ಮಾಜಿ ಶಾಸಕ ಸಿ.ಟಿ. ರವಿ ಸರ್ವಾಧಿಕಾರಿಯಂತೆ ವರ್ತಿಸಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಈಗ ಜಿಲ್ಲೆಯಲ್ಲಿ ಸೌಹಾರ್ದತೆಗೆ ಜೊತೆಗೆ ಅಭಿವೃದ್ಧಿಗೆ ಒತ್ತು ನೀಡಿ ಸರಿಪಡಿಸುತ್ತೇನೆ.
ಚಿಕ್ಕಮಗಳೂರು (ಮೇ 17): ಚಿಕ್ಕಮಗಳೂರಿನ ಮಾಜಿ ಶಾಸಕ ಸಿ. ಟಿ. ರವಿ ಸರ್ವಾಧಿಕಾರಿಯಂತೆ ವರ್ತಿಸಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಜಿಲ್ಲೆಯಲ್ಲಿ ಸೌಹಾರ್ದತೆಗೆ ಜೊತೆಗೆ ಅಭಿವೃದ್ಧಿಗೆ ಒತ್ತು ನೀಡುವುದಾಗಿ ನೂತನ ಶಾಸಕ ಎಚ್. ಡಿ .ತಮ್ಮಯ್ಯ ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಕೇಂದ್ರದಲ್ಲಿ 5 ಎಕರೆ ವಿಸ್ತೀರ್ಣದಲ್ಲಿ ಬುದ್ಧ ವಿಹಾರ ಹಾಗೂ ಅಂಬೇಡ್ಕರ್ ಭವನ ಸ್ಥಾಪಿಸುವುದಾಗಿ ತಿಳಿಸಿದರು.ತನ್ನ ಅವಧಿಯೂ ಸೇರಿದಂತೆ ನಗರಸಭೆ ಆಡಳಿತ ವನ್ನು ಸರ್ಕಾರದಿಂದ ಸಮಿತಿ ರಚಿಸಿ ತನಿಖೆ ಒಳಪಡಿಸುವುದಾಗಿ ಭರವಸೆ ನೀಡಿದರು. ನಾನೊಬ್ಬ ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವುದರ ಜೊತೆಗೆ ಏಕಸಾಮ್ಯ ಗುತ್ತಿಗೆಯನ್ನು ನಿಲ್ಲಿಸುವುದಾಗಿ ಹೇಳಿದರು.
undefined
ನಾನೇ ಪಕ್ಷ ಸಂಘಟಿಸುವುದಾಗಿ ಪಂಚೆಕಟ್ಟಿನಿಂತ ದೇವೇಗೌಡ! ಸಮಾಧಾನ ಮಾಡಿದ ಕುಮಾರಸ್ವಾಮಿ
ಅಮೃತ್ ನಗರೋತ್ಥಾನ ಮತ್ತು ಯುಜಿಡಿ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಒಂದು ವರ್ಷದ ಒಳಗೆ ಪೂರ್ಣಗೊಳಿಸುವ ವಿಶ್ವಾಸ ಹೊರ ಹಾಕಿದರು. ದಂಟರಮಕ್ಕಿ ಕೆರೆ, ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣದ ಬಗ್ಗೆಯೂ ಮಾಹಿತಿ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.ಗುಣಮಟ್ಟದ ಕೆಲಸಕ್ಕೆ ಸಹಕಾರ ,ಕಳಪೆ ಕಂಡು ಬಂದಲ್ಲಿ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ಕೊಟ್ಟು, ಜನ ಸ್ನೇಹಿ ಆಡಳಿತ, ಅಪೂರ್ಣ ನೀರಾವರಿ ಯೋಜನೆಗಳ ಪೂರ್ಣಗೊಳಿಸುವಿಕೆ, ನಿವೇಶನ ಹಕ್ಕು ಪತ್ರ ವಿತರಣೆ ಆದ್ಯತೆಗಳು ಎಂದರು.
ಸರ್ವ ಪಕ್ಷಗಳ ಮುಖಂಡರ ನಿಯೋಗ : ಡೀಮ್ಡ್ ಅರಣ್ಯ ರದ್ದುಗೊಳಿಸುವಂತೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರ ರಚನೆಯಾದ ಬಳಿಕ ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಸರ್ವ ಪಕ್ಷಗಳ ಮುಖಂಡರ ನಿಯೋಗವನ್ನು ಮುಖ್ಯ ಮಂತ್ರಿಗಳ ಬಳಿ ಕರೆದುಕೊಂಡು ಹೋಗಿ ಪುನರಾವಲೋಕನ ಸಭೆ ನಡೆಸಲಾಗುವುದು. ನಾನು ನಗರಸಭೆ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೈಗೊಂಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮಾಜಿ ಶಾಸಕರ ಅಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳನ್ನು ಸಮಗ್ರ ತನಿಖೆ ನಡೆಸಲು ಒತ್ತಾಯಿಸುತ್ತೇನೆ. ಬಸವನಹಳ್ಳಿ ಕೆರೆ ಅಭಿವೃದ್ಧಿಯಲ್ಲಿ ನಡೆದಿರುವ ಅವ್ಯವಹಾರವನ್ನು ಬಯಲಿಗೆ ತಂದು ಸಾರ್ವಜನಿಕರಿಗೆ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದ ಜನರೊಂದಿಗೆ ನೇರ ಸಂಪರ್ಕ : ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಬೆಂಬಲ ವ್ಯಕ್ತಪಡಿಸಿದ ಪ್ರಗತಿಪರ ಸಂಘಟನೆಗಳು, ಸಿಪಿಐ, ರೈತ ಸಂಘ, ದಲಿತ ಸಂಘಟನೆ, ಜೆಡಿಎಸ್ ಸೇರಿದಂತೆ ಪ್ರತ್ಯಕ್ಷ, ಪರೋಕ್ಷವಾಗಿ ಬೆಂಬಲಿಸಿದ್ದು ಈ ಜಯಕ್ಕೆ ಕಾರಣರಾದ ಪಕ್ಷದ ಎಲ್ಲಾ ನಾಯಕರಿಗೆ ಅಭಿನಂದಿಸಿದರು. ನಾನು ಸಾಮಾನ್ಯ ಜನರ ಅಭ್ಯರ್ಥಿಯಾಗಿದ್ದು, ಕ್ಷೇತ್ರದಲ್ಲಿ ನೇರ ಸಂಪರ್ಕ ಇಟ್ಟುಕೊಂಡಿರುತ್ತೇವೆ ಜನ ಸಾಮಾನ್ಯರು ತಮ್ಮ ಕೆಲಸಗಳಿಗಾಗಿ ನನ್ನ ದೂರವಾಣಿ ಸಂಪರ್ಕಿಸಿದರೆ ಸ್ಪಂದಿಸುತ್ತೇನೆ ಈವರೆಗೆ ನಾನು ಯಾವುದೇ ಗುತ್ತಿಗೆದಾರನಾಗಿ ಕೆಲಸ ಮಾಡಿಲ್ಲ ಮುಂದೆಯೂ ಮಾಡುವುದಿಲ್ಲ ಬಿಜೆಪಿ ಶಾಸಕರ ಅವಧಿಯಲ್ಲಿ ಆಗಿರುವ ಕಾಮಗಾರಿಗಳಂತೆ ಆಗಬಾರದು ಗುಣಮಟ್ಟದ ಕಾಮಗಾರಿಗೆ ಆದ್ಯತೆ ಕೊಡುತ್ತೇನೆ ಎಂದರು.
ಸೋಲಿನ ಪ್ರಾಯಶ್ಚಿತ ಪಾದಯಾತ್ರೆಗೆ ಮುಂದಾದ ವೈ.ಎಸ್.ವಿ.ದತ್ತ:
ಚಿಕ್ಕಮಗಳೂರು (ಮೇ 17): ಮೊನ್ನೆ-ಮೊನ್ನೆ ಮುಗಿದು 2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ವೈ.ಎಸ್.ವಿ.ದತ್ತ ಈ ಬಾರಿಯೂ ಸೋತಿದ್ದಾರೆ. ಇದೀಗ, ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಲು ಸೋಲಿನ ಪ್ರಾಯಶ್ಚಿತ ಪಾದಯಾತ್ರೆ ದತ್ತ ಮುಂದಾಗಿದ್ದಾರೆ.
ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಹಾಕಿದವರ, ಚರ್ಮ ಸುಲಿದ ಪೊಲೀಸರು!
ಚುನಾವಣೆಗೂ ಮುನ್ನ ಇದು ನನ್ನ ಕಡೆ ಎಲೆಕ್ಷನ್ ಎಂದಿದ್ದ ದತ್ತ ಇಂದಿಗೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ದತ್ತಾ ತಿಳಿಸಿದ್ದಾರೆ. ಕಡೂರಿಗರು ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ ನಾನಾಗಲೀ ಅಥವಾ ನಮ್ಮ ಕುಟುಂಬವಾಗಲಿ ಈ ಕ್ಷೇತ್ರವನ್ನ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ. ಕಡೂರು ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ನನ್ನ ಕೊನೆಯುಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಹಲವಾರು ತಪ್ಪುಗಳಿಗೆ ಜನರು ಸರಿಯಾದ ಶಿಕ್ಷೆ ನೀಡಿದ್ದಾರೆ. ತಪ್ಪು ಮಾಡಿದ ನಾನು ಅದಕ್ಕಾಗಿ ಪ್ರಾಯಾಶ್ಚಿತ್ತ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದೇನೆ.
ಹುಟ್ಟುಹಬ್ಬದ ದಿನದಿಂದು ಪ್ರಾಯಶ್ಚಿತ ಪಾದಯಾತ್ರೆ : ಜೂನ್ 24 ನನ್ನ ಜನ್ಮದಿನ. ಅಂದಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೆ ಪಾದಯಾತ್ರೆಯ ಮೂಲಕ ತೆರಳಿ ನನ್ನ ತಪ್ಪುಗಳಿಗಾಗಿ ಕ್ಷಮೆ ಕೋರುತ್ತೇನೆ. ಪಾದಯಾತ್ರೆಯಲ್ಲಿ ಹಳ್ಳಿಗಳಲ್ಲೇ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಈ ಸಂಕಲ್ಪ ಯಾವುದೇ ಚುನಾವಣಾ ದೃಷ್ಟಿಯಿಂದ ಮಾಡಿಲ್ಲ. ಕೇವಲ ನನ್ನ ಆತ್ಮಾವಲೋಕನ ಮಾತ್ರ. ಎಲ್ಲ ವಿವರಗಳನ್ನು ತಮಗೆ ತಿಳಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ದತ್ತ ಈ ಮಾತುಗಳನ್ನ ಹೇಳುತ್ತಿದ್ದಂತೆ ಕಾರ್ಯಕರ್ತರು ತಪ್ಪು ಮಾಡಿದ್ದು ಯಾರೋ... ನೀವ್ಯಾಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕು ಎಂದರು. ತಮ್ಮ ನಿರ್ಧಾರವನ್ನ ಕೈಬಿಡಬೇಕು ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ. ಆದರೆ, ದತ್ತ ನನ್ನ ನಿರ್ಧಾರ ಅಚಲ ಎಂದಿದ್ದಾರೆ.