ಎಚ್‌.ಡಿ.ಕುಮಾರಸ್ವಾಮಿ ಕಡ್ಡಿ ಇಲ್ಲದೆಯೇ ಬೆಂಕಿ ಹಚ್ತಾರೆ: ಶಾಸಕ ಬಾಲಕೃಷ್ಣ ಕಿಡಿ

By Kannadaprabha News  |  First Published Sep 14, 2024, 9:27 PM IST

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಲ್ಲೇ ಹೋದರೂ ಬೆಂಕಿ ಕಡ್ಡಿ ಇಲ್ಲದೆಯೇ ಬೆಂಕಿ ಹಚ್ಚುತ್ತಾರೆ. ಅವರ ಕೆಲಸವೇ ಅದು. ಅವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ವೋಟ್ ಕೇಳಿಲ್ಲ ಎಂದು ಶಾಸಕ ಎಚ್‌.ಸಿ.ಬಾಲಕೃಷ್ಣ ಕಿಡಿಕಾರಿದರು. 


ಮಾಗಡಿ (ಸೆ.14): ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಲ್ಲೇ ಹೋದರೂ ಬೆಂಕಿ ಕಡ್ಡಿ ಇಲ್ಲದೆಯೇ ಬೆಂಕಿ ಹಚ್ಚುತ್ತಾರೆ. ಅವರ ಕೆಲಸವೇ ಅದು. ಅವರು ಯಾವತ್ತೂ ಅಭಿವೃದ್ಧಿ ವಿಚಾರದಲ್ಲಿ ವೋಟ್ ಕೇಳಿಲ್ಲ ಎಂದು ಶಾಸಕ ಎಚ್‌.ಸಿ.ಬಾಲಕೃಷ್ಣ ಕಿಡಿಕಾರಿದರು. ನಾಗಮಂಗಲ ಗಲಭೆ ಕಾಂಗ್ರೆಸ್ ಪ್ರಾಯೋಜಿತ ಎಂಬ ಕುಮಾರಸ್ವಾಮಿ ಆರೋಪ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರ ಮಾತಿಗು ಕೃತಿಗು ಹೋಲಿಕೆ ಆಗುವುದಿಲ್ಲ. ಅವರು ಮಾತನಾಡುವುದು ಕೂಡ ಹಾಗೆಯೇ ಎಂದು ಕಿಡಿಕಾರಿದರು.

ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಗಲಭೆ ಮಾಡಿದ್ದಾರೆ ಎಂದಿರುವ ಕುಮಾರಸ್ವಾಮಿ ಅವರ ಮನಸ್ಥಿತಿ ಎಂತಹದ್ದು ಎಂಬುದು ಅವರ ಮಾತುಗಳಲ್ಲೇ ಗೊತ್ತಾಗುತ್ತದೆ. ನಾಗಮಂಗಲದಲ್ಲಿ ನಡೆದಿರುವ ಸಣ್ಣ ಗಲಾಟೆ. ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುತ್ತಿದೆ. ಯಾವುದೇ ಒಂದು ಧರ್ಮವನ್ನು ಓಲೈಕೆ ಮಾಡುವ ಸಂಸ್ಕೃತಿ ನಮ್ಮ ಪಕ್ಷದಲ್ಲಿಲ್ಲ. ಧರ್ಮದ ವಿಚಾರದಲ್ಲಿ ಯಾರೇ ತೊಂದರೆ ಕೊಟ್ಟರೂ ಸಹಿಸಲ್ಲ. ಅವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದರು.

Tap to resize

Latest Videos

ಕಾಂಗ್ರೆಸ್ ಒಂದು ಕೋಮಿನ ಓಲೈಕೆ ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಅವರನ್ನೇ ಈ ಪ್ರಕರಣದ ತನಿಖಾಧಿಕಾರಿಗಳನ್ನಾಗಿ ಮಾಡುವಂತೆ ನಾನು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ. ಅವರನ್ನೇ ತನಿಖಾಧಿಯಾರಿಯನ್ನಾಗಿ ಮಾಡಿದರೆ, ಅವರ ತನಿಖೆಯಿಂದಲೇ ಎಲ್ಲಾ ಹೊರಗಡೆ ಬರಲಿ ಎಂದು ತಿರುಗೇಟು ನೀಡಿದರು. ನಾನು ಸಂಸದನಾದ 24 ಗಂಟೆಯೊಳಗೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ. ಪ್ರಧಾನಿ ಮೋದಿ ಅವರನ್ನು ಕರೆದುಕೊಂಡು ಬಂದು ಉದ್ಘಾಟನೆ ಮಾಡಿಸುತ್ತೇನೆ ಎಂದಿದ್ದರು. ಮೊದಲು ಆ ಕೆಲಸ ಮಾಡಲಿ. 

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇಕೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾರಿ ಮಾಡಿಲ್ಲ?: ಸಿಎಂ ಸಿದ್ದರಾಮಯ್ಯ

ಬೆಂಕಿ ಇಡುವ ಕೆಲಸ ಮೊದಲು ಬಿಡಲಿ ಎಂದು ಹೇಳಿದರು. ಗಲಭೆ ಪ್ರಕರಣಕ್ಕೆ ರಾಜಕೀಯ ತಿರುವು ಕೊಡುತ್ತಿರುವುದು ನಾವಲ್ಲ. ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳು ಪ್ರಕರಣವನ್ನು ರಾಜಕೀಯವಾಗಿ ವಿಶ್ಲೇಷಿಸುತ್ತಿದ್ದಾರೆ. ಪ್ರಕರಣದ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆಯಾಗಲಿ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅಪಾರ ನಂಬಿಕೆ ಇದೆ. ಅವರು ಇರುವವರೆಗೂ ಅವರೇ ಅನಭಿಷಿಕ್ತ ದೊರೆ ಎಂದು ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿರುವ ವಿವಿಧ ಹೆಸರುಗಳ ಕುರಿತ ಪ್ರಶ್ನೆಗೆ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದರು.

click me!