ಪ್ರಜ್ವಲ್, ನಾನು ತಪ್ಪು ಮಾಡಿದ್ರೆ ಕ್ಷಮಿಸಿ: ಎಚ್‌.ಡಿ.ರೇವಣ್ಣ ಕಣ್ಣೀರು

By Govindaraj S  |  First Published Mar 14, 2024, 6:03 AM IST

ಎಚ್.ಡಿ. ಕುಮಾರಸ್ವಾಮಿ ಆಡಳಿತದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಮತ್ತು ನಾನು ಏನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕ್ಷಮೆ ಕೇಳಿದರು.


ಹಾಸನ (ಮಾ.14): ಎಚ್.ಡಿ. ಕುಮಾರಸ್ವಾಮಿ ಆಡಳಿತದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಮತ್ತು ನಾನು ಏನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕ್ಷಮೆ ಕೇಳಿದರು. ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಬುಧವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಸನ ಜಿಲ್ಲೆಯ ಶಿಕ್ಷಣ ಇಲಾಖೆಗೆ ೫ ಸಾವಿರ ಕೋಟಿ ರು. ಹಣವನ್ನು ೨೦೦೬ನೇ ಸಾಲಿನಲ್ಲಿ ನೀಡಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಜಿಲ್ಲೆಗೆ ೧೦ ಸಾವಿರ ಕೋಟಿ ರು. ಹಣವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೊಡಿಸಿದ್ದಾರೆ. ಹಾಸನ ಜಿಲ್ಲೆಯ ರೈತರ ೫೨೦ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ ಎಂದು ಹೇಳಿದರು. ೯ ತಿಂಗಳಿನಿಂದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕುಡಿಯುವ ನೀರು ಕೊಡಲು ಸಾಧ್ಯವಾಗಿಲ್ಲ. ಯಾವುದೇ ಗ್ರಾಮಕ್ಕಾದರೂ ಕುಡಿಯುವ ನೀರು ಕೊಡಿ ಅನ್ನುವ ಸ್ಥಿತಿ ಉಂಟಾಗಿದೆ. ಇಂಧನ ಇಲಾಖೆಯಲ್ಲಿ ಕುಮಾರಸ್ವಾಮಿ ಕಾಂತ್ರಿಕಾರಿ ಕೆಲಸ ಮಾಡಿ ಹಲವು ವಿದ್ಯುತ್ ಸಬ್ ಸ್ಟೆಷನ್ ಮಾಡಿಸಿದರು. ಇವುಗಳನ್ನೆಲ್ಲಾ ಅನುಷ್ಠಾನಗೊಳಿಸುವಾಗ ಕೆಲ ತಪ್ಪುಗಳಾಗಿರಬಹುದು. ಅದಕ್ಕಾಗಿ ಕ್ಷಮೆ ಕೇಳುವೆ ಎಂದರು. ಹಾಸನದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿದರು.

Latest Videos

undefined

ಕಾಂಗ್ರೆಸ್ ಪಂಚ ಗ್ಯಾರಂಟಿಗಳು ನೈಜ ಜಾತ್ಯಾತೀತ ಕಾರ್ಯಕ್ರಮ: ಸಚಿವ ದಿನೇಶ್ ಗುಂಡೂರಾವ್

ಮುಜರಾಯಿ ಇಲಾಖೆಯೆ ಪ್ರಸಾದ ವಿತರಣೆ ಮಾಡಲಿ: ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಕಾರಣದಿಂದ ದೇವಾಲಯದ ಆವರಣದಲ್ಲಿ ಪ್ರಸಾದ ವಿತರಣೆಯನ್ನು ಮುಜರಾಯಿ ಇಲಾಖೆಯಿಂದಲೇ ವಿತರಣೆ ವ್ಯವಸ್ಥೆ ಮಾಡಿ, ರಾಜಕೀಯ ಪಕ್ಷಗಳ ವ್ಯಕ್ತಿಗಳು ವಿತರಣೆ ಮಾಡೋದು ಬೇಡ ಎಂದು ಶಾಸಕ ಎಚ್.ಡಿ.ರೇವಣ್ಣ ಸಲಹೆ ನೀಡಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್ ೨೪ರಂದು ಜರುಗುವ ಹಿನ್ನಲೆಯಲ್ಲಿ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಸ್ ವ್ಯವಸ್ಥೆ ಮಾಡದೇ ಎಲ್ಲರೂ ಸರದಿಯಲ್ಲಿ ತೆರಳಿ ಪೂಜೆ ಸಲ್ಲಿಸಲು ಅವಕಾಶ ನೀಡಿ. ಈಗಾಗಲೇ ಜಾತ್ರಾ ಮಹೋತ್ಸವದ ಆಚರಣೆ ಪತ್ರಿಕೆಯಲ್ಲಿ ಪೂಜಾ ಕೈಂಕರ್ಯಕ್ಕೆ ಹೆಸರು ನೊಂದಾಯಿಸಿ ಕೊಂಡಿರುವ ವ್ಯಕ್ತಿಗಳು ಆ ದಿನಗಳಲ್ಲಿ ಪೂಜಾ ಮಾಡಿಸಲು ಅಡ್ಡಿಪಡಿಸದಂತೆ ಸಲಹೆ ನೀಡಿದರು.

ಪಕ್ಷ ಗುಡಿಸು ಅಂದ್ರೆ ಗುಡಿಸ್ತೀನಿ, ಒರೆಸು ಅಂದ್ರೆ ಒರೆಸ್ತೀನಿ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾತನಾಡಿ, ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಕಾರಣದಿಂದ ಜಾತ್ರೆಯ ದಿನದಂದು ರಥದಲ್ಲಿ ಪೂಜೆ ಸಲ್ಲಿಸಲು ರಾಜಕಾರಣಿಗಳಿಗೆ ಅವಕಾಶ ನೀಡಬೇಡಿ. ಆ ರೀತಿ ಅವಕಾಶ ನೀಡುವುದಾದರೇ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಶ್ರೇಯಸ್ ಪಟೇಲರಿಗೂ ಅವಕಾಶ ನೀಡಬೇಕು. ತಪ್ಪಿದ್ದಲ್ಲಿ ಗಲಾಟೆಯಾಗುತ್ತೆ ಎಂದು ಎಚ್ಚರಿಸಿದರು. ತಹಸೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಜಾರಿಯಾದಲ್ಲಿ ಸರ್ಕಾರದ ಮಾರ್ಗಸೂಚಿಯ ಅನುಸಾರ ಜಾತ್ರಾ ಮಹೋತ್ಸವ ಜರುಗಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಸಹಕಾರ ನೀಡುವಂತೆ ತಿಳಿಸಿದರು.

click me!