ದೆಹಲಿಯಿಂದ ಹೈಕಮಾಂಡ್ ನವರು ಬುಧವಾರ ನನಗೆ ಕರೆ ಮಾಡಿ, ತಕ್ಷಣ ಹೊರಟು ಬನ್ನಿ ಎಂದಿದ್ದರು. ಆದರೆ, ನಾನು ಒಬ್ಬನೇ ಬರೋದಿಲ್ಲ, ನನ್ನ ಟೀಮ್ ಸಹಿತ ಬರುವೆ ಎಂದು ಉತ್ತರಿಸಿದ್ದೇನೆ ಎಂದು ತಿಳಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್
ಬೆಂಗಳೂರು(ನ.29): ರಾಜ್ಯ ನಾಯಕರು ಸರಿ ಮಾಡಲು ಸಾಧ್ಯವಿಲ್ಲದಂಥ ಪರಿಸ್ಥಿತಿ ಈಗ ಬಿಜೆಪಿಯಲ್ಲಿದೆ. ತಕ್ಷಣ ವರಿಷ್ಠರು ಮಧ್ಯೆ ಪ್ರವೇಶಿಸಿ ಸರಿಪಡಿಸದಿದ್ದರೆ ಪಕ್ಷಕ್ಕೆ ದೊಡ್ಡ ಏಟು ಬೀಳಲಿದೆ' ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತೀಕ್ಷ್ಮವಾಗಿ ಹೇಳಿದ್ದಾರೆ.
ಎರಡೂ ಬಣಗಳು ಬೀದಿಗೆ ಹೋಗಿ ಕೈ ಕೈ ಮಿಲಾಯಿಸಿಕೊಳ್ಳುವ ಬದಲು ವಿಮಾನ ಹತ್ತಿ ದೆಹಲಿಗೆ ಹೋಗಿ ವರಿಷ್ಠರ ಬಳಿ ಮಾತನಾಡಲಿ ಎಂದೂ ತಾಕೀತು ಮಾಡಿದ್ದಾರೆ. ಎರೆಹುಳುಗಳು ನಾಗರಹಾವುಗಳಾಗಿ ಪರಿ ವರ್ತನೆಯಾದ ರೀತಿಯಲ್ಲಿ ಇವತ್ತು ಬಿಜೆಪಿಯಲ್ಲಿ ಹಲವು ನಾಯಕರು ತಮ್ಮ ಶಕ್ತಿ ಇಲ್ಲದಿದ್ದರೂ ಪಕ್ಷಕ್ಕೆ ಧಕ್ಕೆ ಬರುವಂಥ ವಿದ್ಯಮಾನಗಳನ್ನು ನಡೆಸುತ್ತಿರುವುದು ಸರಿಯಲ್ಲ ಎಂದೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಸ್ತಿನ ಪ್ರಯೋಗ ಆಗಲೇಬೇಕು. ಅಂದರೆ ಮಾತ್ರ ಪರಿಸ್ಥಿತಿ ಸರಿಯಾಗಲಿದೆ. ಒಂದಿಬ್ಬರ ವಿರುದ್ಧ ಶಿಸ್ತು ಕ್ರಮ ಕೈಗೊಂಡರೆ ಉಳಿದವರು ಸರಿದಾರಿಗೆ ಬರಲಿದ್ದಾರೆ. ವರಿಷ್ಠರು ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.
undefined
ಭಿನ್ನರಿಗೆ ಯಡಿಯೂರಪ್ಪ ವಾರ್ನಿಂಗ್: ಯತ್ನಾಳ್ ಟೀಂ ವಿರುದ್ಧ ಬಿಎಸ್‌ವೈ ಕಿಡಿ
ಹಿಂದೆ ಇಂಥ ಪರಿಸ್ಥಿತಿ ಉದ್ಭವಿಸಿದ ವೇಳೆ ನಮ್ಮ ಮಾತೃಸಂಸ್ಥೆಯಾದ ಸಂಘದನಾಯಕರು ಮಧ್ಯ ಪ್ರವೇಶ ಮಾಡಿ ಸರಿಪಡಿಸುತ್ತಿದ್ದರು. ಆದರೆ, ಇತ್ತೀಚಿಗೆ ಈ ಕೆಲಸ ಆಗುತ್ತಿಲ್ಲ. ಪಕ್ಷದ ವರಿಷ್ಠರು ಇದನ್ನು ಹತೋಟಿಗೆ ತರುವ ಕೆಲಸ ಮಾಡಬೇಕು ಎಂದು ಪ್ರತಿಪಾದಿಸಿದರು.
ಆಗ ಹೀಗಾಗಿರಲಿಲ್ಲ: ನಾನು ಹಿಂದೆ ರಾಜ್ಯಾಧ್ಯಕ್ಷ ಹುದ್ದೆಯಲ್ಲಿದ್ದಾಗಇದಕ್ಕಿಂತ ದೊಡ್ಡಬಣ ರಾಜಕೀಯವನ್ನು ಎದುರಿಸಿದ್ದೇನೆ. ಒಂದು ಯಡಿಯೂರಪ್ಪ ಬಣ. ಮತ್ತೊಂದು ಅನಂತಕುಮಾರ್ ಬಣ. ಆದರೆ, ಆ ಸಂದರ್ಭದಲ್ಲಿ ಯಾವುದೇ ಸವಾಲುಗಳು ಬಂದಾಗ ಒಗ್ಗಟ್ಟು ಪ್ರದರ್ಶಿಸುತ್ತಿದ್ದರು. ಈ ರೀತಿ ಬೀದಿಗೆ ಇಳಿಯುವ ಪರಿಸ್ಥಿತಿ ಬಂದಿರಲಿಲ್ಲ ಎಂದರು. ಪಕ್ಷದ ಕಾರ್ಯಕ್ರಮಗಳಿಗೆ, ಕೆಲಸಗಳಿಗೆ ನಾವೆಲ್ಲ ಸಹಕಾರಿಯಾಗಿ ಕೆಲಸ ಮಾಡಬೇಕು. ಎರೆ ಹುಳು ಎರೆಹುಳುವಾಗಿ ಮಣ್ಣಿನ ಗುಣಮಟ್ಟ ಹೆಚ್ಚಿಸುವ ಕೆಲಸ ಮಾಡಬೇಕು. ನಾಗರಹಾವು ಆಗಬಾರದು. ಮಾಧ್ಯಮಗಳಲ್ಲೇ ದೊಡ್ಡವರಾ ಗಬೇಕು, ಮಾಧ್ಯಮಗಳಲ್ಲೇ ನಾಯಕರಾಗಬೇಕು ಎಂಬ ಧೋರಣೆ ಪಕ್ಷದಲ್ಲಿ ಹೆಚ್ಚುತ್ತಿರ ದೊಡ್ಡ ಕೊಚ್ಚೆಯಂಥ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷ ಇರುವಾಗ ನಾವು ನಮ್ಮೊಳಗೆ ಕಿತ್ತಾಟ ಮಾಡಿಕೊಂಡರೆ ಪಕ್ಷ ದಯನೀಯ ಸ್ಥಿತಿಗೆ ತಲುಪಲಿದೆ. ಇದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ಗೌಡರು ಮಾರ್ಮಿಕವಾಗಿ ಹೇಳಿದರು.
ಜವಾಬ್ದಾರಿ ಇದ್ದವರೇ ಪಕ್ಷಕ್ಕೆ ಇರಿಸು ಮುರಿಸಾಗುವಂಥ ಬೆಳವಣಿಗೆಗೆ ಕಾರಣವಾಗುತ್ತಿರುವ ಈ ವೇಳೆ ವರಿಷ್ಠರು ಸಮ್ಮನೆ ಕುಳಿತುಕೊಳ್ಳಬಾರದು. ತಕ್ಷಣ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ದಿಲ್ಲಿ ಕರೆ ಬಂದಿತ್ತು, ಒಬ್ಬೇ ಬರೋಲ್ಲ ಅಂದೆ: ಯತ್ನಾಳ್
ವಿಜಯಪುರ 'ದೆಹಲಿಯಿಂದ ಹೈಕಮಾಂಡ್ ನವರು ಬುಧವಾರ ನನಗೆ ಕರೆ ಮಾಡಿ, ತಕ್ಷಣ ಹೊರಟು ಬನ್ನಿ ಎಂದಿದ್ದರು. ಆದರೆ, ನಾನು ಒಬ್ಬನೇ ಬರೋದಿಲ್ಲ, ನನ್ನ ಟೀಮ್ ಸಹಿತ ಬರುವೆ ಎಂದು ಉತ್ತರಿಸಿದ್ದೇನೆ' ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, 'ನಾನು ಒಬ್ಬನೇ ಬರಲು ಸಾಧ್ಯವಿಲ್ಲ. ಬರುವುದಿದ್ದರೆ ಟೀಮ್ ಸಹಿತ ಬರುತ್ತೇನೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ವಕ್ಸ್‌ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಎಲ್ಲರ ನ್ಯೂ ದೆಹಲಿಗೆ ಕರೆಯಿರಿ, ಆಗ ಬಂದು ಕರ್ನಾಟಕದಲ್ಲಿ ಏನು ನಡೆದಿದೆ ಎಂದು ಹೇಳುತ್ತೇವೆ. ಒಬ್ಬರನ್ನು ಕರೆದು ಸಮಾಧಾನ ಮಾ ಡಲು ಆಗುವುದಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ, ಕ್ಷಮಾಪಣೆ ಕೇಳುವುದಿಲ್ಲ. ನಾನಾಡಿದ ಒಂದು ಶಬ್ದವನ್ನೂ ವಾಪಸ್ ತೆಗೆದು ಕೊಳ್ಳುವುದಿಲ್ಲ ಎಂದು ತಿಳಿಸಿದ್ದೇನೆ' ಎಂದು ಹೇಳಿದರು.
ಕಾಂಗ್ರೆಸ್ ಜೊತೆಗೆ ಯತ್ನಾಳ ಕೈ ಜೋಡಿಸಿದ್ದಾರೆ ಎಂದಿದ್ದ ಬಿ.ಸಿ.ಪಾಟೀಲ್ ವಿರುದ್ಧವೂ ವಾಗ್ದಾಳಿ ನಡೆಸಿದ ಯತ್ನಾಳ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವಂತಹ ಕೀಳು ಕೆಲಸವನ್ನು ನಾವು ಮಾಡಲ್ಲ, ರಾಜ್ಯಾಧ್ಯಕ್ಷರು ಹೋಗಿ ಡಿಕೆಶಿ ಬಳಿ 20 ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ. ಆ ವಿಡಿಯೋಗಳು ನನ್ನ ಬಳಿ ಇವೆ. ನಾವು ಕಾಂಗ್ರೆಸ್ ಜೊತೆಗೆ ಕೈ ಜೋಡಿಸುವ ಕೆಲಸ ಮಾಡಲ್ಲ. ಪಕ್ಷಕ್ಕೆ ದ್ರೋಹ ಮಾಡಲ್ಲ. ಹೆತ್ತತಾಯಿಗೆ ದ್ರೋಹ ಬಗೆಯಲ್ಲ ಎಂದರು.
ಕೋರ್ ಕಮಿಟಿಯಲ್ಲಿ ತಮ್ಮ ವಿರುದ್ಧ ದೂರು ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ದೂರು ಕೊಡಲಿ ಬಿಡಿ. ದೂರು ಕೊಡಲು ನಾನೇ ಹೇಳಿದ್ದೇನೆ. ನಾನು ಯಾರಿಗೂ, ಯಾರ ದೂರಿಗೂ ಹೆದರುವುದಿಲ್ಲ. ಯತ್ನಾಳರನ್ನು ಮುಟ್ಟೋದು ಅಷ್ಟು ಸಲೀಸಲ್ಲ. ನನ್ನ ಜೊತೆಗೆ ರಾಜ್ಯದ ಜನರಿದ್ದಾರೆ. ನನ್ನ ಜೊತೆಗೆ ದೆಹಲಿ ನಾಯಕರಿದ್ದಾರೆ ಎಂದು ಹೇಳಿದರು.
ಅನುಮತಿ ರಹಿತ ಪ್ರವಾಸ: ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೆಹಲಿಗೆ ದೂರು
ಇದೇ ವೇಳೆ, ತಮ್ಮ ವಿರುದ್ಧ ಸದಾನಂದಗೌಡರು ನಡೆಸಿದ ವಾಗ್ದಾಳಿಗೆ ತಿರುಗೇಟು ನೀಡಿದ ಯತ್ನಾಳರು, ಸದಾನಂದಗೌಡ ಬಾಯಿ ಮುಚ್ಚಿಕೊಂಡಿರಬೇಕು. ಇಲ್ಲದಿ ದ್ದರೆ, ಯಡಿಯೂರಪ್ಪ ಕುಟುಂಬದ ವಿರುದ್ದ ಅವರು ಮಾತನಾಡಿರುವುದನ್ನೆಲ್ಲ ಬಿಚ್ಚಿಡುತ್ತೇನೆ. ಯಡಿಯೂರಪ್ಪ ಕುಟುಂಬದ ವಿರುದ್ದ ನನಗಿಂತ ಕೆಟ್ಟದಾಗಿ ಸದಾನಂದಗೌಡ ಮಾತನಾಡಿದ್ದಾರೆ. ಇಲ್ಲ ಅನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸವಾಲೆಸೆದರು. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಅದಕ್ಕೇಕೆ ಸದಾನಂದಗೌಡರು ಗಾಬರಿಯಾಗಬೇಕು? ಸದಾನಂದಗೌಡರೇ, ನೀವು ಗಾಬರಿಯಾಗಬೇಡಿ ಎಂದು ಮೂದಲಿಸಿದರು. ಸುಮ್ಮನಿರದಿದ್ದರೆ ಡಿವಿಎಸ್ ಬಣ್ಣ ಬಯಲು ಮಾಡುತ್ತೇನೆ. ನನ್ನ ವಿರುದ್ಧ ಮಾತನಾಡಿದವರ ಬಣ್ಣ ಬಯಲು ಮಾಡುವುದು ಖಂಡಿತ ಎಂದರು.
ದೀಪ ಆರುವವರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಅವರ ದೀಪ ಈಗಾಗಲೇ ಆರಿಹೋಗಿದೆ. ನಾನು ಯಾರು ಜೊತೆಗೂ ಅಡಸ್ಟ್‌ಮೆಂಟ್ ಮಾಡಿಕೊಂಡಿಲ್ಲ. 'ನಿನಗೂ, ನಿನ್ನ ನಾಲಿಗೆಗೂ ಎತ್ತ ಸಂಬಂಧವಯ್ಯ' ಇದು ಬಸವ ವಚನ ಎಂದು. ಸದಾನಂದಗೌಡರ ಬಗ್ಗೆ ವ್ಯಂಗ್ಯವಾಡಿದರು.