ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಸಿ, ಎಸ್‌ಟಿ ಹಣ ದುರ್ಬಳಕೆ: ಸಚಿವ ಎಂ.ಬಿ.ಪಾಟೀಲ್‌

By Kannadaprabha News  |  First Published Dec 8, 2023, 12:30 AM IST

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಸಿ,ಎಸ್‌ಟಿ ಹಣವನ್ನು ಯಾವ ರೀತಿ ದುರ್ಬಳಕೆ ಮಾಡಿಕೊಂಡಿದ್ದರು ಎನ್ನುವುದರ ಬಗ್ಗೆ ಪ್ರಿಯಾಂಕ ಖರ್ಗೆ ಸವಿಸ್ತಾರವಾಗಿ ಹೇಳಿದ್ದಾರೆ. ಅವರ ಬಳಿ ಎಲ್ಲ ಮಾಹಿತಿ ಇದೆ. ಅವರ ಬಳಿ ಮಾಹಿತಿ ಪಡೆದುಕೊಳ್ಳಿ ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ರವಿಕುಮಾರ್‌ ಅವರಿಗೆ ತಿರುಗೇಟು ನೀಡಿದರು.
 


ಬೆಳಗಾವಿ (ಡಿ.08): ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಸಿ,ಎಸ್‌ಟಿ ಹಣವನ್ನು ಯಾವ ರೀತಿ ದುರ್ಬಳಕೆ ಮಾಡಿಕೊಂಡಿದ್ದರು ಎನ್ನುವುದರ ಬಗ್ಗೆ ಪ್ರಿಯಾಂಕ ಖರ್ಗೆ ಸವಿಸ್ತಾರವಾಗಿ ಹೇಳಿದ್ದಾರೆ. ಅವರ ಬಳಿ ಎಲ್ಲ ಮಾಹಿತಿ ಇದೆ. ಅವರ ಬಳಿ ಮಾಹಿತಿ ಪಡೆದುಕೊಳ್ಳಿ ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ರವಿಕುಮಾರ್‌ ಅವರಿಗೆ ತಿರುಗೇಟು ನೀಡಿದರು. ಬೆಳಗಾವಿಯ ಕೊಂಡಸಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಪಿ,ಟಿಎಸ್‌ಪಿ ಯೋಜನೆ ಜಾರಿಗೆ ತಂದಿದ್ದೆ ಕಾಂಗ್ರೆಸ್‌. ಅದಕ್ಕೂ ಮೊದಲು 7,8 ಸಾವಿರ ಕೋಟಿ ಸಿಗುತ್ತಿತ್ತು. ಯೋಜನೆ ಬಳಿ ಶೇ. 24 ರಷ್ಟು ಇರುವ ಜನರಿಗೆ ಹಣವನ್ನು ತಲುಪಿಸುವ ವಿಚಾರ ಮಾಡಿದೇವು. 

ಪ್ರತಿ ವರ್ಷ ಅದು ಹೆಚ್ಚುತ್ತ ಹೋಗುತ್ತದೆ. ಲ್ಯಾಪ್ಸ್‌ ಆಗುವುದಿಲ್ಲ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದು ಹೆಚ್ಚಾಗಲಿಲ್ಲ. ಕಡಿಮೆ ಆಗಿದೆ ಎನ್ನುವುದನ್ನು ರವಿಕುಮಾರ ಅರ್ಥ ಮಾಡಿಕೊಳ್ಳಬೇಕು. ಎಸ್‌ಸಿ, ಎಸ್‌ಟಿ ಜನರಿಗೆ ಸಹಾಯ ಮಾಡಲು ಸಿದ್ದರಾಮಯ್ಯ ಈ ಯೋಜನೆ ಜಾರಿಗೆ ತಂದರು. ನಿಮ್ಮ ಕೊಡುಗೆ ಏನು ಇಲ್ಲ. ನಿಮ್ಮ ಕೊಡುಗೆ ಏನೇ ಇದ್ದರೂ ಗೂಳಿಹಟ್ಟಿ ಶೇಖರ ಹೇಳಿದ್ದಾರೆ. ಅದು ನಿಮ್ಮ ಎಸ್ಸಿ ಎಸ್ಟಿ ಜನರ ಬಗ್ಗೆ ನಿಮಗೆ ಇರುವ ಬದ್ಧತೆ. ಗೂಳಿಹಟ್ಟಿ ಶೇಖರ್ ಹೇಳಿದ್ದಾರಲ್ಲ, ಅದು ಇವರ ಪರಿಕಲ್ಪನೆ, ಸಿದ್ಧಾಂತ. ಕೋಮುವಾದ, ಮನಸ್ಮುತಿ, ಇದೆಲ್ಲವೂ ಬಿಜೆಪಿ ಸಿದ್ದಾಂತ. ನಾವು ಕಾನೂನು ತಂದು ಶೇ. 24 ರಷ್ಟು ಜನರಿಗೆ ದುಡ್ಡು ಕೊಟ್ಟಿದ್ದೇವೆ. ಅದನ್ನು ತಿಳಿದುಕೊಂಡು ರವಿಕುಮಾರ ಮಾತನಾಡಬೇಕು ಎಂದು ಹೇಳಿದರು.

Latest Videos

undefined

ಬರ ಪರಿಹಾರಕ್ಕೆ ರೈತ ಸಂಪರ್ಕ ಕೇಂದ್ರದಲ್ಲಿ ನೊಂದಣಿ ಮಾಡಿಸಿ: ಯತೀಂದ್ರ ಸಿದ್ದರಾಮಯ್ಯ

ಮುಸ್ಲಿಂ ಅನುದಾನ ಕದನ: ಅಧಿವೇಶನದ ವೇಳೆ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ಅನುದಾನ ನೀಡುವುದಾಗಿ ಸಮಾವೇಶವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸದನದಲ್ಲಿ ತೀವ್ರ ವಾಕ್ಸಮರ ನಡೆಯಿತು. ಇದೇ ವೇಳೆ ಆಡಳಿತ ಪಕ್ಷದ ಸದಸ್ಯರ ವಿರುದ್ಧ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ‘ತಾಕತ್‌’ ಪದ ಬಳಕೆ ಮಾಡಿದ್ದು ಇನ್ನಷ್ಟು ಕೋಲಾಹಲಕ್ಕೆ ಕಾರಣವಾಯಿತು. ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಅವರ ಹೇಳಿಕೆ ಬಗ್ಗೆ ಸಚಿವರು ಸಮರ್ಥನೆ ನೀಡಿದರು. ಆದರೆ, ಇದಕ್ಕೆ ಬಗ್ಗದ ಬಿಜೆಪಿ ಸದಸ್ಯರು ಸದನದಿಂದ ಸಭಾತ್ಯಾಗ ಮಾಡಿದರು.

ಇದಕ್ಕೂ ಮುನ್ನ ಬಿಜೆಪಿ ಸದಸ್ಯ ಸುನೀಲ್‌ ಕುಮಾರ್‌ ಪ್ರಶ್ನೋತ್ತರ ಅವಧಿ ಬಳಿಕ ಮುಖ್ಯಮಂತ್ರಿಗಳ ಹೇಳಿಕೆಯನ್ನು ಪ್ರಸ್ತಾಪಿಸಿದರು. ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ಭರವಸೆಗಳನ್ನು ನೀಡಬಾರದು ಎಂದು ನಾವೇ ನಿಯಮಗಳನ್ನು ಹಾಕಿಕೊಂಡಿದ್ದೇವೆ. ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಅಧಿವೇಶನ ಸಮಯದಲ್ಲಿ ನಿಯಮ ಉಲ್ಲಂಘಿಸಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ಅನುದಾನ ನೀಡುವುದಾಗಿ ಹೇಳಿದ್ದಾರೆ ಎಂದು ಮಾಧ್ಯಮದಲ್ಲಿ ಬಂದಿದೆ. ಇದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು. ಈ ವೇಳೆ ಅಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಸಮರ್ಥಿಸಿಕೊಂಡಾಗ ಕೋಲಾಹಲ ಸೃಷ್ಟಿಯಾಯಿತು.

ಕಟ್ಟ ಕಡೆಯ ಮನುಷ್ಯನಿಗೂ, ಶ್ರೀಮಂತರಿಗೂ ಒಂದೇ ಕಾನೂನು: ಸಿಎಂ ಸಿದ್ದರಾಮಯ್ಯ

ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಮಾತನಾಡಿ, ಸದಸ್ಯರಿಗೆ ಮಾಹಿತಿ ಕೊರತೆ ಇದ್ದು, ಬಜೆಟ್‌ನಲ್ಲಿ ಈಗಾಗಲೇ ಅನುದಾನ ನೀಡಲಾಗಿದೆ. ಇದನ್ನು 10 ಸಾವಿರ ಕೋಟಿ ರು.ಗೆ ಹೆಚ್ಚಳಕ್ಕೆ ಪ್ರಯತ್ನಿಸಲಾಗುವುದು ಎಂದಿದ್ದಾರೆ. ಇದರಲ್ಲಿ ತಪ್ಪೇನಿದೆ? ಸದನದ ಸಂಪ್ರದಾಯಕ್ಕೆ ಧಕ್ಕೆಯಾಗುವ ಯಾವ ಅಂಶಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೂ ಪ್ರತಿಪಕ್ಷದ ಸದಸ್ಯರು ಗಲಾಟೆಯನ್ನು ಮುಂದುವರಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯವರಿಗೆ ಅಲ್ಪಸಂಖ್ಯಾತರ ಮೇಲೆ ದ್ವೇಷ. ಅದಕ್ಕೆ ಮುಸ್ಲಿಮರ ಅಭಿವೃದ್ಧಿಗೆ ಹಣ ನೀಡುತ್ತೇವೆ ಎಂದಾಕ್ಷಣ ಗದ್ದಲ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ್‌ ಖರ್ಗೆ ಸೇರಿದಂತೆ ಇತರರು, ಮುಖ್ಯಮಂತ್ರಿಯವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು.

click me!