ಡಿಕೆಶಿಗೆ ಧಮ್‌ ಇದ್ದರೆ ಮೀಸಲಾತಿ ತೆಗೆಯುತ್ತೇವೆ ಎನ್ನಲಿ: ಬಸನಗೌಡ ಪಾಟೀಲ ಯತ್ನಾಳ್‌

By Kannadaprabha News  |  First Published Mar 31, 2023, 4:40 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ತಾಕತ್‌ ಇದ್ದರೆ, ಧಮ್‌ ಇದ್ದರೆ ಈಗ ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಿರುವ ಮೀಸಲಾತಿ ಕಿತ್ತು ಹಾಕುತ್ತೇವೆ ಎಂಬುದಾಗಿ ಮತ್ತೊಮ್ಮೆ ಹೇಳಲಿ ನೋಡೋಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸವಾಲು ಹಾಕಿದ್ದಾರೆ. 


ಬೆಂಗಳೂರು (ಮಾ.31): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ತಾಕತ್‌ ಇದ್ದರೆ, ಧಮ್‌ ಇದ್ದರೆ ಈಗ ಲಿಂಗಾಯತರು ಮತ್ತು ಒಕ್ಕಲಿಗರಿಗೆ ನೀಡಿರುವ ಮೀಸಲಾತಿ ಕಿತ್ತು ಹಾಕುತ್ತೇವೆ ಎಂಬುದಾಗಿ ಮತ್ತೊಮ್ಮೆ ಹೇಳಲಿ ನೋಡೋಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿಗಳ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೀಸಲಾತಿ ಕಿತ್ತು ಹಾಕುವ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಮೀಸಲಾತಿ ಕಿತ್ತುಹಾಕಿದರೆ ಕಾಂಗ್ರೆಸ್‌ ಅನ್ನು ಜನ ಮೂಲೆಗುಂಪು ಮಾಡಿ ಸರ್ವನಾಶ ಮಾಡುತ್ತಾರೆ. ಈ ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರು ದೊಡ್ಡ ಶಕ್ತಿ. ಡಿ.ಕೆ.ಶಿವಕುಮಾರ್‌ ತಮ್ಮ ಬ್ರದ​ರ್‍ಸ್ಗಾಗಿ ಈ ಹೇಳಿಕೆ ನೀಡಿದ್ದಾರೆ. ಈ ರೀತಿ ಮಾಡಿದರೆ ಅವರ ಸಮುದಾಯವೇ ಅವರಿಗೆ ಮತ ಹಾಕುವುದಿಲ್ಲ. 

ಅವರು ಮೆಕ್ಕಾ-ಮದೀನಾಕ್ಕೆ ಹೋಗಬೇಕಾಗುತ್ತದೆ ಎಂದರು. ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐತಿಹಾಸಿಕ ನಿರ್ಧಾರ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದಿಸುತ್ತೇವೆ. ಪ್ರವರ್ಗ 2ಎಗೆ ಹೋಗಿದ್ದರೆ ಉಳಿದ ಸಮುದಾಯಕ್ಕೆ ಅನ್ಯಾಯವಾಗುತ್ತಿತ್ತು. ಇಂದು ರಾಮಜನ್ಮ ದಿನ. ಇಂದು ನಮಗೆ ನ್ಯಾಯ ಸಿಕ್ಕಿದೆ ಎಂದು ಶಾಸಕ ಯತ್ನಾಳ್‌ ಸಂತಸ ವ್ಯಕ್ತಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Tap to resize

Latest Videos

ಬೊಂಬ್ಡಾ ಬಡಿದರೂ ಜೆಡಿಎಸ್‌ ಅಧಿಕಾರಕ್ಕೆ ಬರಲ್ಲ: ಸಿದ್ದರಾಮಯ್ಯ ಭವಿಷ್ಯ

ಬಿಜೆಪಿ ಸರ್ಕಾರದ ನಿರ್ಧಾರದಿಂದ ಕಾಂಗ್ರೆಸ್‌ ಮುಖಂಡರು ಹತಾಶ: ನಿರ್ಮಲಾನಂದ ಸ್ವಾಮೀಜಿ ಹಾಗೂ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿಗೆ ಮೀಸಲಾತಿ ಒಪ್ಪಿಕೊಳ್ಳಿ ಎಂದು ಬಿಜೆಪಿ ನಾಯಕರು ಕರೆ ಮಾಡಿ ಒತ್ತಡ ಹಾಕಿದ್ದಾರೆ ಎಂಬ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯ ಹಾಗೂ ವೀರೇಶ್ವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಘೋಷಣೆ ವಿಚಾರದಲ್ಲಿ ಸಮುದಾಯದ ಶ್ರೀಗಳಿಗೆ ಒತ್ತಡ-ಬೆದರಿಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾಡಿರುವ ಆರೋಪ ಆಧಾರ ರಹಿತ. ಗೂಂಡಾಗಳ ಬಾಯಲ್ಲಿ ಅದೇ ರೀತಿಯ ಮಾತುಗಳು ಬರುತ್ತವೆ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ ಇದ್ದಂತೆ ಬಿಜೆಪಿ ಪಕ್ಷದಲ್ಲಿ ಯಾರೂ ಗುಂಡಾ ನಾಯಕರಿಲ್ಲ. ಕಾಂಗ್ರೆಸ್‌ ಮುಖಂಡರಂತೆ ಉಪಾಧ್ಯಾಪಿತನ ಮಾಡುವ ಸಂಸ್ಕೃತಿ ಬಿಜೆಪಿ ಪಕ್ಷದಲ್ಲಿ ಇಲ್ಲ. ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಮೀಸಲಾತಿ ಹೆಚ್ಚಿಸಿದ್ದನ್ನು ಕಾಂಗ್ರೆಸ್‌ ನಾಯಕರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ವ್ಯರ್ಥ ಟೀಕೆಗಳನ್ನು ಮಾಡುತ್ತಾರೆ ಎಂದರು. ಎಲ್ಲಾ ಸಮುದಾಯಗಳ ಮೀಸಲಾತಿ ನೀಡುವ ಉದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮೀಸಲಾತಿ ಕಲ್ಪಿಸಲು ಸೂಕ್ತ ನಿರ್ದೇಶನ ನೀಡಿದ್ದರು. 

ಸಿದ್ದು ಪಾಳೇಗಾರಿಕೆ ಮಾಡ್ಕೊಂಡು, ದೇವೇಗೌಡರನ್ನು ಹೆದರಿಸ್ತಿದ್ರು: ಎಚ್‌.ಡಿ.ಕುಮಾರಸ್ವಾಮಿ

ಅದರಂತೆ ಪ್ರಧಾನಿ ಮೋದಿ ಹಾಗೂ ಸಚಿವ ಅಮಿತ್‌ ಶಾ ಅವರ ನಿರ್ದೇಶನದಂತೆ ಎಲ್ಲ ಸಮುದಾಯದವರಿಗೆ ಮೀಸಲಾತಿ ನೀಡಿ, ಸಾಮಾಜಿಕ ನ್ಯಾಯ ಕಲ್ಪಿಸಿದ್ದೇವೆ ಎಂದರು. 2-ಎ ಪ್ರವರ್ಗದಲ್ಲಿ 102 ಜಾತಿಗಳಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ ನೀಡಲಾಗಿದೆ. 3-ಬಿ ಪ್ರವರ್ಗದಲ್ಲಿದ್ದ 2-ಡಿ ಪ್ರವರ್ಗ ರೂಪಿಸಿ ಶೇ.7 ಮೀಸಲಾತಿ ಕೊಡಲಾಗಿದೆ. ಇದರಿಂದ ಶೇ.15 ಹಾಗೂ 7 ಸೇರಿ ಹಿಂದುಳಿದ ಸಮುದಾಯಗಳಿಗೆ ಶೇ.22 ರಷ್ಟು  ಮೀಸಲಾತಿ ಸಿಕ್ಕಿದೆ ಎಂದು ಹೇಳಿದರು.

click me!