ಒಂದು ದಿನ ಹೋರಾಟ ಮಾಡಿದರೆ ರೈತರ ಮಕ್ಕಳಾಗಲ್ಲ: ಶಾಸಕ ಬಸನಗೌಡ ಯತ್ನಾಳ

Published : Nov 09, 2025, 04:54 PM IST
Karnataka Politics:

ಸಾರಾಂಶ

ಅಂಬೇಡ್ಕರ್ ಅವರಿಗೆ ಗೌರವ ಕೊಟ್ಟಿದ್ದು ಮೋದಿ. ಕೇವಲ ಒಂದು ದಿನ ಮಲಗಿದರೆ ರೈತರ ಮಕ್ಕಳಾಗಲು ಸಾಧ್ಯವೇ? ರೈತರ ಮಕ್ಕಳಾಗಿದ್ದರೆ ದುಬೈನಲ್ಲಿ ಯಾಕೆ ಆಸ್ತಿ ಮಾಡಿದ್ದಾರೆ ಎಂದು ಶಾಸಕ ವಿಜಯಪುರ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಗದಗ (ನ.09): ಕೇವಲ ಒಂದು ದಿನ ಮಲಗಿದರೆ ರೈತರ ಮಕ್ಕಳಾಗಲು ಸಾಧ್ಯವೇ? ರೈತರ ಮಕ್ಕಳಾಗಿದ್ದರೆ ದುಬೈನಲ್ಲಿ ಯಾಕೆ ಆಸ್ತಿ ಮಾಡಿದ್ದಾರೆ ಎಂದು ಶಾಸಕ ವಿಜಯಪುರ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ಹತ್ತಿಕಾಳು ಕೂಟದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರೈತರಿಗೆ, ಸಮಾಜಕ್ಕೆ ಅನುಕೂಲ ಆಗಬೇಕಾದರೆ ಮೊದಲು ರೈತರಿಗೆ ನೀರು ಕೊಡಬೇಕು. ಅವರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ಈ ವರೆಗೆ ಮುಖ್ಯಮಂತ್ರಿ ಆದವರು ಲೂಟಿ ಮಾಡುವುದನ್ನು ಬಿಟ್ಟು ಬೇರೆ ಮಾಡಿಲ್ಲ.

ಮಾಜಿ ಮುಖ್ಯಮಂತ್ರಿಗಳು ವಿಧಾನಸೌಧದ ಮುಂದೆ ಪ್ರಮಾಣ ಮಾಡಲಿ‌. ಒಮ್ಮೆ ನಮಗೆ ಅವಕಾಶ ಕೊಡಿ, ಕರ್ನಾಟಕದ ಚಿತ್ರಣ ಬದಲಾಗಲಿದೆ. ನಾನು ಪ್ರತಿಜ್ಞೆ ಮಾಡುವೆ. ಜನ ಕೊಟ್ಟ ಅಧಿಕಾರವನ್ನು ಚೆನ್ನಮ್ಮ, ಶಿವಾಜಿ ರೀತಿಯ ಆಡಳಿತ ಮಾಡುವೆ ಎಂದರು. ಪ್ರಾಮಾಣಿಕವಾಗಿ ಮತದಾನ ಮಾಡಿ. ಇಲ್ಲದಿದ್ದರೆ ಹಿಂದೂಗಳು ಉಳಿಯಲು ಸಾಧ್ಯವಿಲ್ಲ. ಜಮೀರ್ 400 ಜನರಿಗೆ ಉಚಿತ ತರಬೇತಿ ಕೊಟ್ಟರು. ನಾವೆಲ್ಲ ಜಾತಿ ಜಾತಿ ಎಂದು ಬಡಿದಾಡಿ ಮತ ಹಾಕಿದರೆ ಹಿಂದೂಗಳು ಜೀವನ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದರು.

ಅಂಬೇಡ್ಕರ್ ಅವರಿಗೆ ಗೌರವ ಕೊಟ್ಟಿದ್ದು ಮೋದಿ. ಕಾಂಗ್ರೆಸಿಗರು ಅಂಬೇಡ್ಕರ್ ಅವರಿಗೆ ದಿಲ್ಲಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ಕೊಡಲಿಲ್ಲ.‌ ಅವರಿಗೆ ಕಾಂಗ್ರೆಸ್ ಸರ್ಕಾರ ಭಾರತ ರತ್ನ ಕೊಡಲಿಲ್ಲ.‌ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಅದಕ್ಕಾಗಿ ನಾವೆಲ್ಲ ಒಂದಾಗಬೇಕು. ಸನಾತನ ಹಿಂದೂ ಧರ್ಮ ಇರುವ ವರೆಗೆ ಸಂವಿಧಾನ ಇರುತ್ತದೆ ಎಂದು ವಿಶ್ವಾಸದಿಂದ ಹೇಳಿದರು.

ಆರ್‌ಎಸ್ಎಸ್ ನಿಷೇಧ

ರಾಜ್ಯದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಲಿಕ್ಕಾಗಲ್ಲ, ಆರ್‌ಎಸ್ಎಸ್ ನಿಷೇಧ ಮಾಡುವ ಮಾತಾಡುತ್ತಾರೆ.‌ ಅದೇ ಎಸ್‌ಡಿಪಿಐ ಅವರಿಗೆ ಯಾವ ಪರವಾನಗಿ ಇದೆ. ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಡಿಜೆ ಪರವಾನಗಿ ಬೇಕು. ಐದು ಬಾರಿ ಅಜಾನ್ ಕೂಗುವುದಕ್ಕೆ ಯಾರು ಪರವಾನಗಿ ಕೊಟ್ಟಿದ್ದಾರೆ? ಸಿದ್ದರಾಮಯ್ಯ ಜೆಡಿಎಸ್‌ನಿಂದ ಉಚ್ಚಾಟನೆ ಆಗಿ ಮುಖ್ಯಮಂತ್ರಿ ಆದರು. ಯಡಿಯೂರಪ್ಪ ಸಹ ಉಚ್ಚಾಟನೆ ಆದ ಮೇಲೆ ಸಿಎಂ ಆದವರು. ಹೀಗಾಗಿ ನಾನೂ ಸಹ 2028ಕ್ಕೆ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದರು. ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.‌ ಪಂಚಮಸಾಲಿ ಸಮಾಜದ ಪ್ರಮುಖರು ಉಪಸ್ಥಿತರಿದ್ದರು. ಸ್ಥಳೀಯ ನಾಯಕರು, ಸಮಾಜದ ಮುಖಂಡರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು