ಆರಗ ಜ್ಞಾನೇಂದ್ರ ಸಭ್ಯಸ್ಥರಂತೆ ಮುಖವಾಡ ಧರಿಸಿರುವ ಗೋಮುಖ ವ್ಯಕ್ತಿ: ಶಾಸಕ ತಮ್ಮಯ್ಯ

Published : Aug 04, 2023, 10:36 PM IST
ಆರಗ ಜ್ಞಾನೇಂದ್ರ ಸಭ್ಯಸ್ಥರಂತೆ ಮುಖವಾಡ ಧರಿಸಿರುವ ಗೋಮುಖ ವ್ಯಕ್ತಿ: ಶಾಸಕ ತಮ್ಮಯ್ಯ

ಸಾರಾಂಶ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು (ಆ.04): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ ಪಕ್ಷದಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಎಚ್‌.ಡಿ. ತಮ್ಮಯ್ಯ, ಆರಗ ಜ್ಞಾನೇಂದ್ರ ಅವರು, ಸಭ್ಯಸ್ಥರಂತೆ ಮುಖವಾಡ ಧರಿಸಿರುವ ಗೋಮುಖ ವ್ಯಕ್ತಿ ಎಂದು ಶಾಸಕ ಆರೋಪಿಸಿದರು ಅಧಿಕಾರ ಕಳೆದುಕೊಂಡಮೇಲೆ ಅರಗ ಜ್ಞಾನೇಂದ್ರಗೆ ನೆನಪಿನ ಶಕ್ತಿ ಕಳೆದುಹೋಗಿದೆ. 

ಕಸ್ತೂರಿ ರಂಗನ್‌ ವರದಿ ಬಗ್ಗೆ ಈ ರಾಜ್ಯದ ಅರಣ್ಯ ಸಚಿವ ಈಶ್ವರಖಂಡ್ರೆ ಅವರು ಏನು ಹೇಳಿದ್ದಾರೆ ಎಂಬುದನ್ನು ಅರಿಯದೆ ಯಾರೋ ಹೇಳಿರುವುದನ್ನು ಕೇಳಿ ಕಸ್ತೂರಿ ರಂಗನ್‌ ವರದಿ ಬಗ್ಗೆ ಸಚಿವ ಖಂಡ್ರೆ ಅವರಿಗೆ ಏನು ಮಾಹಿತಿ ಇದೆ ಎಂಬ ಉದಾಹರಣೆ ಕೊಡುವ ರಭಸದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡಿರುವುದು ಅವರ ಮನಸ್ಥಿತಿ ತೋರಿಸುತ್ತದೆ ಎಂದು ಟೀಕಿಸಿದರು. ಈಶ್ವರ ಖಂಡ್ರೆಅವರು ಕೇವಲ ಸಚಿವರಲ್ಲ, ಇಡೀ ರಾಜ್ಯದ ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷರಾಗಿದ್ದಾರೆ, ಖರ್ಗೆ ಅವರು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರು ಮಾತ್ರವಲ್ಲ ಇಡೀ ದೇಶದ ದಲಿತ ನಾಯಕರಾಗಿದ್ದಾರೆ. 

ಉತ್ತರ ಕನ್ನಡ: ಜಿಲ್ಲಾ ಸರ್ಜನ್‌ಗೆ ಕ್ಲಾಸ್ ತೆಗೆದುಕೊಂಡ ಸಚಿವ ಮಂಕಾಳು ವೈದ್ಯ

ಈ ಇಬ್ಬರು ಪ್ರಮುಖ ನಾಯಕರ ಬಗ್ಗೆ ಬಿಜೆಪಿ ಮುಖಂಡರು ಅವಹೇಳನಕಾರಿಯಾಗಿ ಮಾತನಾಡಿರುವುದು ಮನಸ್ಸಿನಲ್ಲಿರುವುದು ಬಾಯಲ್ಲಿ ಬಂದಿದೆ ಎಂದು ಲೇವಡಿ ಮಾಡಿದರು. ಬಿಜೆಪಿಯವರ ಮನಸ್ಥಿತಿಯಲ್ಲಿ ಇಂದು ವೀರಶೈವ, ದಲಿತ ವಿರೋಧಿ ನೀತಿ ಎದ್ದು ಕಾಣುತ್ತಿದೆ. ಇದನ್ನು ಮಾಜಿ ಸಚಿವ ಅರಗ ಜ್ಞಾನೇಂದ್ರ ಮೂಲಕ ಹೇಳಿಸಿದ್ದಾರೆ, ಇದಕ್ಕೆ ನಮ್ಮ ಸಮಾಜ, ದಲಿತ ಸಮಾಜ, ಜಿಲ್ಲಾ ಕಾಂಗ್ರೆಸ್‌, ವಿವಿಧ ದಲಿತಪರ ಸಂಘಟನೆಗಳು ಖಂಡಿಸಬೇಕಾಗಿದೆ. ಹಿಂದೆ ಡಬಲ್‌ ಇಂಜಿನ್‌ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ, ಕಸ್ತೂರಿರಂಗನ್‌ ವರದಿ ಜಾರಿ ಮಾಡುವಾಗ ಏನು ಎಂದು ಪ್ರಶ್ನಿಸಿ ಬಿಜೆಪಿ ಸರ್ಕಾರದಲ್ಲಿ ಆನಂದ್‌ಸಿಂಗ್‌ ರವರು ಅರಣ್ಯ ಸಚಿವರಾಗಿದ್ದಾಗ ಪಶ್ಚಿಮ ಘಟ್ಟದವರಲ್ಲ ಎಂದು ತಿಳಿದಿರಲಿಲ್ಲವೇ ಎಂದು ದೂರಿದರು.

ಆರಗ ಜ್ಞಾನೇಂದ್ರ ಭುಜದ ಮೇಲೆ ಕೂರಿಸಿ ಸಂಘ ಪರಿವಾರ ಮತ್ತು ಆರ್‌ಎಸ್‌ಎಸ್‌ ಗುಂಡು ಹಾರಿಸಿದೆ, ದಲಿತರ, ಲಿಂಗಾಯಿತರ ಬಗ್ಗೆ ಇವರಿಗೆ ಕಾಳಜಿ ಇಲ್ಲ ಎಂಬುದು ಕಳೆದ 5 ವರ್ಷದ ಆಡಳಿತಾವಧಿಯಲ್ಲಿ ನಡೆಸಿದ ಅಧಿಕಾರ ಇದಕ್ಕೆ ಸಾಕ್ಷಿಯಾಗಿದೆ. ಜಿಲ್ಲೆ ಮತ್ತು ರಾಜ್ಯದ ಜನ ಕಳೆದ ಚುನಾವಣೆಯಲ್ಲಿ ಸರಿಯಾಗಿ ಬುದ್ಧಿ ಕಲಿಸಿದರೂ ಪಾಠ ಕಲಿತಿಲ್ಲ, ಇದೇ ಚಾಳಿ ಮುಂದುವರೆಸಿದರೆ ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು, ತಕ್ಕ ಉತ್ತರ ಕೊಡುತ್ತೇವೆ ಎಂದು ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಎಂ.ಎಲ್‌ ಮೂರ್ತಿ ಮಾತನಾಡಿ, ಮಾನವ ಕುಲ ತಲೆ ತಗ್ಗಿಸುವ ಹೀನ ಕೆಟ್ಟಸಂಸ್ಕೃತಿಯನ್ನು ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ಹಬ್ಬಿಸುವ ಕೆಲಸ ಮಾಡುತ್ತಿದೆ. ಒಂದು ಕಡೆ ನಾಗರೀಕರನ್ನು ಅಮಾನೀಯವಾಗಿ ಕೊಲೆ ಮಾಡಿದರೆ ಇನ್ನೊಂದು ಕಡೆ ಮಹಿಳೆಯರನ್ನು ಬೆತ್ತಲೆಗೊಳಿಸಿ ಬಿಜೆಪಿ ಬೆಂಬಲಿತರು ಸಾಮೂಹಿಕ ಅತ್ಯಾಚಾರ ಮಾಡಿ ಹತ್ಯೆ ಮಾಡುತ್ತಿರುವುದು ವಿಶ್ವ ಮಟ್ಟದಲ್ಲಿ ಭಾರತೀಯರೆಂದರೆ ಕೀಳುಮಟ್ಟದವರು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದರು.

ಹಿಂದೂ ಸಂಸ್ಕೃತಿ ವಿರುದ್ಧ ಬಿಜೆಪಿ ತನ್ನ ನಡೆಯನ್ನು ಇಡುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಸ್ತೂರಿ ರಂಗನ್‌ ವರದಿ ಜಾರಿ ಬಗ್ಗೆ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಕ್ಯಾಬಿನೆಟ್‌ ಉಪ ಸಮಿತಿ ರಚಿಸಲಾಗಿದೆ, ಇದರ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ, ಆದರೆ ಬಿಜೆಪಿ ಆರಗ ಜ್ಞಾನೇಂದ್ರ ತಮಗೆ ಬೇಕಾದ ಹಾಗೆ ನಾಲಿಗೆಯನ್ನು ಹರಿಬಿಟ್ಟಿದ್ದಾರೆ ಎಂದು ದೂರಿದರು.

Chitradurga: ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ವಿಧಾನ ಪರಿಷತ್‌ ಮಾಜಿ ಸದಸ್ಯೆ ಎ.ವಿ. ಗಾಯಿತ್ರಿ ಶಾಂತೇಗೌಡ ಮಾತನಾಡಿ, ಸೌಜನ್ಯದ ಸಜ್ಜನ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಆರಗ ಜ್ಞಾನೇಂದ್ರ ಅವಹೇಳನವಾಗಿ ಮಾತನಾಡಿರುವುದು ಸರಿಯಲ್ಲ. ಅವರು ಮೆದುಳಿಗೂ, ನಾಲಿಗೆಗೂ ಸಂಪರ್ಕ ಕಡಿತಗೊಂಡಂತೆ ವರ್ತಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷಎಚ್‌.ಪಿ ಮಂಜೇಗೌಡ, ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ನಯಾಜ್‌ ಅಹಮದ್‌, ಮಹಮ್ಮದ್‌ ಅಕ್ಬರ್‌, ನಗರಸಭಾ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಪಾಲ್ಗೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
Karnataka News Live: ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ: ಯತೀಂದ್ರಗೆ ಆಲ್ ದಿ ಬೆಸ್ಟ್ ಹೇಳಿದ ಕಾಂಗ್ರೆಸ್ ಶಾಸಕ