ದಕ್ಷಿಣ ಭಾರತದಲ್ಲಿ ಬಿಜೆಪಿ ಗೆಲ್ಲಿಸಲು ‘ಮಿಷನ್‌ ದಕ್ಷಿಣ್‌’: ಸಿ.ಟಿ.ರವಿ

By Govindaraj SFirst Published Jul 5, 2022, 5:00 AM IST
Highlights

ದಕ್ಷಿಣ ಭಾರತದಲ್ಲಿ ‘ಮಿಷನ್‌ ದಕ್ಷಿಣ್‌’ ಮೂಲಕ ಬಿಜೆಪಿ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಸ್ವಂತಬಲದ ಮೇಲೆ ಅಧಿಕಾರಕ್ಕೆ ತರುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಬೆಂಗಳೂರು (ಜು.05): ದಕ್ಷಿಣ ಭಾರತದಲ್ಲಿ ‘ಮಿಷನ್‌ ದಕ್ಷಿಣ್‌’ ಮೂಲಕ ಬಿಜೆಪಿ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಸ್ವಂತಬಲದ ಮೇಲೆ ಅಧಿಕಾರಕ್ಕೆ ತರುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಸೋಮವಾರ ನಗರದ ಸರ್ಕಾರಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ 20 ವರ್ಷಗಳ ನಂತರ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖಂಡರು ಭಾಗಿಯಾಗಿದ್ದರು. 

ಎರಡು ದಿನಗಳ ಕಾಲ ಸುದೀರ್ಘ ಚರ್ಚೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಸಭೆಯಲ್ಲಿ ಭಾಗಿಯಾಗಿ ಮಾರ್ಗದರ್ಶನ ಮಾಡಿದ್ದಾರೆ. ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ಬೆಳವಣಿಗೆಗೆ ಸಕಾರಾತ್ಮಕ ವಾತಾವರಣ ಇದೆ. ಕರ್ನಾಟಕದ ನಂತರ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದು ಉಪಚುನಾವಣೆಯಲ್ಲಿ ಸ್ಪಷ್ಟವಾಗಿದೆ. ಕರ್ನಾಟಕದ ಜತೆಗೆ ತೆಲಂಗಾಣ ಸಹ ಬಿಜೆಪಿ ಮಡಿಲಿಗೆ ಬೀಳುವುದು ಸ್ಪಷ್ಟಎಂದು ವಿಶ್ವಾಸ ವ್ಯಕ್ತಪಡಿಸಿದರು. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ‘ಮಿಷನ್‌ ದಕ್ಷಿಣ್‌’ ಮೂಲಕ ಬಿಜೆಪಿ ಸಂಘಟನೆಗೆ ಕ್ರಮ ಕೈಗೊಳ್ಳಲಾಗುವುದು. 

ದತ್ತಪೀಠದ ವಿವಾದ: ಸುದೀರ್ಘ ಹೋರಾಟಕ್ಕೆ ಸಿಕ್ಕ ಗೆಲುವು, ಸಿ.ಟಿ.ರವಿ

ಪಕ್ಷದ ಬಲವರ್ಧನೆಗೆ ಮಿಷನ್‌ ದಕ್ಷಿಣ್‌ ಕಾರ್ಯತಂತ್ರವನ್ನು ಪ್ರಯೋಗ ಮಾಡಲಾಗುತ್ತದೆ. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಪಕ್ಷವನ್ನು ದಕ್ಷಿಣ ಭಾರತದಲ್ಲಿ ಬಲಗೊಳಿಸುವುದರ ಜತೆಗೆ ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ತರುವ ತೀರ್ಮಾನ ಕೈಗೊಳ್ಳಲಾಗಿದೆ. ತಮಿಳುನಾಡಿನಲ್ಲಿ ಬಿಜೆಪಿ ಬೆಳವಣಿಗೆ ಆಶಾದಾಯಕವಾಗಿದೆ. ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಹೆಚ್ಚು ಪರಿಶ್ರಮದ ಅಗತ್ಯ ಇದೆ. ಮಿಷನ್‌ ದಕ್ಷಿಣ್‌ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕಿದೆ. ದೇಶದ ಉದ್ದಗಲಕ್ಕೂ ಬಡವರು, ದಲಿತರು, ಮಹಿಳೆಯರಿಗೆ ನ್ಯಾಯ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೆಲಸ ಮಾಡಿದೆ. 

ಸುಳ್ಳು, ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖ: ಸಿ.ಟಿ.ರವಿ

ಇದರ ಲಾಭಾರ್ಥಿಗಳನ್ನು ಪಕ್ಷದಲ್ಲಿ ಜೋಡಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲ. ಅದರ ವಿರುದ್ಧ ಧ್ವನಿ ಎತ್ತಿದವರಿಗೆ ಮೂಲೆ ಸೇರಿಸುವ ಕೆಲಸ ಮಾಡಿದ್ದಾರೆ. ಹಲವು ಪಕ್ಷದಲ್ಲಿಯೂ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಆದರೆ, ಬಿಜೆಪಿ ಆಂತರಿಕ ಪ್ರಜಾಪ್ರಭುತ್ವಕ್ಕೆ ಬೆಲೆ ಕೊಡುವ ಕೆಲಸ ಮಾಡಿದೆ. ದೇಶದಲ್ಲಿ ಧ್ರುವೀಕರಣ ರಾಜಕಾರಣ ಇದೆ. ಪರಿವಾರ ವಾದದ ಮೂಸೆಯಿಂದ ಕುಟುಂಬದ ಹೆಸರು ಹೇಳಿಕೊಂಡು ನಾಯಕತ್ವದ ಲೇಬಲ್‌ ಅಂಟಿಸಿಕೊಂಡು ಪರಿತಪಿಸುವ ರಾಜಕಾರಣ ಇದೆ. ಬಿಜೆಪಿ ಬೆಳವಣಿಗೆ ಕೆಲವರನ್ನು ಕಂಗೆಡಿಸಿದೆ ಎಂದು ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು.

click me!