ಸಿದ್ದು ಸರ್ಕಾರದ ನಡೆಯಿಂದ ನೆಮ್ಮದಿಯಿಲ್ಲದಂತಾಗಿದೆ: ಶಾಸಕ ಬಾಲಕೃಷ್ಣ

Published : Dec 29, 2023, 01:20 PM IST
ಸಿದ್ದು ಸರ್ಕಾರದ ನಡೆಯಿಂದ ನೆಮ್ಮದಿಯಿಲ್ಲದಂತಾಗಿದೆ: ಶಾಸಕ ಬಾಲಕೃಷ್ಣ

ಸಾರಾಂಶ

ಚನ್ನರಾಯಪಟ್ಟಣ ತಾಲೂಕಿನಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡುವ ಸಾಲ ಸೌಲಭ್ಯದ ಫಲಾನುಭವಿಗಳ ಪಟ್ಟಿ ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಸಮಾಜದ ೨೦ ಜನ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಾಗದಲ್ಲಿ ಕೇವಲ ಐದು ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಿ ಎಂದರೆ, ಅದನ್ನು ಹೇಗೆ ಆಯ್ಕೆ ಮಾಡುವುದು ? ಇಂತಹ ಇಕ್ಕಟ್ಟಿನ ಸನ್ನಿವೇಶದಲ್ಲಿ ನಾವಿದ್ದೇವೆ ಎಂದ ಶಾಸಕ ಸಿ. ಎನ್. ಬಾಲಕೃಷ್ಣ

ಚನ್ನರಾಯಪಟ್ಟಣ(ಡಿ.29):  ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯು ಶಾಸಕ ಸಿ.ಎನ್. ಬಾಲಕೃಷ್ಣರವರ ಅಧ್ಯಕ್ಷತೆಯಲ್ಲಿ ಜರುಗಿತು. ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕ ಸಿ. ಎನ್. ಬಾಲಕೃಷ್ಣ, ರಾಜ್ಯ ಸರ್ಕಾರ (ಉಚಿತ ಭಾಗ್ಯ) ಗ್ಯಾರಂಟಿ ಯೋಜನೆಗಳಿಗೆ ಎಸಿಪಿ ಮತ್ತು ಟಿಎಸ್ಪಿ ಹಣವನ್ನು ವರ್ಗಾವಣೆ ಮಾಡಿರುವುದು ಸರಿಯಾದ ನಿರ್ಧಾರವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಈ ನಡೆಯಿಂದ ನಮಗೆ ನೆಮ್ಮದಿ ಇಲ್ಲಂತಾಗಿದೆ ಎಂದರು.

ಚನ್ನರಾಯಪಟ್ಟಣ ತಾಲೂಕಿನಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ನೀಡುವ ಸಾಲ ಸೌಲಭ್ಯದ ಫಲಾನುಭವಿಗಳ ಪಟ್ಟಿ ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಸಮಾಜದ ೨೦ ಜನ ಫಲಾನುಭವಿಗಳನ್ನು ಆಯ್ಕೆ ಮಾಡುವ ಜಾಗದಲ್ಲಿ ಕೇವಲ ಐದು ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಿ ಎಂದರೆ, ಅದನ್ನು ಹೇಗೆ ಆಯ್ಕೆ ಮಾಡುವುದು ? ಇಂತಹ ಇಕ್ಕಟ್ಟಿನ ಸನ್ನಿವೇಶದಲ್ಲಿ ನಾವಿದ್ದೇವೆ ಎಂದರು.

ಹನುಮ ಜಯಂತಿಯಂದೇ ದುರಂತ; ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು!

ಚನ್ನರಾಯಪಟ್ಟಣ ತಾಲೂಕಿನಲ್ಲಿ ಎಸ್‌ಸಿ, ಎಸ್‌ಟಿ ಸಮಾಜದ ಬೇಡಿಕೆ ಹೆಚ್ಚಾಗಿದೆ. ಇಂತಹ ಸನ್ನಿವೇಶದಲ್ಲಿ ಎಸ್ಸಿ, ಎಸ್ಟಿ ಸಮಾಜದ ಅನುದಾನವನ್ನು ಉಚಿತ ಯೋಜನೆಗಳಿಗೆ ವರ್ಗಾವಣೆಗೊಳಿಸುವ ಮೂಲಕ ಯಾವುದೇ ಇಲಾಖೆಯಲ್ಲಿ ಎಸ್ ಸಿ ಎಸ್ ಟಿ ಅನುದಾನಗಳಿಲ್ಲದಂತಾಗಿದೆ, ಇಂತಹ ಸಂದರ್ಭದಲ್ಲಿ ನಮ್ಮ ಮನೆಯ ಹತ್ತಿರ ಬಂದು ನಮಗೆ ಸರ್ಕಾರಿ ಸೌಲಭ್ಯಗಳನ್ನು ನೀಡಿ ಎಂದು ಮನವಿ ಮಾಡುವ ದಲಿತ ಸಮಾಜದ ಬಂಧುಗಳಿಗೆ ಏನೆಂದು ಉತ್ತರಿಸುವುದು ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವಂತೆ ಮಾರ್ಗದರ್ಶನ ನೀಡಲಾಯಿತು.

ತಾಪಂ ಆಡಳಿತ ಅಧಿಕಾರಿ ಪ್ರಭು ಈರಣ್ಣಗೌಡ, ತಾಲೂಕು ದಂಡಾಧಿಕಾರಿ ಬಿ.ಎಂ. ಗೋವಿಂದರಾಜು, ತಾಪಂ ನಿರ್ವಹಣಾಧಿಕಾರಿ ಜಿ. ಆರ್. ಹರೀಶ್, ಪೊಲೀಸ್ ವೃತ್ತ ನಿರೀಕ್ಷಕ ವಸಂತ್, ಪುರಸಭೆ ಮುಖ್ಯ ಅಧಿಕಾರಿ ಹೇಮಂತ್ ಕುಮಾರ್, ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ