ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಗಂಡಸರು ಇಲ್ವಾ?: ಲಕ್ಷ್ಮಣ ಸವದಿ

By Kannadaprabha News  |  First Published Mar 20, 2024, 10:55 AM IST

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್‌ ಸ್ಪರ್ಧೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ, ಬೆಳಗಾವಿ ಜಿಲ್ಲೆಯಲ್ಲಿ ಯಾರೂ ಗಂಡಸರು ಇಲ್ವಾ ಎಂದು ತೀಕ್ಷ್ಣವಾಗಿ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. 


ಬೆಂಗಳೂರು (ಮಾ.20): ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್‌ ಸ್ಪರ್ಧೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ, ಬೆಳಗಾವಿ ಜಿಲ್ಲೆಯಲ್ಲಿ ಯಾರೂ ಗಂಡಸರು ಇಲ್ವಾ ಎಂದು ತೀಕ್ಷ್ಣವಾಗಿ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತೊರೆದು ಏಕಾಏಕಿ ಬಿಜೆಪಿ ಸೇರಿ, ಈಗ ಏಕಾಏಕಿ ಅಭ್ಯರ್ಥಿಯಾಗಲು ಹೊರಟಿರುವ ಶೆಟ್ಟರ್‌ ಏಕಾಏಕಿ ಸೋಲುತ್ತಾರೆ. ಧಾರವಾಡದವರು ಬಂದು ಬೆಳಗಾವಿ ಆಳುತ್ತಾರೆ ಎಂದರೆ ಏನರ್ಥ? ಬೆಳಗಾವಿ ಜನರೇನು ಬಿಜೆಪಿಗೆ ಗುಲಾಮರೇ? ಮಾಜಿ ಸಂಸದ ದಿ.ಸುರೇಶ್ ಅಂಗಡಿಯವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ.

ಹಾಲಿ ಸಂಸದರಾದ ಪತ್ನಿ ಮಂಗಳಾ ಅಂಗಡಿಯವರನ್ನು ಏಕೆ ತೆಗೆಯುತ್ತಿದ್ದಾರೆ? ಬಿಜೆಪಿಗೆ ಹಿರಿಯರು, ಚಾತುರ್ಯತೆ ಇರುವವರು, ಸಂಘಟನೆಗೆ ಬಲ ತರುವವರ ಅವಶ್ಯಕತ ಇಲ್ಲ ಎಂದು ಟೀಕಿಸಿದರು. ನಮ್ಮ ಮನೆಯಲ್ಲಿ ನಮ್ಮ ಯಜಮಾನ ಇರಬೇಕು ಎಂದು ಬೆಳಗಾವಿ ಜನ ಈಗಾಗಲೇ ತೀರ್ಮಾನ ಮಾಡಿದ್ದಾರೆ. ಇದರ ಹೊರತಾಗಿಯು ಹೊರಗಿನವರು ಚುನಾವಣೆಗೆ ನಿಂತರೆ ಸೋಲುವುದು ಖಚಿತ. ಜಗದೀಶ್ ಶೆಟ್ಟರ್ ಬೆಳಗಾವಿಗೆ ಬರುವುದರಿಂದ ಬಿಜೆಪಿ ನಾಶ ವಾಗುತ್ತದೆ ಎಂದು ಭವಿಷ್ಯ ನುಡಿದರು. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ಬಿಜೆಪಿಯಿಂದ ಹಲವರು ಕಾಂಗ್ರೆಸ್‌ಗೆ ಸೇರಲಿದ್ದಾರೆ. ಈಗಾಗಲೇ ಚರ್ಚೆ ನಡೆ ಯುತ್ತಿದೆ. ಟಿಕೆಟ್ ಸಿಗದ ಡಿ.ವಿ. ಸದಾನಂ ದಗೌಡ, ಪ್ರತಾಪ್ ಸಿಂಹ ಹಾಗೂ ಕರಡಿ ಸಂಗಣ್ಣ ಮನಸ್ಸಿನ ಮಾತುಗಳನ್ನು ಆಡಿದ್ದಾರೆ ಎಂದು ಸವದಿ ಹೇಳಿದರು.

Tap to resize

Latest Videos

ಬೆಂ.ಗ್ರಾ.ದಲ್ಲಿ ಡಿ.ಕೆ.ಬ್ರದರ್ಸ್‌ರಿಂದ ಕುಕ್ಕರ್ ಹಂಚಿಕೆ: ಕುಮಾರಸ್ವಾಮಿ ಗಂಭೀರ ಆರೋಪ

ಕುಡಿಯುವ ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಿ: ಬೇಸಿಗೆ ಬಿಸಿಲಿನ ತಾಪ ಅಧಿಕವಾಗುತ್ತಿದ್ದು, ಅಗತ್ಯವಿರುವ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರನ್ನು ಟ್ಯಾಂಕರ್ ಗಳ ಮೂಲಕ ಒದಗಿಸುವ ವ್ಯವಸ್ಥೆ ಕಲ್ಪಿಸಬೇಕು. ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅಧಿಕಾರಿಗಳು ಈಗಿನಿಂದಲೇ ಜಾಗೃತಿ ವಹಿಸಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ಪಟ್ಟಣದ ತಾಪಂ ಸಭಾಂಗಣದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನ ಪೂರ್ವ ಭಾಗದ ತೆಲಸಂಗ ಹೋಬಳಿಯಲ್ಲಿ ಉತ್ತರ ಭಾಗದ ಅನಂತಪುರ ಹೋಬಳಿಯಲ್ಲಿನ ಅನೇಕ ಗ್ರಾಮಗಳ ತೋಟದ ವಸತಿಗಳಲ್ಲಿ ನೀರಿನ ಸಮಸ್ಯೆ ಬಗ್ಗೆ ದೂರು ಬರುತ್ತಿದ್ದು, ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಜನರಿಗೆ ನೀರಿನ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಮುಂಬರುವ ದಿನಗಳಲ್ಲಿ ರೈತರ ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕೂಡಲೇ ಮೇವು ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆಗೆ ಇಂದು ಅಧಿಕೃತ ಚಾಲನೆ: ಮೊದಲ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ

ಟಾಸ್ಕ್ ಫೋರ್ಸ್ ಸಮಿತಿಯ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಹೆಚ್ಚು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ನೀರಿಗೆ ಸಂಬಂಧಿಸಿದ ದೂರುಗಳು ಬಂದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು. ಅಧಿಕಾರಿಗಳಿಗೆ ಯಾವುದೇ ತಾಂತ್ರಿಕ ಸಮಸ್ಯೆಗಳು ಬಂದಲ್ಲಿ, ನನಗೆ ಮಾಹಿತಿ ನೀಡಿ, ನಾನು ಮೇಲಧಿಕಾರಿಗಳ ಜೊತೆ ಮಾತನಾಡಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ತಹಸೀಲ್ದಾರ್ ವಾಣಿ ಯು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಜಿಪಂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ ವೀರಣ್ಣ ವಾಲಿ, ತಾಲೂಕು ವೈದ್ಯಾಧಿಕಾರಿ ಡಾ. ಬಸವಗೌಡ ಕಾಗೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ರವೀಂದ್ರ ಮುರುಗಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

click me!