ಮೂರು ತಿಂಗಳಲ್ಲಿಯೇ ಸರ್ಕಾರದ ವರ್ಚಸ್ಸು ಕಡಿಮೆಯಾಗಿದೆ. ಗ್ಯಾರಂಟಿ ಯೋಜನೆಗಳ ಅಬ್ಬರದ ಪ್ರಚಾರದ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ. ಈ ಯೋಜನೆಗಳಿಗಾಗಿ ಮತ ನೀಡಿದ್ದ ಜನರು ಈಗ ತಾವು ಯಾಮಾರಿದ್ದೇವೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಶಿವಮೊಗ್ಗ (ಆ.17): ಮೂರು ತಿಂಗಳಲ್ಲಿಯೇ ಸರ್ಕಾರದ ವರ್ಚಸ್ಸು ಕಡಿಮೆಯಾಗಿದೆ. ಗ್ಯಾರಂಟಿ ಯೋಜನೆಗಳ ಅಬ್ಬರದ ಪ್ರಚಾರದ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ. ಈ ಯೋಜನೆಗಳಿಗಾಗಿ ಮತ ನೀಡಿದ್ದ ಜನರು ಈಗ ತಾವು ಯಾಮಾರಿದ್ದೇವೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವರ್ಚಸ್ಸು ಇಷ್ಟು ಬೇಗ ಕಡಿಮೆ ಆಗಿರುವುದು ಆಶ್ಚರ್ಯ ಉಂಟುಮಾಡುತ್ತಿದೆ. ಅನೇಕ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಹಳೆಯ ಚಾಳಿ ಮುಂದುವರಿಸಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನಂತೆ ಈಗಲು ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುವುದನ್ನು ಮುಂದುವರಿಸಿದ್ದಾರೆ ಎಂದು ಹರಿಹಾಯ್ದರು.
ಭ್ರಷ್ಟಾಚಾರದ ಪಾಪದ ಕೂಸು ಹುಟ್ಟು ಹಾಕಿದವರೇ ಕಾಂಗ್ರೆಸ್ಸಿಗರು: ಬಿ.ವೈ.ವಿಜಯೇಂದ್ರ
ಆರ್ಥಿಕ ಶಿಸ್ತು ಕಳೆದುಕೊಂಡ ಸರ್ಕಾರ: ಚುನಾವಣೆ ಸಂದರ್ಭ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು .40 ರಿಂದ 50 ಸಾವಿರ ಕೋಟಿ ಸಾಲ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಆದರೆ, .70 ರಿಂದ .80 ಸಾವಿರ ಕೋಟಿ ಸಾಲ ಮಾಡಲಾಗುತ್ತಿದೆ ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕ ಶಿಸ್ತು ಕಳೆದುಕೊಂಡಿದೆ. ಹಾಗಾಗಿ, ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಮತದಾರರಿಗೆ ಉಚಿತ ವಿದ್ಯುತ್ ಕೊಡುವುದಾಗಿ ಭರವಸೆ ಕೊಟ್ಟಿದ್ದರು. ಈಗ ಮಳೆ ಅಭಾವದಿಂದ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ. ಮಳೆ ಇಲ್ಲದೇ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಲೋಡ್ ಶೆಡ್ಡಿಂಗ್ ಮಾಡಿ ಜನರಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ತುಂಗಭದ್ರಾ ನದಿಯಿಂದ ಶಿಕಾರಿಪುರ ತಾಲೂಕಿಗೆ ಪೈಪ್‌ಲೈನ್ ಮೂಲಕ ನೀರು ತರುವ ಯೋಜನೆ ರೂಪಿಸಿದ್ದರು. ಆದರೆ, ಲೋಡ್‌ಶೆಡ್ಡಿಂಗ್‌ನಿಂದಾಗಿ ಪೈಪ್‌ಲೈನ್ ಮೂಲಕ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಎದೆಯ ಮೇಲೆ ಪೋಷಕರು, ಸುದೀಪ್ ಹಚ್ಚೆ: ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!
ಗ್ಯಾರಂಟಿ ಯೋಜನೆಗಳ ಅಬ್ಬರದ ಪ್ರಚಾರದ ಮಧ್ಯೆ ಸರ್ಕಾರ ನಡೆಯುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಈಚೆಗೆ ಗುತ್ತಿಗೆದಾರರೊಬ್ಬರು ಆರೋಪ ಮಾಡಿದ್ದರು. ಈಗ ಅವರು ಹೇಳಿಕೆ ಹಿಂಪಡೆದಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಅನೇಕ ಆರೋಪ ಮಾಡಿದ್ದ ಕೆಂಪಣ್ಣ ಅವರು ಈಗ ಮೌನವಾಗಿದ್ದಾರೆ ಎಂದರು.