ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ: ಶಾಸಕ ಅರವಿಂದ ಬೆಲ್ಲದ

Published : Dec 12, 2024, 12:42 PM IST
ಶಾಂತಿಯುತ ಮೀಸಲಾತಿ ಹೋರಾಟ ರಣರಂಗವಾಗಿಸಿದ ಕಾಂಗ್ರೆಸ್ ಸರ್ಕಾರ: ಶಾಸಕ ಅರವಿಂದ ಬೆಲ್ಲದ

ಸಾರಾಂಶ

ಬೆಳಗಾವಿಯ ಸುವರ್ಣಸೌಧದ ಎದುರಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿದ್ದ ಶಾಂತಿಯುತ ಹೋರಾಟದ ಕಣವನ್ನು ಕಾಂಗ್ರೆಸ್ ಸರ್ಕಾರ ರಣರಂಗವಾಗಿಸಿದೆ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು. 

ಹುಬ್ಬಳ್ಳಿ (ಡಿ.12): ಬೆಳಗಾವಿಯ ಸುವರ್ಣಸೌಧದ ಎದುರಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿದ್ದ ಶಾಂತಿಯುತ ಹೋರಾಟದ ಕಣವನ್ನು ಕಾಂಗ್ರೆಸ್ ಸರ್ಕಾರ ರಣರಂಗವಾಗಿಸಿದೆ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಾವು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲೇ ಸರ್ಕಾರವು ನಮ್ಮ ಹೋರಾಟವನ್ನು ಹತ್ತಿಕ್ಕಲು ಏಕಾಏಕಿ ಲಾಠಿಚಾರ್ಜ್‌ ನಡೆಸಿರುವುದು ಪ್ರಜಾತಂತ್ರದ ಕಗ್ಗೊಲೆ. 

ಹೋರಾಟಗಾರರ ಮೇಲೆ ಬಿದ್ದ ಲಾಠಿ ಏಟು ಇಡೀ ಲಿಂಗಾಯತ ಸಮುದಾಯದ ಆತ್ಮಸಾಕ್ಷಿ ಹಾಗೂ ಸ್ವಾಭಿಮಾನಕ್ಕೆ ಕಾಂಗ್ರೆಸ್ ಸರ್ಕಾರ ಕೊಟ್ಟ ಕೊಡಲಿಪೆಟ್ಟು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ 34 ಜನ ಲಿಂಗಾಯತ ಶಾಸಕರಿದ್ದರೂ ಈ ದಮನಕಾರಿಯ ನೀತಿಯ ವಿರುದ್ಧ ಒಬ್ಬರು ಕನಿಷ್ಠ‌ ವಿಷಾದವನ್ನೂ ವ್ಯಕ್ತಪಡಿಸಿಲ್ಲ. ಇವರೆಲ್ಲ ಮುಂದೆ ಯಾವ ಮುಖ ಹೊತ್ತು ಲಿಂಗಾಯತ ಸಮಾಜದ ಮುಂದೆ ಹೋಗಿ, ಕಾಂಗ್ರೆಸ್ ಪರ ಮತ ಕೇಳುತ್ತಾರೆ?. ಸಮುದಾಯದ ಬೆಂಬಲದಿಂದಲೇ ಇಂದು ಅಧಿಕಾರ ಅನುಭವಿಸುತ್ತಿರುವವರು, ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿಯೇ ಮುಖ್ಯ ಎಂಬುದನ್ನು ಮರೆಯಬಾರದು ಎಂದ ತಿಳಿಸಿದ್ದಾರೆ.

ಹಲ್ಲೆಗೆ ಖಂಡನೆ: ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ಜನತೆ, ರೈತರ ಮೇಲೆ ಲಾಟಿ ಪ್ರಹಾರ ಮಾಡಿ ಹೊಡೆದು, ಹಲ್ಲೆ ಮಾಡಿ, ಗಾಯಗೊಳಿಸಲಾಗಿದೆ. ಅಲ್ಲದೆ ನೇತ್ರತ್ವ ವಹಿಸಿದ್ದ ಶ್ರೀಗಳನ್ನು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಸಿ.ಪಾಟೀಲ, ಅರವಿಂದ ಬೆಲ್ಲದ, ಈರಣ್ಣ ಕಾಡಾಡಿ ಹಾಗೂ ಪ್ರಮುಖರನ್ನು ಬಂಧಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದ ಕ್ರಮವನ್ನು ಸ್ವಾಮಿ ವಿವೇಕಾನಂದ ಸೇನೆ ತೀವ್ರವಾಗಿ ಖಂಡಿಸಿದೆ.

ಇಷ್ಟು ದಿನ ಸಹಿಸಿಕೊಂಡೆ, ಇನ್ನು ಮುಂದೆ ಇಂತಹ ಕೆಟ್ಟ ವರದಿಗಳನ್ನು ಸಹಿಸಲ್ಲ: ನಟಿ ಸಾಯಿ ಪಲ್ಲವಿ

ಈ ಹೋರಾಟ ಕೇವಲ ಪಂಚಮಸಾಲಿ ಮೀಸಲಾತಿಗೆ ಮಾತ್ರವಲ್ಲ, ಅನೇಕ ಹಿಂದುಳಿದ ವರ್ಗದ ಜನರಿಗೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತಿರುವ ಪ್ರತಿಭಟನಾಕಾರರನ್ನು ಹೊಡೆದು, ಅವಮಾನಿಸಿ, ಬಂಧಿಸಿದ್ದು ಅಕ್ಷಮ್ಯ ಅಪರಾಧ. ಬೆಳಗಾವಿಯಯಲ್ಲಿ ಲಕ್ಷಾಂತರ ಜನರು ಸೇರಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿಗಳು ಏಕೆ ಬರಲಿಲ್ಲ?. ಮುಖ್ಯಮಂತ್ರಿಗಳು ಬಂದು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಭರವಸೆ ನೀಡಿದ್ದರೆ ಲಾಠಿ ಬೀಸುವುದನ್ನು ತಪ್ಪಿಸಬಹುದಿತ್ತು. ಕಾಂಗ್ರೆಸ್ ಸರ್ಕಾರದ ಇಂದಿನ ನಡೆ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ ಎಂದು ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಕಿಡಿಕಾರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ
ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ