ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ : 20 ಶಾಸಕರಿಂದ ಸಿಎಂ ಭೇಟಿ ?

Kannadaprabha News   | Asianet News
Published : Mar 13, 2021, 09:44 AM ISTUpdated : Mar 13, 2021, 10:30 AM IST
ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ : 20 ಶಾಸಕರಿಂದ ಸಿಎಂ ಭೇಟಿ ?

ಸಾರಾಂಶ

ಸಿಡಿ ಸ್ಕ್ಯಾಂಡಲ್‌ನಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡುವ ವಿಚಾರ ಸದ್ದಾಗುತ್ತಿದೆ. ಈ ನಿಟ್ಟಿನಲ್ಲಿ ಸಚಿವರ ತಂಡವೊಂದು ಶೀಘ್ರ ಸಿಎಂ ಭೇಟಿಯಾಗಲಿದ್ದಾರೆ. 

 ಬೆಂಗಳೂರು (ಮಾ.13):  ಸಿ.ಡಿ. ವಿವಾದದಲ್ಲಿ ಸಿಲುಕಿರುವ ರಮೇಶ್‌ ಜಾರಕಿಹೊಳಿ ಅವರಿಗೇ ಮತ್ತೆ ಸಚಿವ ಸ್ಥಾನ ನೀಡಬೇಕು ಎಂಬ ಮನವಿಯನ್ನು ಮುಖ್ಯಮಂತ್ರಿಗಳ ಮುಂದೆ ಮತ್ತೊಮ್ಮೆ ಪ್ರಸ್ತಾಪಿಸಲು ಆಡಳಿತಾರೂಢ ಬಿಜೆಪಿಯಲ್ಲಿನ ಅವರ ಆಪ್ತ ಶಾಸಕರು ಸಿದ್ಧತೆ ನಡೆಸಿದ್ದಾರೆ.

ಸೋಮವಾರ ಅಥವಾ ಮಂಗಳವಾರ ಸುಮಾರು 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಮೇಶ್‌ ಜಾರಕಿಹೊಳಿ ವಿರುದ್ಧ ಸಿ.ಡಿ. ಸಂಚು ನಡೆದಿದೆ. ತಕ್ಷಣ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

HDK ಆಯ್ತು : ಜಾರಕಿಹೊಳಿ ಬೆಂಬಲಕ್ಕೆ ನಿಂತ ರೇವಣ್ಣ

ನಾಸ್ಕು ದಿನಗಳ ಹಿಂದಷ್ಟೇ ಶಾಸಕ ಮಹೇಶ್‌ ಕುಮಟಳ್ಳಿ ನೇತೃತ್ವದಲ್ಲಿ ಕೆಲವು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ತೆರಳಿ ರಮೇಶ್‌ ಜಾರಕಿಹೊಳಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಬೇಕು. ಅದಾಗದಿದ್ದರೆ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಿ ಜಲಸಂಪನ್ಮೂಲ ಖಾತೆಯನ್ನೇ ಕೊಡಬೇಕು ಎಂಬ ಮನವಿ ಮಾಡಿದ್ದರು. ಆದರೆ, ಪ್ರಕರಣದ ತನಿಖೆ ನಡೆದು ಸತ್ಯಾಸತ್ಯತೆ ಹೊರಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಯಡಿಯೂರಪ್ಪ ಅವರು ತಿಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ