
ಬೆಂಗಳೂರು : ಕೆಲ ವಿಚಾರಗಳಿಗಾಗಿ ಬೇಸರಗೊಂಡು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಹುದ್ದೆ ಕಲ್ಪಿಸಿದ್ದಾರೆ.
ರಾಜ್ಯದ ನೀತಿ ಆಯೋಗ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್.ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಮಾಡಲಾಗಿದೆ. ಈ ಮೂಲಕ ನೊಂದ ಆಪ್ತ ವಲಯದ ಶಾಸಕನಿಗೆ ಸಿದ್ದರಾಮಯ್ಯ ಉತ್ತಮ ಸ್ಥಾನಮಾನ ನೀಡಿ ಮನವೊಲಿಕೆ ಪ್ರಯತ್ನ ಮಾಡಿದ್ದಾರೆ.
ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗುತ್ತಿಲ್ಲ ಮತ್ತು ಸಚಿವರು ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕಾಗಿ ಬಿ.ಆರ್.ಪಾಟೀಲ್ ಅಸಮಾಧಾನಗೊಂಡಿದ್ದರು. ಆದರೆ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ಕೊಟ್ಟ ಕಾರಣ ಏನೆಂಬುದರ ಕುರಿತು ಸ್ಪಷ್ಟನೆ ಕೊಟ್ಟಿರಲಿಲ್ಲ.
- ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಆಳಂದ ಶಾಸಕ ಬಿ.ಆರ್.ಪಾಟೀಲ್
- ಕೆಲ ವಿಚಾರಗಳಿಗೆ ಬೇಸರಗೊಂಡು ಸಿಎಂ ರಾಜಕೀಯ ಸಲಹೆಗಾರ ಹುದ್ದೆ ತ್ಯಜಿಸಿದ್ದರು
- ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ದೂರಿದ್ದರು
- ಇದೀಗ ಪಾಟೀಲ ನೀತಿ ಆಯೋಗ, ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆ ನೀಡಿದ ಸಿಎಂ
- ನೊಂದ ಶಾಸಕನಿಗೆ ಉತ್ತಮ ಸ್ಥಾನಮಾನ ನೀಡಿ ಮನವೊಲಿಸಲು ಯತ್ನಿಸಿದ ಮುಖ್ಯಮಂತ್ರಿ
ಸಿದ್ದರಾಮಯ್ಯಗೆ ಗುಡ್‌ಬೈ ಹೇಳಿದ ಹಿರಿಯ ಶಾಸಕ ಬಿ.ಆರ್. ಪಾಟೀಲ್; ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ!
‘ಯಾರು ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ, ನಾನಂತೂ ಕ್ಷಮೆ ಕೇಳಿಲ್ಲ’: ಶಾಸಕ ಬಿ.ಆರ್. ಪಾಟೀಲ್ ಗರಂ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.