ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ: ಶಾಸಕ ಎಚ್.ಸಿ.ಬಾಲಕೃಷ್ಣ

Published : Oct 11, 2023, 08:43 PM IST
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ: ಶಾಸಕ ಎಚ್.ಸಿ.ಬಾಲಕೃಷ್ಣ

ಸಾರಾಂಶ

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ಅವರ ರಾಜಕೀಯ ಜೀವನವೇ ಬುರುಡೆ ಬಿಟ್ಕೊಂಡು ತಿರುಗಾಡಿದವರು. ಅವರು ಎಲ್ಲಿ ಸಕ್ಸ್‌ಸ್ ಆಗಿದ್ದಾರೆ. ಕ್ಯಾಸೆಟ್ ಇಟ್ಟುಕೊಂಡು ಹೈಕಮಾಂಡ್ ಬಳಿ ಸುಳಿದಾಡಿದಂತೆ ಅಲ್ಲ ರಾಜಕೀಯ ಮಾಡುವುದು.

ಮಾಗಡಿ (ಅ.11): ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ಅವರ ರಾಜಕೀಯ ಜೀವನವೇ ಬುರುಡೆ ಬಿಟ್ಕೊಂಡು ತಿರುಗಾಡಿದವರು. ಅವರು ಎಲ್ಲಿ ಸಕ್ಸ್‌ಸ್ ಆಗಿದ್ದಾರೆ. ಕ್ಯಾಸೆಟ್ ಇಟ್ಟುಕೊಂಡು ಹೈಕಮಾಂಡ್ ಬಳಿ ಸುಳಿದಾಡಿದಂತೆ ಅಲ್ಲ ರಾಜಕೀಯ ಮಾಡುವುದು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಫೀಲ್ಡ್‌ಗೆ ಬರಲಿ. ರಾಜಕೀಯ ಏನೆಂಬುದನ್ನು ತೋರಿಸುತ್ತೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಯೋಗೇಶ್ವರ್ ಗೆ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರನ್ನಾಗಿ ಮಾಡಿದ ಬಿ.ಎಸ್.ಯಡಿಯೂರಪ್ಪ ಅವರನ್ನೇ ಸಿ.ಪಿ.ಯೋಗೇಶ್ವರ್ ಕುತಂತ್ರ ಮಾಡಿ ಕೆಳಗಿಳಿಸಿದರು. ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಯೋಗೇಶ್ವರ್ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾಚಿಕೆಯಾಗಬೇಕು ಎಂದರು. ನಮ್ಮಂತಹ ರಾಜಕಾರಣಿಯಾಗಿದ್ದರೆ ಜೀವನ ಪೂರ್ಣ ಅವರ ನೆರಳ ಬಳಿಯೂ ಸುಳಿಯುತ್ತಿರಲಿಲ್ಲ. ಇವರು ರಾಜಕೀಯಕ್ಕಾಗಿ ಏನು ಬೇಕಾದರು ಮಾಡುತ್ತಾರೆ. ಇದರಿಂದಲೇ ಕಾಂಗ್ರೆಸ್‌ನ ಭಯ ಎಷ್ಟಿದೆ ಎಂದು ಗೊತ್ತಾಗಿದೆ. ಇವರು ಒಂದಾಗುತ್ತಿರುವುದು ನಮ್ಮನ್ನು ಮುಗಿಸಲೇ ಹೊರತು, ರಾಜ್ಯಕ್ಕೆ, ಜಿಲ್ಲೆಗೆ ಒಳ್ಳೆಯದು ಮಾಡಲು ಅಲ್ಲ. ಇವರ ಆಟ ಹೆಚ್ಚುದಿನ ನಡೆಯುವುದಿಲ್ಲ ಎಂದು ಟೀಕಿಸಿದರು.

ಜಾತಿ ಆಧಾರದ ಮೇಲೆಯೇ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಜಿಲ್ಲೆಯ ಅಭಿವೃದ್ಧಿಗೆ ಸಿ.ಪಿ.ಯೋಗೇಶ್ವರ್ ಕಾಣಿಕೆ ಏನಿದೆ. ಸಂಸದರ ಕಾಣಿಕೆ ಏನಿದೆ ಎನ್ನುವುದು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಬಯಲಿಗೆ ಬರಲಿದೆ. ಅದನ್ನು ನಾನೂ ತೋರಿಸುತ್ತೇನೆ. ಜನರೂ ತೋರಿಸುತ್ತಾರೆ ಎಂದು ಏಕವಚನದಲ್ಲೆ ವಾಗ್ದಾಳಿ ನಡೆಸಿದರು. ಈ ಬಾರಿಯ ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 3ನೇ ಸ್ಥಾನದಲ್ಲಿದೆ. ಜೆಡಿಎಸ್- ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್ ಮೊದಲನೇ ಸ್ಥಾನಕ್ಕೆ ಬರುತ್ತೇವೆ. ನಮ್ಮ ಸರ್ಕಾರ ಇದ್ದು ಯಾವ ಬೂತ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ಹಾಕುತ್ತಾರೆ. ಅಂತಹ ಗ್ರಾಮವನ್ನು ಹೆಚ್ಚು ಅಭಿವೃದ್ಧಿ ಮಾಡುತ್ತೇವೆ- ದು ಬಾಲಕೃಷ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ