ಸರ್ಕಾರದಿಂದ ರಾಜಕೀಯಕ್ಕಾಗಿ ಎಸಿಬಿ ದುರ್ಬಳಕೆ: ರಾಮಲಿಂಗಾರೆಡ್ಡಿ

Published : Jul 08, 2022, 03:00 AM IST
ಸರ್ಕಾರದಿಂದ ರಾಜಕೀಯಕ್ಕಾಗಿ ಎಸಿಬಿ ದುರ್ಬಳಕೆ: ರಾಮಲಿಂಗಾರೆಡ್ಡಿ

ಸಾರಾಂಶ

*  ನಾನು ಹಾಗೂ ಪ್ರಿಯಾಂಕ ಖರ್ಗೆ ಮೊದಲು ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ ಮಾತನಾಡಿದ್ದೆವು.  *  ಆಗ ಅಕ್ರಮವೇ ನಡೆದಿಲ್ಲ ಎನ್ನುತ್ತಿದ್ದವರು ಈಗ ಕಾಂಗ್ರೆಸ್‌ ವಿರುದ್ಧ ಆರೋಪ ಮಾಡುತ್ತಿದ್ದಾರೆ *  ಎಸಿಬಿಯನ್ನೂ ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ 

ಬೆಂಗಳೂರು(ಜು.08): ರಾಜ್ಯ ಸರ್ಕಾರವು ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು ನಮಗೊಂದು ನ್ಯಾಯ ಬಿಜೆಪಿಯವರಿಗೆ ಒಂದು ನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ.

ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ನಿವಾಸದ ಮೇಲಿನ ಎಸಿಬಿ ದಾಳಿ ಬಗ್ಗೆ ಮಾತನಾಡಿದ ಅವರು, ವಿಧಾನಸಭೆ ಸಭಾಧ್ಯಕ್ಷರ ಅನುಮತಿ ಇಲ್ಲದೆ ದಾಳಿ ಆಗಿದೆ. ಬಿಜೆಪಿಗರ ಮೇಲೆ ದಾಳಿ ಮಾಡಲು ಮಾತ್ರ ವಿಧಾನಸಭೆ ಸಭಾಧ್ಯಕ್ಷರ ಅನುಮತಿ ಕೇಳಿದ್ದಾರೆ. ನಮಗೊಂದು ನ್ಯಾಯ ಹಾಗೂ ಬಿಜೆಪಿಗೊಂದು ನ್ಯಾಯ ಅನುಸರಿಸಲಾಗುತ್ತಿದೆ. ಎಸಿಬಿಯನ್ನೂ ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಹೇಳಿದರು.

ಸ್ಟಾರ್ಟ್‌ ಅಪ್‌ ಸಿಟಿ ಆಗಿದ್ದ ಬೆಂಗಳೂರು ಈಗ ಶಟ್‌ಡೌನ್‌ ಸಿಟಿ: ರಾಮಲಿಂಗಾರೆಡ್ಡಿ

ಪಿಎಸ್‌ಐ ಹಗರಣದ ಬಗ್ಗೆ ಮಾತನಾಡಿದ ಅವರು, ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಬಯಲಿಗೆ ಬಂದ ಬಳಿಕ ಹಿಂದಿನ ಸರ್ಕಾರದಲ್ಲೂ ಅಕ್ರಮ ನಡೆದಿತ್ತು ಎನ್ನುತ್ತಿದ್ದಾರೆ. ಆಗ ಅಕ್ರಮ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಬೇಕಿತ್ತು. ನಾನು ಹಾಗೂ ಪ್ರಿಯಾಂಕ ಖರ್ಗೆ ಮೊದಲು ಪಿಎಸ್‌ಐ ನೇಮಕಾತಿ ಅಕ್ರಮದ ಬಗ್ಗೆ ಮಾತನಾಡಿದ್ದೆವು. ಆಗ ಅಕ್ರಮವೇ ನಡೆದಿಲ್ಲ ಎನ್ನುತ್ತಿದ್ದವರು ಈಗ ಕಾಂಗ್ರೆಸ್‌ ವಿರುದ್ಧ ಆರೋಪ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌