ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿದ್ದು ರಾಜ್ಯದಲ್ಲಿ ಇದೇ ಮೊದಲು: ಬಿಜೆಪಿ ಇತಿಹಾಸ ಬರೆದಿದೆ: ಸವದಿ ಟಾಂಗ್

By Ravi Janekal  |  First Published Jul 31, 2023, 11:40 AM IST

 ಬಿಜೆಪಿ ರಾಷ್ಟ್ರೀಯ ಪಕ್ಷ. ಅಧಿವೇಶನ ಮುಗಿದರೂ ಇವರಿಗೆ ವಿಪಕ್ಷ ನಾಯಕ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಬಿಜೆಪಿ ಇಂಥ ಹೊಸ ಹೊಸ ಇತಿಹಾಸ ಬರೆಯುವ ಕೆಲಸ ಮಾಡುತ್ತಿರುತ್ತದೆ ಎಂದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು.


ಬೆಳಗಾವಿ (ಜು.31) : ಬಿಜೆಪಿ ರಾಷ್ಟ್ರೀಯ ಪಕ್ಷ. ಅಧಿವೇಶನ ಮುಗಿದರೂ ಇವರಿಗೆ ವಿಪಕ್ಷ ನಾಯಕ ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಬಿಜೆಪಿ ಇಂಥ ಹೊಸ ಹೊಸ ಇತಿಹಾಸ ಬರೆಯುವ ಕೆಲಸ ಮಾಡುತ್ತಿರುತ್ತದೆ ಎಂದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯಾಧ್ಯಕ್ಷ ಯಾರನ್ನು ಮಾಡುತ್ತಾರೆ, ಬಿಡುತ್ತಾರೆ ಅದು ನಮಗೆ ಅವಶ್ಯಕತೆ ಇಲ್ಲ. ಆದರೆ ದುರ್ದೈವದ ಸಂಗತಿ ಎಂದರೆ ಬಿಜೆಪಿ ರಾಷ್ಟ್ರೀಯ ಪಕ್ಷ. ಅಧಿವೇಶನ ಮುಗಿದರೂ ಕೂಡ ವಿರೋಧ ಪಕ್ಷದ ನಾಯಕನ ಇಲ್ಲದೆ ಇರುವುದು ದುರಂತದ ಕತೆ. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದೆ ಚರ್ಚೆ ನಡೆದಿದ್ದು ರಾಜ್ಯದಲ್ಲಿ ಇದೇ ಮೊದಲನೇ ಬಾರಿಗೆ. ಹೊಸ ಹೊಸ ಇತಿಹಾಸ ಬರೆಯುವ ಕೆಲಸ ಬಿಜೆಪಿ ಮಾಡುತ್ತದೆ ಎಂದರು.

Latest Videos

undefined

ಬಿಜೆಪಿಗೆ ವಿಪಕ್ಷ ನಾಯಕನ ಆಯ್ಕೆ ಮಾಡಲೇ ಆಗುತ್ತಿಲ್ಲ: ಲಕ್ಷ್ಮಣ ಸವದಿ

ಗೆಳೆತನಕ್ಕೆ ಹಾಗೂ ರಾಜಕೀಯಕ್ಕೆ ಸಾಕಷ್ಟು ವ್ಯತ್ಯಾಸ ಇದೆ. ಸಿ.ಟಿ.ರವಿ(CT ravi) ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರೆ ಎನ್ನುವ ಊಹೆಗಳು ಎದ್ದಿವೆ. ಅವರು ರಾಜ್ಯಾಧ್ಯಕ್ಷರಾದರೆ ನಾನು ಶುಭ ಕೋರುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.


ವರ್ಗಾವಣೆ ದಂಧೆ ಆರೋಪ; ಬೊಮ್ಮಾಯಿಗೆ ಸವದಿ ಟಾಂಗ್:

ಇಡೀ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಕಿಡಿಕಾರಿದ ಸವದಿ, ಸರ್ಕಾರ ಎಲ್ಲ ಬಗೆಯ ಸಹಾಯ ಮಾಡುತ್ತಿದ್ದು, ಯಾವುದೇ ಅಧಿಕಾರವಿಲ್ಲದೇ ಅಸಹಾಯಕತೆಯಿಂದ ಬಸವರಾಜ ಬೊಮ್ಮಾಯಿ(Basavaraj bommai) ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಒಳ್ಳೆಯ ಕೆಲಸ ಮಾಡುತ್ತಿದ್ದು, ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.

ಶಕ್ತಿ ಯೋಜನೆ(Shakti scheme)ಯಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಶಕ್ತಿ ಯೋಜನೆಯಿಂದ ಯಾವುದೇ ರೀತಿಯ ಆರ್ಥಿಕ ತೊಂದರೆ ಆಗಿಲ್ಲ. ಅದರಿಂದ ಸಾಕಷ್ಟುಸಹಾಯವಾಗಿದೆ. ಏಕೆಂದರೆ ಜನರು ದಿನನಿತ್ಯ ಸಾರಿಗೆ ಸಂಸ್ಥೆಗಳಲ್ಲಿ ಪ್ರತಿದಿನ ಹೆಚ್ಚು ಹೆಚ್ಚು ಪ್ರಯಾಣಿಸುತ್ತಿದ್ದಾರೆ. ಇದರಿಂದ ಸಂಸ್ಥೆಗೆ ಹೆಚ್ಚಿನ ಲಾಭವಾಗಿದೆ ಎಂದರು.

ಸಂಪತ್ತನ್ನು ಹಂಚಿ ತಿನ್ನುವ ಸ್ವಭಾವ ಹೊಂದಿ: ಶಾಸಕ ಲಕ್ಷ್ಮಣ ಸವದಿ

ಶಾಸಕರೊಬ್ಬರು ನೀಡಿದ್ದ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿದು ಹಾಕಿದ್ದಾರೆ ಎನ್ನುವುದು ಊಹಾಪೋಹ. ಅದಕ್ಕೆ ಸಾಕ್ಷಿ ಏನಾದರೂ ಇದೆಯೇ ಎಂದು ಪ್ರಶ್ನಿಸಿದ ಸವದಿ, ಶಾಸಕರ ಅಸಮಾಧಾನ ಕುರಿತು ಚರ್ಚಿಸಲು ದೆಹಲಿಯಲ್ಲಿ ಸಭೆ ಕರೆದಿಲ್ಲ. ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲು ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ ಕರೆದಿದ್ದಾರೆ. ಅಸಮಾಧಾನಗೊಂಡ ಶಾಸಕರ ಜತೆ ಈಗಾಗಲೇ ಶಾಸಕಾಂಗ ಸಭೆ ಕರೆದು ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜಕಾರಣ ನಿಂತ ನೀರಲ್ಲ; ಸಹಕಾರ ಸಚಿವ ಕೆಎನ್‌ ರಾಜಣ್ಣ

ಬೆಳಗಾವಿ (ಜು.31): ರಾಜಕಾರಣ ನಿಂತ ನೀರಲ್ಲ. ರಾಜಕಾರಣ ಎನ್ನುವುದು ಈಗ ಇದ್ದಂತೆ ಯಾವಾಗಲು ಇರುವುದಿಲ್ಲ ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೇಳಿದರು.

ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಯಾವಾಗ ಬೇಕಾದರೂ ಬದಲಾಗಬಹುದು. ಕುಮಾರಸ್ವಾಮಿ ಬಿಜೆಪಿಯವರೊಂದಿಗೆ ಹೊಂದಾಣಿಕೆ ಮಾಡಿಕೊಂಡು‌ ಲೋಕಸಭಾ ಚುನಾವಣೆ ಎದುರಿಸುವ ವಿಚಾರ ಅವರಿಗೆ‌ ಬಿಟ್ಟಿದ್ದು. ಅವರು ಸ್ವತಂತ್ರರು. ಅವರು ಯಾರ ಜೊತೆ ಬೇಕಾದರೂ ಸೇರಿ ಲೋಕಸಭಾ ಚುನಾವಣೆ ಮಾಡಬಹುದು ಎಂದರು.

click me!