ನನ್ನ, ಯತ್ನಾಳ್ ವಿರುದ್ಧ ಕ್ರಮಕ್ಕೆ ಧಮ್ ಬೇಕು: ಜಿ.ಟಿ.ದೇವೇಗೌಡ

Published : Jan 23, 2025, 06:30 AM IST
ನನ್ನ, ಯತ್ನಾಳ್ ವಿರುದ್ಧ ಕ್ರಮಕ್ಕೆ ಧಮ್ ಬೇಕು: ಜಿ.ಟಿ.ದೇವೇಗೌಡ

ಸಾರಾಂಶ

ಬಿಜೆಪಿಯಲ್ಲಿ ಯತ್ನಾಳ್ ವಿರುದ್ಧ ಕ್ರಮ ಕೈಗೊಂಡಿಲ್ಲ. ನನ್ನ ಮೇಲಾಗಲಿ, ಯತ್ನಾಳ್ ಮೇಲಾಗಲಿ ಕ್ರಮ ಕೈಗೊಳ್ಳಲು ಪಕ್ಷದ ನಾಯಕರಿಗೆ ಧಮ್‌ ಬೇಕು. ನಾಯಕರಿಗೆ ತಾಕತ್ ಇಲ್ಲ ಎಂದರು. ನನಗೆ ನನ್ನ ಮನೆ, ಕ್ಷೇತ್ರದ ಜವಾಬ್ದಾರಿ ಹೆಚ್ಚು ಇದೆ. ಇನ್ನೂ ಆರು ತಿಂಗಳು ಪಕ್ಷದ ಸಭೆಗಳಿಂದ ದೂರ ಇರುತ್ತೇನೆ. ನಮ್ಮ ನಾಯಕರಿಗೂ ಹೇಳಿದ್ದೇನೆ. ನಿಖಿಲ್ ಕುಮಾರಸ್ವಾಮಿಗೆ ಒಳ್ಳೆಯದಾಗಲಿ ಎಂದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು(ಜ.23):  ಜೆಡಿಎಸ್‌ನಲ್ಲಿ ಬಂಡಾಯದ ಕಿಡಿ ಹಾರಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರು ನನ್ನ ಪಕ್ಷ ದಿಂದ ಉಚ್ಚಾಟಿಸಲು ತಾಕತ್ತು, ಧಮ್‌ ಬೇಕು ಎಂದು ಪಕ್ಷದ ಹಿರಿಯ ನಾಯಕರಿಗೆ ಸವಾಲು ಹಾಕಿದ್ದಾರೆ. 

ಬುಧವಾರ ಸುದ್ದಿಗಾರರೊಡನೆ ಮಾತನಾಡಿ, ಬಿಜೆಪಿಯಲ್ಲಿ ಯತ್ನಾಳ್ ವಿರುದ್ಧ ಕ್ರಮ ಕೈಗೊಂಡಿಲ್ಲ. ನನ್ನ ಮೇಲಾಗಲಿ, ಯತ್ನಾಳ್ ಮೇಲಾಗಲಿ ಕ್ರಮ ಕೈಗೊಳ್ಳಲು ಪಕ್ಷದ ನಾಯಕರಿಗೆ ಧಮ್‌ ಬೇಕು. ನಾಯಕರಿಗೆ ತಾಕತ್ ಇಲ್ಲ ಎಂದರು. ನನಗೆ ನನ್ನ ಮನೆ, ಕ್ಷೇತ್ರದ ಜವಾಬ್ದಾರಿ ಹೆಚ್ಚು ಇದೆ. ಇನ್ನೂ ಆರು ತಿಂಗಳು ಪಕ್ಷದ ಸಭೆಗಳಿಂದ ದೂರ ಇರುತ್ತೇನೆ. ನಮ್ಮ ನಾಯಕರಿಗೂ ಹೇಳಿದ್ದೇನೆ. ನಿಖಿಲ್ ಕುಮಾರಸ್ವಾಮಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

ಜಿ.ಟಿ.ದೇವೇಗೌಡ-ಜೆಡಿಎಸ್‌ದು ಗಂಡ- ಹೆಂಡತಿ ಸಂಬಂಧ: ಎಚ್‌.ಡಿ.ಕುಮಾರಸ್ವಾಮಿ

ಯತ್ನಾಳ್ ವಿರುದ್ಧ ವಾಗ್ದಾಳಿ 

ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರ ಇದೆ ಎಂಬ ಬಸವನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ, ನಿನಗೇನು ಗೊತ್ತು ನನ್ನ ಯೋಗ್ಯತೆ, ಆಸ್ತಿ, ಸಾಲದ ಲೆಕ್ಕ ಎಂದು ಜಿ.ಟಿ. ದೇವೇಗೌಡ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು.  ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರುವುದನ್ನು ನೀನು ಸಾಬೀತು ಪಡಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು. 

ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಜೊತೆ ಮಾತನಾಡಬೇಡ. ಇದು ನಾನು ನಿನಗೆ ಹಾಕುತ್ತಿರುವ ಸವಾಲು. ನನ್ನ ಬಗ್ಗೆ ಬಗ್ಗೆ ಮಾತನಾಡುವಾಗ ಎಚ್ಚರಕೆ ಇರಲಿ. ನೀನು ರಾಜಕೀಯಕ್ಕೆ ಬಂದಾಗ ಏನಿತ್ತು ನಂತರ ನೀನು ಹೇಗೆ ದುಂಡಗಾದೆ. ಸೌಹಾರ್ದ ಬ್ಯಾಂಕಿನ ಹೆಸರಿನಲ್ಲಿ ಎಷ್ಟು ಹಣ ಡಿಪಾಸಿಟ್ ಮಾಡಿಸಿಕೊಂಡು ಅದನ್ನು ಎಲ್ಲೆಲ್ಲಿ ಹೂಡಿಕೆ ಮಾಡಿದ್ದೀಯ ಎಂಬುದು ನನಗೆ ಗೊತ್ತಿಲ್ಲವೇ ಎಂದರು.

ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ರೆ ತಪ್ಪಿಲ್ಲ: ಶಾಸಕ ಜಿ.ಟಿ.ದೇವೇಗೌಡ

ಶಾಸಕರಿಗೆ ಎಚ್ಚಿಕೆ ಬೆಲೆ ಕೊಡಲ್ಲ 

ಎಚ್.ಡಿ.ಕುಮಾರಸ್ವಾಮಿ ಸುಮ್ಮನೆ ಎಲ್ಲರ ಅಭಿಪ್ರಾಯ ಕೇಳುತ್ತೇನೆ ಅಂತಾರೆ. ಆದರೆ ಏನೂ ಅಂದು ಕೊಂಡಿದ್ದಾರೋ ಅದನ್ನೇ ಮಾಡುವುದು. ಇಲ್ಲಿ ಶಾಸಕರ ಅಭಿಪ್ರಾಯಕ್ಕೆ ಬೆಲೆ ಇರುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. 

ಸಿದ್ದು ಪರ ಜಿಟಿಡಿ ಬ್ಯಾಟ್ 

ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಯಾವ ನಾಯಕರ ಮೇಲೆ ಎಷ್ಟು ಎಫ್.ಐ.ಆರ್‌ಗಳಿವೆ ಗೊತ್ತಾ? ಸಿದ್ದರಾಮಯ್ಯ ರ ರಾಜೀನಾಮೆ ಯಾಕೆ ಕೊಡಬೇಕು. ನ್ಯಾಯಾಲಯದ ತೀರ್ಮಾನ ಬರಲಿ. ಆಮೇಲೆ ನೋಡೋಣ ಎಂದರು. ತಮ್ಮ ಪಕ್ಷದಲ್ಲಿ ಯಾರ ಮೇಲೆ ಎಷ್ಟು ಎಫ್.ಐ.ಆರ್‌ಗಳಿವೆ ಎಂಬುದನ್ನು ನಾಯಕರು ಮೊದಲು ನೋಡಿಕೊಂಡು ನಂತರ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ