
ಹುಬ್ಬಳ್ಳಿ(ಡಿ.16): ಸ್ಪೀಕರ್‌ಗೆ ನಾವು ಸೇರಿದಂತೆ ಬಿಜೆಪಿಯವರೂ ಕೈ ಮುಗಿಯಬೇಕು ಅಂದಿದ್ದೆ. ಸ್ಪೀಕರ್‌ಗೆ ಸಿಎಂ ಸೇರಿದಂತೆ ಎಲ್ಲರೂ ಕೈಮುಗಿಯುತ್ತಾರೆ. ಅದರಲ್ಲಿ ತಪ್ಪೇನಿದೆ ಎಂದು ತೆಲಂಗಾಣದಲ್ಲಿ ನೀಡಿದ್ದ ಹೇಳಿಕೆಯನ್ನು ಸಚಿವ ಜಮೀರ್‌ಅಹ್ಮದ್ ಖಾನ್ ಸಮರ್ಥಿಸಿಕೊಂಡಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಸಿಕ್ಕು ಇಷ್ಟು ವರ್ಷಗಳಲ್ಲಿ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಕಾಂಗ್ರೆಸ್ ಮುಸ್ಲಿಮರಿಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿಯವರು ಯಾಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಗೊತ್ತಿಲ್ಲ. ಅವರಿಗೆ ಚರ್ಚೆಗೆ ಬೇರೆ ವಿಷಯಗಳಿಲ್ಲ, ಹೀಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲ. ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಕೆಲಸ ಎಂದು ಟೀಕಿಸಿದರು.
ರಾಜ್ಯ ಬಿಜೆಪಿ ಮೇಲೆ ಹೈಕಮಾಂಡ್ ಬೇಸರ ಆಗಿರೋದು ನಿಜ: ಈಶ್ವರಪ್ಪ
ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ₹10 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದಾರೆ. ಇದು ಸ್ವಾಗತಾರ್ಹ, ಬಿಜೆಪಿಯವರು ಸಬ್ ಕಾ ವಿಕಾಸ್ ಅಂತಾ ಹೇಳಿ ಮುಸ್ಲಿಮರ ಅನುದಾನ ಕಡಿತ ಮಾಡಿದ್ದಾರೆ ಎಂದರು.
ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾವತ್ತೂ ಸಿದ್ದರಾಮಯ್ಯನವರ ಪರವಾಗಿದ್ದೇನೆ. ಸದ್ಯಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ, ಅವರೇ ಇರುತ್ತಾರೆ. ಸದ್ಯಕ್ಕೆ ಖುರ್ಚಿ ಖಾಲಿ ಇಲ್ಲ ಎಂದರು. ಎರಡೂವರೆ ವರ್ಷದ ನಂತರ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಲು ತಡಬಡಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.