ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸುತ್ತಿದೆ ಕಾಂಗ್ರೆಸ್‌: ಶಾಸಕ ಸಿ.ಸಿ.ಪಾಟೀಲ್‌ ಲೇವಡಿ

By Kannadaprabha NewsFirst Published May 9, 2024, 2:34 PM IST
Highlights

ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಒಂದು ರೀತಿಯ ಗರ್ದಿ ಗಮ್ಮತ್ತಿನ ಪೆಟ್ಟಿಗೆಯಾಗಿದೆ ಎಂದು ಮಾಜಿ ಸಚಿವ ಹಾಗೂ ನರಗುಂದ ಶಾಸಕ ಸಿ.ಸಿ.ಪಾಟೀಲ ಲೇವಡಿ ಮಾಡಿದರು. 
 

ಸವದತ್ತಿ (ಮೇ.09): ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಒಂದು ರೀತಿಯ ಗರ್ದಿ ಗಮ್ಮತ್ತಿನ ಪೆಟ್ಟಿಗೆಯಾಗಿದೆ ಎಂದು ಮಾಜಿ ಸಚಿವ ಹಾಗೂ ನರಗುಂದ ಶಾಸಕ ಸಿ.ಸಿ.ಪಾಟೀಲ ಲೇವಡಿ ಮಾಡಿದರು. ತಾಲೂಕಿನ ಆಚಮಟ್ಟಿ ಗ್ರಾಮದಲ್ಲಿ ಬೆಳಗಾವಿ ಲೋಕಸಭೆ ಅಭ್ಯರ್ಥಿ ಜಗದೀಶ ಶೆಟ್ಟರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮತದಾರರು ಸಾರಿ ಸಾರಿ ವಿಚಾರ ಮಾಡಿ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು 10 ವರ್ಷಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಜನರ ಮನದಲ್ಲಿ ಅಚ್ಚಳಿಯಾಗಿ ಉಳಿದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಜಲಜೀವನ್ ಮಿಷನ್ ಮೂಲಕ ದೇಶದ ಎಲ್ಲ ಗ್ರಾಮಗಳಿಗೆ ಮನೆಗಳಿಗೆ ನೀರು ತಲುಪುವಂತೆ ಮಾಡಿದ್ದಾರೆ. ಹೆಣ್ಣು ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರ್‌ಗಳ ವಿತರಣೆ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತರುವುದರ ಜೊತೆಗೆ ಬಡಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಮತದಾನ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆ ಕಾರಣ: ಸಚಿವ ಮಧು ಬಂಗಾರಪ್ಪ

ಬಿಜೆಪಿ ಮುಖಂಡರಾದ ವಿರುಪಾಕ್ಷ ಮಾಮನಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು10 ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜಗತ್ತಿಗೆ ಮಾದರಿಯಾದ ಪ್ರಧಾನಿ ಎನಿಸಿಕೊಂಡಿದ್ದು, ನಮ್ಮ ಪ್ರಧಾನಿಯವರು ದೇಶದ ಅಭಿವೃದ್ಧಿಗಾಗಿ ಜನಿಸಿ ಬಂದವರಾಗಿದ್ದಾರೆ ಎಂದರು. ವಿರೋಧಿ ದೇಶಗಳಿಗೆ ಸಿಂಹ ಸ್ವಪ್ನವಾಗಿ ಕೆಲಸ ಮಾಡುತ್ತಿರುವ ಮೋದಿಯವರಿಗೆ ಈ ಬಾರಿಯೂ ಸಹ ನಾವು ಬಿಜೆಪಿ ಪಕ್ಷಕ್ಕೆ ಮತ ನೀಡಿ ಮತ್ತೆ ಅವರನ್ನು ಪ್ರಧಾನಿಯವರನ್ನಾಗಿ ಮಾಡೋಣ ಎಂದರು.

ಪಂಚನಗೌಡ ದ್ಯಾಮನಗೌಡರ ಮಾತನಾಡಿ, ಭಾರತೀಯ ಜನತಾ ಪಕ್ಷದ ಜಗದೀಶ ಶೆಟ್ಟರರವರು ರಾಜ್ಯದ ಮುಖ್ಯಮಂತ್ರಿಗಳಾಗಿ ಮತ್ತು ವಿವಿಧ ಇಲಾಖೆಗಳ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ನುರಿತ ಮುತ್ಸದ್ಧಿ ರಾಜಕಾರಣಿಗಳಾಗಿರುವುದರಿಂದ ಬೆಳಗಾವಿ ಅಭಿವೃದ್ಧಿಗೊಸ್ಕರ ಅವರನ್ನು ಬೆಂಬಲಿಸುವುದು ನಮ್ಮ ಕರ್ತವ್ಯ ಎಂದರು.

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಹಿಂದೆ ಡಿಕೆಶಿ ಮಾಸ್ಟರ್‌ಮೈಂಡ್: ಸಿ.ಪಿ.ಯೋಗೇಶ್ವರ್

ಸೌರವ ಚೋಪ್ರಾ, ಶ್ರದ್ಧಾ ಶೆಟ್ಟರ, ಜಗದೀಶ ಕೌಜಗೇರಿ ಮಾತನಾಡಿದರು. ಈಶ್ವರ ಮೇಲಗೇರಿ, ಈರಣ್ಣ ಚಂದರಗಿ, ಡಾ.ನಯನಾ ಬಸ್ಮೆ, ಕುಮಾರ ಜಕಾತಿ, ಸಿ.ಎಂ.ಪಾಟೀಲ, ಎಂ.ಎಸ್.ಪಾಟೀಲ, ಕೆ.ಎಫ್.ತೋರಣಗಟ್ಟಿ, ವೈ.ಎನ್.ಜಾಲಿಕಟ್ಟಿ, ಸಂಗಪ್ಪ ತೋರಣಗಟ್ಟಿ, ಲಕ್ಷ್ಮಪ್ಪ ಬಳಹಾರ, ಎಸ್.ಎಸ್.ಹಾದಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ದಾವಲಸಾಬ್ ಚಪ್ಟಿ ನಿರೂಪಿಸಿ, ವಂದಿಸಿದರು.

click me!