನನ್ನ ಒಪ್ಪಿಗೆ ಇರಲಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದರು. ಈಗ ಅವರು ಏನು ಹೇಳುತ್ತಾರೆ ಎಂಬುದು ನೋಡಬೇಕು. ಈಗಿನ ಮೈತ್ರಿಯಿಂದ ಕಾಂಗ್ರೆಸ್ ಪಕ್ಷ ಮಾತ್ರ ಜಾತ್ಯಾತೀತ ಪಕ್ಷ ಎಂಬುದು ಸಾಬೀತಾಗಿದೆ. ಅಲ್ಲದೆ ಇದು ಯಾವುದೇ ಸಿದ್ಧಾಂತ ಇಲ್ಲದ ಮೈತ್ರಿ ಎಂಬುದು ರಾಜ್ಯದ ಜನತೆಗೂ ಸ್ಪಷ್ಟತೆ ಸಿಕ್ಕಿದೆ ಎಂದು ತಿಳಿಸಿದರು.

ಜಿಲ್ಲಾ ಪ್ರವಾಸ 25ರಿಂದ: ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೆ. 25ರಿಂದ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ. 24ರಂದು ಸಂಜೆ ಜಿಲ್ಲಾ ಕೇಂದ್ರ ಹೊಸಪೇಟೆಗೆ ಆಗಮಿಸಿ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ. 25ರಂದು ಬೆಳಗ್ಗೆ 10.30ಕ್ಕೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ 2.30ಕ್ಕೆ ಗಣಿಬಾಧಿತ ಪ್ರದೇಶ ಕ್ಯಾಂಪ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಿಬಾಧಿತ ಪ್ರದೇಶಗಳ ಸಮಸ್ಯೆ ಕುರಿತು ಗಣಿ ಮಾಲೀಕರು ಹಾಗೂ ಅಧಿಕಾರಿಗಳ ಜತೆ ಸಭೆಯನ್ನು ನಡೆಸಲಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಈಗ ಅಧಿಕೃತ: ದಸರಾ ಬಳಿಕ ಲೋಕಸಭೆ ಸೀಟು ಹಂಚಿಕೆ ನಿರ್ಧಾರ

ಸೆ. 26ರಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿ ಜಿಲ್ಲೆಯ ಗಣಿಬಾಧಿತ ಪ್ರದೇಶ, ಕ್ಯಾಂಪ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಗಣಿ ಬಾಧಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ನಂತರ ಹೊಸಪೇಟೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ. 27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೆಡಿಪಿ ಸಭೆಯನ್ನು ನಡೆಸಲಿದ್ದಾರೆ.

click me!