ಬಿಜೆಪಿಯವರು ಮೊದಲು ನೆರೆ ಹಾವಳಿ, ಅತಿವೃಷ್ಟಿಯಿಂದ ಹಾಳಾಗಿದ್ದಾಗ ಏನು ಪರಿಹಾರ ಕೊಟ್ಟರು ಎನ್ನುವುದನ್ನು ಹೇಳಲಿ. ಅವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗುತ್ತಿಲ್ಲ.
ಹುಬ್ಬಳ್ಳಿ (ಜು.31): ಬಿಜೆಪಿಯವರು ಮೊದಲು ನೆರೆ ಹಾವಳಿ, ಅತಿವೃಷ್ಟಿಯಿಂದ ಹಾಳಾಗಿದ್ದಾಗ ಏನು ಪರಿಹಾರ ಕೊಟ್ಟರು ಎನ್ನುವುದನ್ನು ಹೇಳಲಿ. ಅವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗುತ್ತಿಲ್ಲ. ನಮ್ಮ ಪಕ್ಷದ ಬಗ್ಗೆ ಏನ್ ಮಾತನಾಡುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಉಪಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಟಾಂಗ್ ಕೊಟ್ಟರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಆಗಲೇ ಸರಿಯಾಗಿ ಪರಿಹಾರ ನೀಡಿಲ್ಲ. ಇನ್ನೂ ಎಷ್ಟೋ ಸಂತ್ರಸ್ತರಿಗೆ ಪರಿಹಾರ ನೀಡುವುದು ಬಾಕಿಯಿದೆ. ನಮ್ಮ ಸರ್ಕಾರ ಎಲ್ಲರಿಗೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಿದೆ ಎಂದರು.
ತಿರುಪತಿ, ಗೋವಾ, ಹೈದರಾಬಾದ್‌ಗೂ ವಿಮಾನ ಹಾರಾಟಕ್ಕೆ ಅನುಮತಿ: ಸಂಸದ ರಾಘವೇಂದ್ರ
ಇಡೀ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಕಿಡಿಕಾರಿದ ಸವದಿ, ಸರ್ಕಾರ ಎಲ್ಲ ಬಗೆಯ ಸಹಾಯ ಮಾಡುತ್ತಿದ್ದು, ಯಾವುದೇ ಅಧಿಕಾರವಿಲ್ಲದೇ ಅಸಹಾಯಕತೆಯಿಂದ ಬಸವರಾಜ ಬೊಮ್ಮಾಯಿ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದು, ವಿನಾಕಾರಣ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದರು.
ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಶಕ್ತಿ ಯೋಜನೆಯಿಂದ ಯಾವುದೇ ರೀತಿಯ ಆರ್ಥಿಕ ತೊಂದರೆ ಆಗಿಲ್ಲ. ಅದರಿಂದ ಸಾಕಷ್ಟು ಸಹಾಯವಾಗಿದೆ. ಏಕೆಂದರೆ ಜನರು ದಿನ ನಿತ್ಯ ಸಾರಿಗೆ ಸಂಸ್ಥೆಗಳಲ್ಲಿ ಪ್ರತಿದಿನ ಹೆಚ್ಚು ಹೆಚ್ಚು ಪ್ರಯಾಣಿಸುತ್ತಿದ್ದಾರೆ. ಇದರಿಂದ ಸಂಸ್ಥೆಗೆ ಹೆಚ್ಚಿನ ಲಾಭವಾಗಿದೆ ಎಂದರು.
ಟೋಲ್ ಸಂಗ್ರಹಿಸುವವರು ನಾವಲ್ಲ, ಹೆದ್ದಾರಿ ಪ್ರಾಧಿಕಾರದವರು: ಸಿದ್ದರಾಮಯ್ಯ
ಶಾಸಕರೊಬ್ಬರು ನೀಡಿದ್ದ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿದು ಹಾಕಿದ್ದಾರೆ ಎನ್ನುವುದು ಊಹಾಪೋಹ. ಅದಕ್ಕೆ ಸಾಕ್ಷಿ ಏನಾದರೂ ಇದೆಯೇ ಎಂದು ಪ್ರಶ್ನಿಸಿದ ಸವದಿ, ಶಾಸಕರ ಅಸಮಾಧಾನ ಕುರಿತು ಚರ್ಚಿಸಲು ದೆಹಲಿಯಲ್ಲಿ ಸಭೆ ಕರೆದಿಲ್ಲ. ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ ಕರೆದಿದ್ದಾರೆ. ಅಸಮಾಧಾನಗೊಂಡ ಶಾಸಕರ ಜತೆ ಈಗಾಗಲೇ ಶಾಸಕಾಂಗ ಸಭೆ ಕರೆದು ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.