ಡೆಪ್ಯುಟಿ ಸ್ಪೀಕರ್ ಸ್ಥಾನ ತಿರಸ್ಕರಿಸಿದ್ದ ಪುಟ್ಟರಂಗಶೆಟ್ಟಿ ಯೂ ಟರ್ನ್: ಕಾಂಗ್ರೆಸ್ ವರಿಷ್ಠರ ನಿರ್ಧಾರಕ್ಕೆ ಒಪ್ಪಿಗೆ

By Govindaraj S  |  First Published Jun 8, 2023, 1:05 PM IST

ವಿಧಾನಸಭಾ ಉಪ ಸಭಾಪತಿ ಸ್ಥಾನ ತಿರಸ್ಕರಿಸಿದ್ದ ಮಾಜಿ ಸಚಿವ ಸಿ.ಪುಟ್ಟರಂಗಶೆಟ್ಟಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇಂದು ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಸಿ ಪುಟ್ಟರಂಗಶೆಟ್ಟಿ, ಒಂದು ವರ್ಷದ ನಂತರ ಸಚಿವ ಸ್ಥಾನ ಕೊಡುವುದಾಗಿ ಕಾಂಗ್ರೆಸ್ ವರಿಷ್ಠರು ಮಾತು ಕೊಟ್ಟಿದ್ದಾರೆ.


ಚಾಮರಾಜನಗರ (ಜೂ.08): ವಿಧಾನಸಭಾ ಉಪ ಸಭಾಪತಿ ಸ್ಥಾನ ತಿರಸ್ಕರಿಸಿದ್ದ ಮಾಜಿ ಸಚಿವ ಸಿ.ಪುಟ್ಟರಂಗಶೆಟ್ಟಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇಂದು ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಸಿ ಪುಟ್ಟರಂಗಶೆಟ್ಟಿ, ಒಂದು ವರ್ಷದ ನಂತರ ಸಚಿವ ಸ್ಥಾನ ಕೊಡುವುದಾಗಿ ಕಾಂಗ್ರೆಸ್ ವರಿಷ್ಠರು ಮಾತು ಕೊಟ್ಟಿದ್ದಾರೆ. ಹಾಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ಹೇಳಿದ್ದಾರೆ. 

ನಾನು ಕಾಂಗ್ರೆಸ್ ಕಟ್ಟಾಳು, ವರಿಷ್ಠರು ಹೇಳಿದ್ದನ್ನು ಒಪ್ಪಿಕೊಳ್ಳಲೇಬೇಕು. ಸಚಿವ ಸ್ಥಾನ ತಪ್ಪಿದ್ದರಿಂದ ಬೇಸರವಾದರು ಹೇಳಿಕೊಳ್ಳಲು ಆಗಲ್ಲ. ಹೈಕಮಾಂಡ್ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದು ಸಿ ಪುಟ್ಟರಂಗಶೆಟ್ಟಿ ತಿಳಿಸಿದರು. ಒಂದು ವರ್ಷ ಕೆಲಸ ಮಾಡು ನಂತರ ಸಚಿವ ಸ್ಥಾನ ನೀಡ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಅಂತ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.

Tap to resize

Latest Videos

undefined

ತಿಹಾರ್‌ ರೀತಿ ರಾಜ್ಯದ ಜೈಲುಗಳಿಗೆ ಕಠಿಣ ಜಾಮರ್‌: ಮೊಬೈಲ್‌ ಬಳಕೆ ತಡೆಯಲು ಹೊಸ ತಂತ್ರಜ್ಞಾನ

ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು: ತಾಲೂಕಿನ ಗಡಿ ಅಂಚಿನಲ್ಲಿರುವ ಬಿಸಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಬಿಸಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಗ್ರಾ.ಪಂ., ಸಹಕಾರ ಸಂಘಗಳ ಪ್ರತಿನಿಧಿಗಳು ನೂತನ ಶಾಸಕರನ್ನು ಭೇಟಿಯಾಗಿ ಅಭಿನಂದಿಸಿದ ಸಂದರ್ಭದಲ್ಲಿ ಗ್ರಾಮಸ್ಥರ ಮನವಿಯನ್ನು ಆಲಿಸಿ ಅವರು ಮಾತನಾಡಿದರು.

ಬಿಸಲವಾಡಿ ಗ್ರಾಮ ಪಂಚಾಯಿತಿ ತಮಿಳುನಾಡು ಗಡಿ ಭಾಗದಲ್ಲಿದೆ. ಈ ಭಾಗದಲ್ಲಿ ಸಾಕಷ್ಟುಸಮಸ್ಯೆಗಳಿದ್ದು, ಪಂಚಾಯಿತಿ ವ್ಯಾಪ್ತಿಗೆ ಬರುವ ಬಂದಿಗೌಡನಹಳ್ಳಿ, ಕೋಡಿ ಉಗನೆ, ಬೇವಿನತಾಳಪುರ, ಬಿ.ಜೆ.ಕಾಲೋನಿಗಳು ಸೇರ್ಪಡಯಾಗಿದ್ದು, ಎಲ್ಲಾ ಗ್ರಾಮಗಳ ರಸ್ತೆ, ಕುಡಿಯುವ ನೀರು, ಚರಂಡಿ ಸೌಲಭ್ಯ ಸೇರಿದಂತೆ ಕೃಷಿ ಚಟುವಟಿಕೆಗಳನ್ನು ರೈತರು ಕೈಗೊಳ್ಳಲು ಅನುಕೂಲವಾಗುವಂತೆ ಸಕಾಲದಲ್ಲಿ ರೈತರಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರದಿಂದ ವಿಶೇಷ ಯೋಜನೆಯನ್ನು ರೂಪಿಸಿ ಹೆಚ್ಚಿನ ಅನುದಾನವನ್ನು ಕೊಡಿಸುವ ಜವಾಬ್ದಾರಿಯಿದೆ.

ಸದಾನಂದ ಗೌಡರ ವಿರುದ್ಧ ಅಪಪ್ರಚಾರ ತಪ್ಪು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್‌ ಮಾತನಾಡಿ, ಬಿಸಲವಾಡಿ ಗ್ರಾಮ ಪಂಚಾಯಿತಿ ತಮ್ಮ ಗೆಲುವಿಗೆ ಸಂಪೂರ್ಣ ಬೆಂಬಲವನ್ನು ನೀಡುವ ಜತೆಗೆ ಹೆಚ್ಚಿನ ಮತಗಳನ್ನು ನೀಡಿ, ಬಹುಮತ ಬರುವಂತೆ ಮಾಡಿದ್ದಾರೆ. ಈಗಾಗಲೇ ಗ್ರಾಮದ ಮುಖಂಡರ ಕೋರಿಕೆಯಂತೆ ಬಿಸಲವಾಡಿ, ಬಂದಿಗೌಡನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಸಂಪರ್ಕ ರಸ್ತೆಗಳಿಗೆ ವಿಶೇಷ ಅನುದಾನ ಕೊಡಿಸಬೇಕು. ಸಾರಿಗೆ ಸೌಲಭ್ಯ ಸೇರಿದಂತೆ ಈ ಭಾಗದಲ್ಲಿ ವಾಸಿಸುವ ಜನರ ಸಮಸ್ಯೆಗಳನ್ನು ಪರಿಹರಿಸಬೇಕು. ಈ ಎಲ್ಲಾ ಸಮಸ್ಯೆಗಳಿಗೆ ತಾವು ಅದ್ಯತೆ ಮೇರೆಗೆ ಅನುದಾನವನ್ನು ನೀಡಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿಕೊಂಡರು.

click me!