ನಾನು ಯಾವುದೇ ಹುದ್ದೆ ಪಡೆಯದೆ ರಾಜ್ಯಾದ್ಯಂತ ಓಡಾಡಿ ಪಕ್ಷ ಕಟ್ಟುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ನಟಿಸಲ್ಲ ಎಂದು ನಿಖಿಲ್ ಘೋಷಣೆ ಮಾಡಿದ್ದಾರೆ. ನಿಖಿಲ್ ರಾಜ್ಯದಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಾರೆ ಎಂದ ಹರೀಶ್ ಗೌಡ
ಮೈಸೂರು(ಜು.27): ಎಚ್.ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ದೇಶದ ಎಲ್ಲಾ ರಾಜ್ಯಗಳಿಗೆ ಹೋಗಬೇಕು. ವಾರದಲ್ಲಿ ನಾಲ್ಕು ದಿನ ದೆಹಲಿಯಲ್ಲಿದ್ದು ಎಲ್ಲಾ ರಾಜ್ಯಗಳಿಗೆ ಹೋಗಬೇಕು. ಹೀಗಾಗಿ ವಾರದಲ್ಲಿ ಒಂದು ದಿನ ಕರ್ನಾಟಕಕ್ಕೆ ಬರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಯಾರಿಗೆ ಎಂಬ ಪ್ರಶ್ನೆ ಉದ್ಭವವಾಗಿತ್ತು. ಕುಮಾರಸ್ವಾಮಿ ಅವರು ನಮ್ಮಲ್ಲೆರ ಜೊತೆ ಚರ್ಚೆ ನಡೆಸಿದ್ದಾರೆ. ಇದರಿಂದ ನಿಖಿಲ್ ಕುಮಾರಸ್ವಾಮಿ ಪಕ್ಷವನ್ನ ರಾಜ್ಯದಲ್ಲಿ ಕಟ್ಟುತ್ತಾರೆ ಎಂದು ಶಾಸಕ ಜಿ.ಡಿ ಹರೀಶ್ ಗೌಡ ಹೇಳಿದ್ದಾರೆ.
ಹಾಗಾದ್ರೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗ್ತಾರಾ?. ಜಿ.ಡಿ ಹರೀಶ್ ಗೌಡ ಅವರ ಹೇಳಿಕೆ ಭಾರೀ ಕೂತುಹಲ ಮೂಡಿಸಿದೆ. ಇಂದು(ಶನಿವಾರ) ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ ಅವರು, ಪಕ್ಷದ ನಾಯಕತ್ವದ ಬಗ್ಗೆ ಮಾತನಾಡುತ್ತಿದಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾಹಿತಿ ಬಹಿರಂಗಪಡಿಸದಂತೆ ಸೂಚನೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗೆ ದಲಿತರ ಹಣ ಬಳಕೆ: ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ನಿಖಿಲ್ ಕುಮಾರಸ್ವಾಮಿ
ಎಲ್ಲಾವೂ ತೀರ್ಮಾನ ಆಗಿದೆ ಬಿಡಣ್ಣ ಎಂದು ಶಾಸಕ ಹರೀಶ್ ಗೌಡ ಹೇಳಿದ್ದಾರೆ. ನಾನು ಯಾವುದೇ ಹುದ್ದೆ ಪಡೆಯದೆ ರಾಜ್ಯಾದ್ಯಂತ ಓಡಾಡಿ ಪಕ್ಷ ಕಟ್ಟುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈಗಾಗಲೇ ಸಿನಿಮಾದಲ್ಲಿ ನಟಿಸಲ್ಲ ಎಂದು ನಿಖಿಲ್ ಘೋಷಣೆ ಮಾಡಿದ್ದಾರೆ. ನಿಖಿಲ್ ರಾಜ್ಯದಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಾರೆ ಎಂದು ಹರೀಶ್ ಗೌಡ ತಿಳಿಸಿದ್ದಾರೆ.