'ಬಿಜೆ​ಪಿಗೆ ರಾಜ್ಯ​ದಲ್ಲಿ ಮಿಷನ್‌ 150 ಪ್ಲಸ್‌ ಗುರಿ'

By Girish Goudar  |  First Published May 17, 2022, 4:24 AM IST

*   ಬೆಳಗಾವಿ ಗ್ರಾಮೀಣ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಹೇಶ ತೆಂಗಿನಕಾಯಿ ಭವಿಷ್ಯ
*  ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ  ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ
*  ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಾಗೂ ಕೌಶಲ್ಯ ಭರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ 


ಸವದತ್ತಿ(ಮೇ.17):  ರಾಜ್ಯದಲ್ಲಿ(Karnataka) ಮಿಷನ್‌-150 ಪ್ಲಸ್‌ ಎಂಬ ಗುರಿಯೊಂದಿಗೆ ಬಿಜೆಪಿಯು ಮುಂದೆ ಸಾಗುತ್ತಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ 150ಕ್ಕೂ ಹೆಚ್ಚು ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ(Mahesh Tenginakayi) ಹೇಳಿದರು.

ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ಬಿಜಿಪಿ ಹಮ್ಮಿಕೊಂಡ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾ(Belagavi) ಪಾರ್ಲಿಮೆಂಟ್‌ನ 8 ಕ್ಷೇತ್ರದಲ್ಲಿ ಈಗ 5 ಜನ ಬಿಜೆಪಿ ಶಾಸಕರಿದ್ದು, 2023ರ ಚುನಾವಣೆಯಲ್ಲಿ 8 ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಲಿದ್ದಾರೆ ಎಂದರು.

Tap to resize

Latest Videos

ಗೋವಾದಲ್ಲಿ ಕನ್ನಡಿಗರ ದಾದಾಗಿರಿ ಪ್ರದರ್ಶನ: ತುಕಾರಾಂ ಪರಬ್ ವಿವಾದಿತ ಹೇಳಿಕೆ

ಜೂ.13ರಂದು ನಡೆಯುವ ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ವಿ.ಪ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರು ಕೆಳ ಹಂತದಿಂದ ಪ್ರತಿ ಮತದಾರರನ್ನು ಸಂಪರ್ಕಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದರು.
ಕಾಂಗ್ರೆಸ್‌ ಪಕ್ಷದ ಸುಳ್ಳಿನ ಕಂತೆಗಳನ್ನು ಡಿ.ಕೆ.ಶಿವಕುಮಾರ ಮತ್ತು ಸಿದ್ದರಾಮಯ್ಯನವರು ಬಿಚ್ಚಿಡುತ್ತಿದ್ದು, ಅನೇಕ ಆರೋಪಗಳನ್ನು ಮಾಡುತ್ತಿರುವ ಅವರ ಹತ್ತಿರ ಯಾವುದೇ ಪೂರಕ ದಾಖಲೆಗಳಿಲ್ಲ. ಎಂಟು ವರ್ಷಗಳಿಂದ ಕೇಂದ್ರ ಸರ್ಕಾರವು ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಇದು ಪಕ್ಷದ ಬಲವರ್ಧನೆಗೆ ಪುಷ್ಠಿ ನೀಡುತ್ತಿದೆ ಎಂದರು.

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ಸದ್ಯದ ವಿಧಾನ ಪರಿಷತ್‌ ಚುನಾವಣೆಯು(Vidhan Parishat Election) ಮುಂದಿನ ವಿಧಾನಸಭೆ ಚುನಾವಣೆಯ ಮುನ್ನುಡಿಯಾಗಿದ್ದು, ಪಕ್ಷದ ಕಾರ್ಯಕರ್ತರು ಸರ್ಕಾರದ ಯೋಜನೆಗಳ ಸಂಪೂರ್ಣ ಮಾಹಿತಿಯೊಂದಿಗೆ ಜನರನ್ನು ಸಂಪರ್ಕಿಸುವ ಕಾರ್ಯ ಮಾಡಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆಯ ನಂತರ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜಿಲ್ಲಾ ಕಾರ್ಯ ಕಾರಿಣಿ ಸಭೆ ನಡೆಯುತ್ತಿದ್ದು, ಜೂ.18ರಂದು ಕಿತ್ತೂರಿನಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತದೆ. ಕಳೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ಸವಾಲಾಗಿ ಸ್ವೀಕರಿಸಿ ಬರುವಂತ ಎಲ್ಲ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ವಾಯುವ್ಯ ಮತಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಹನಮಂತ ನಿರಾಣಿ ಮತ್ತು ಶಿಕ್ಷಕರ ಕ್ಷೇತ್ರ ಅರುಣ ಶಹಪುರ ಮಾತನಾಡಿ, 60 ವರ್ಷಗಳಲ್ಲಿ ಆಗದೆ ಇರುವಂತ ಕೆಲಸಗಳನ್ನು ಬಿಜೆಪಿ ಸರ್ಕಾರ 16 ವರ್ಷಗಳಲ್ಲಿ ಮಾಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯನ್ನು ತರುವುದರ ಜೊತೆಗೆ ಸಾಕಷ್ಟು ಅಭಿವೃದ್ಧಿಯನ್ನು ಮಾಡಲಾಗಿದೆ ಎಂದರು.

Belagavi: ವೈದ್ಯಕೀಯ ವಿದ್ಯಾರ್ಥಿಗಳ ಗಲಾಟೆ: 15 ವಿದ್ಯಾರ್ಥಿಗಳು ಸಸ್ಪೆಂಡ್!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಕರಿಗೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಕೊಡುಗೆಗಳನ್ನು ನೀಡುವುದರ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಾಗೂ ಕೌಶಲ್ಯ ಭರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಒಟ್ಟಿಗೆ ನಡೆಯುವ ಚುನಾವಣೆಯಲ್ಲಿ ತಮಗೆ ಮತ ಹಾಕಿಸುವ ಮೂಲಕ ಬಿಜೆಪಿ ಪಕ್ಷದ ಗೆಲುವುಗೆ ಕಾರ್ಯಕರ್ತರು ಕೈಜೋಡಿಸಬೇಕು ಎಂದು ಕೋರಿದರು.

ಸಂಸದೆ ಮಂಗಲಾ ಅಂಗಡಿ ಮಾತನಾಡಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ, ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ, ಮಾಜಿ ಶಾಸಕರಾದ ಡಾ.ವಿ.ಐ.ಪಾಟೀಲ, ಜಗದೀಶ ಮೆಟಗುಡ್ಡ, ಅರವಿಂದ ಪಾಟೀಲ, ಪ್ರಕಾಶ ಅಕ್ಕಲಕೋಟ, ಜಯಪ್ರಕಾಶ, ಲಕ್ಷ್ಮಣ ತಪಸಿ ಹಾಗೂ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಈರಣ್ಣ ಚಂದರಗಿ ಸ್ವಾಗತಿಸಿದರು. ಸಂದೀಪ ದೇಶಮುಖ ವಂದೇ ಮಾತರಂ ಹಾಡಿದರು. ಸುಭಾಸಗೌಡ ಪಾಟೀಲ ನಿರೂಪಿಸಿದರು. ಶಿವಾನಂದ ಹನಮಸಾಗರ ವಂದಿಸಿದರು.
 

click me!