ಚಿಕ್ಕೋಡಿಯಿಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್‌ಗೆ ಕೈ ಟಿಕೆಟ್ ಅಂತಿಮವಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸಚಿವರ ಮಕ್ಕಳಿಬ್ಬರು ಚುನಾವಣೆ ಆಖಾಡಕ್ಕಿಳಿಯುತ್ತಿರುವುದು ವಿಶೇಷ, ಸಚಿವರ ಮಕ್ಕಳಿಗೆ ಮಣೆಹಾಕಿರುವ ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸಿದೆ ಎಂಬ ಆರೋಪ ಕೇಳಿಬರುತ್ತಿದೆ.
ಶ್ರೀಶೈಲ ಮಠದ
ಬೆಳಗಾವಿ(ಮಾ.22): ನಿರೀಕ್ಷೆಯಂತೆಯೇ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳ ಸ್ಪರ್ಧೆಗೆ ಸಚಿವರ ಮಕ್ಕಳಿಗೆ ಮಣೆಹಾಕಿದ್ದು, ಈ ಮೂಲಕ ಹೊಸ ಮುಖಗಳಿಗಳಿಗೆ ಅವಕಾಶ ನೀಡಿದೆ. ಚಿಕ್ಕೋಡಿಯಿಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್‌ಗೆ ಕೈ ಟಿಕೆಟ್ ಅಂತಿಮವಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸಚಿವರ ಮಕ್ಕಳಿಬ್ಬರು ಚುನಾವಣೆ ಆಖಾಡಕ್ಕಿಳಿಯುತ್ತಿರುವುದು ವಿಶೇಷ, ಸಚಿವರ ಮಕ್ಕಳಿಗೆ ಮಣೆಹಾಕಿರುವ ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸಿದೆ ಎಂಬ ಆರೋಪ ಕೇಳಿಬರುತ್ತಿದೆ.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಈ ಬಾರಿಯ ಲೋಕಸಭೆ ಚುನಾವಣೆಯನ್ನು ಗಂಭೀರ ವಾಗಿ ಪರಿಣಿಸಿದೆ. ಚುನಾವಣೆಗೆ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಕಾಂಗ್ರೆಸ್‌ಗೆ ಸವಾಲಾಗಿತ್ತು. ಮೋದಿ ಅಲೆ, ಪ್ರಭಾವಿ ಅಭ್ಯರ್ಥಿ ಎದುರಿಸಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳಿಗಾಗಿ ತೀವ್ರ ಹುಡುಕಾಟ ನಡೆಸಿತ್ತು. ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳೂ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಗೆಲ್ಲುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಕೊನೆಗೆ ಸಚಿವ ರನ್ನೇ ಕಣಕ್ಕಿಳಿಸಲು ಪಕ್ಷದ ಹೈಕಮಾಂಡ್ ಮುಂದಾ ಗಿತ್ತು. ಆದರೆ, ಸಚಿವ ಸ್ಥಾನ ಬಿಟ್ಟು ಸಂಸದರಾದರೆ ಜಿಲ್ಲೆಯಲ್ಲಿನ ರಾಜಕೀಯ ಹಿಡಿತ ಕಳೆದುಕೊ ಳ್ಳಬೇಕಾದೀತೆಂಬ ಹಿಂಜರಿಕೆಯಿಂದ ಸ್ಪರ್ಧೆಗೆ ಸ್ಪಷ್ಟವಾಗಿ ನಿರಾಕರಿಸಿದ್ದರು. ಹೀಗಾಗಿ, ಅವರ ಮಕ್ಕಳಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಸಚಿವರ ಹೆಗಲಿಗೆ ನೀಡಿದೆ.
ಜಗದೀಶ್ ಶೆಟ್ಟರ್ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!
ಬಿಜೆಪಿ ಈಗಾಗಲೇ ಚಿಕ್ಕೋಡಿ ಕ್ಷೇತ್ರದಿಂದ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆಗೆ ಟಿಕೆಟ್ ನೀಡಿದ್ದು, ಬೆಳಗಾವಿ ಕ್ಷೇತ್ರದಿಂದ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈ ಎರಡೂ ಕ್ಷೇತ್ರಗಳು ಬಿಜೆಪಿ ಭದ್ರಕೋಟೆ. ಬಿಜೆಪಿ ವಶದಲ್ಲಿ ರುವ ಈ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ತಮ್ಮ ಮಕ್ಕಳೇ ಚುನಾವಣಾ ಕಣಕ್ಕಿಳಿಯುತ್ತಿರುವುದರಿಂದ ಸಚಿವರು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಚಿಕ್ಕೋಡಿ ಕ್ಷೇತ್ರದಿಂದ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್‌ಗೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಟಿಕೆಟ್ ಘೋಷ ಣೆಗೂ ಮುನ್ನವೇ ಸಚಿವರ ಮಕ್ಕಳು ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತರ ಅಸಮಾಧಾನ: ಸಚಿವರ ಮಕ್ಕಳಿಗೆ ಟಿಕೆಟ್ ಅಂತಿಮವಾಗಿರುವು ದು ಸಾಮಾನ್ಯ ಕಾರ್ಯಕರ್ತರನ್ನು ಕೆರಳುವಂತೆ ಮಾಡಿದೆ. ಹಲವು ವರ್ಷಗಳಿಂದ ಪಕ್ಷಸಂಘಟನೆಗೆ ದುಡಿದ ಅನೇಕರು ಟಿಕೆಟ್ ಆಕಾಂಕ್ಷಿಗಳಾಗಿದ್ದರೂ ಅವಕಾಶ ನೀಡದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಪಕ್ಷ ಕಟ್ಟಲು ಮಾತ್ರ ಕಾರ್ಯಕರ್ತರು ಬೇಕು. ಆದರೆ, ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಅವಕಾಶ ನೀಡುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
Lok Sabha Election 2024: ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟ ಪಂಚಮಸಾಲಿ ನಾಯಕರು?
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಜಿಲ್ಲೆಯ ಎರಡೂ ಕ್ಷೇತ್ರಗಳ ಪೈಕಿ ಚಿಕ್ಕೋಡಿಯಲ್ಲಿ ಕುರುಬ ಸಮುದಾಯಕ್ಕೆ ಹಾಗೂ ಬೆಳಗಾವಿ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಲಾಗುವುದು ಎಂದು ಭರವಸೆ
ನೀಡಿದ್ದರು. ಆದರೆ, ಬದಲಾದ ಪರಿಸ್ಥಿತಿಯಲ್ಲಿ ಚಿಕ್ಕೋಡಿಯಿಂದ ಕಾಂಗ್ರೆಸ್ ಟಿಕೆಟ್ ಪ್ರಮುಖ ಆಕಾಂಕ್ಷಿಯಾಗಿದ್ದ ಲಕ್ಷ್ಮಣರಾವ್ ಚಿಂಗಳೆಯನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಮಾಧಾನಪಡಿಸಿ ಪುತ್ರಿ ಪ್ರಿಯಾಂಕಾಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿರುವ ಸಚಿವ ಸತೀಶ ಜಾರಕಿಹೊಳಿಗೆ ಈ ಚುನಾವಣೆ ಮಕ್ಕಳ ರಾಜಕೀಯ ಅಸ್ತಿತ್ವದ ಪ್ರಶ್ನೆ ಎದುರಾಗಿದೆ.
ಡಾ.ಸೋನವಾಲ್ಕರ್‌ಗೆ ನಿರಾಸೆ:
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಡಾ.ಗಿರೀಶ ಸೋನವಾಲ್ಕರ್‌ನ್ನು ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಸಲು ಆರಂಭದಲ್ಲಿ ಸಚಿವ ಸತೀಶ ಜಾರಕಿಹೊಳಿ ಬಯಸಿದ್ದರು. ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಸೋನವಾಲ್ಕರ್ ಈ ಬಾರಿ ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಕಾಂಗ್ರೆಸ್ ಮುಖಂಡರ ಸಭೆ ನಡೆಸಿ ಗಿರೀಶ ಸೋನವಾಲ್ಕರ್ ಕಣಕ್ಕಿಳಿಸುವ ಸಂಬಂಧ ಮಾತುಕತೆಯೂ ನಡೆದಿತ್ತು. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಗೆ ಕೈ ಟಿಕೆಟ್ ನೀಡಿದೆ. ಟಿಕೆಟ್ ಕೈತಪ್ಪಿರುವುದರಿಂದ ಸೋನವಾಲ್ಕರ್‌ಗೆ ನಿರಾಸೆಯಾಗಿದೆ. ಚುನಾವಣೆ ಆಖಾಡಕ್ಕಿಳಿಯಲಿರುವ ಸಚಿವರ ಮಕ್ಕಳನ್ನು ಮತದಾರ ಪ್ರಭುಗಳುಯಾವರೀತಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.