ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಜನತೆಗೆ ನೆಮ್ಮದಿ ಜೀವನ ನಡೆಸುವ ಭರವಸೆ ಸಿಕ್ಕಿದೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಹೇಳಿದರು.
ಕಾಗವಾಡ (ಆ.21): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಜನತೆಗೆ ನೆಮ್ಮದಿ ಜೀವನ ನಡೆಸುವ ಭರವಸೆ ಸಿಕ್ಕಿದೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಹೇಳಿದರು. ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಂಗಾವತಿ ಗ್ರಾಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದಲ್ಲಿ ಕೇವಲ ಜಾತಿ-ಧರ್ಮದ ವಿಷಯಗಳನ್ನು ಪ್ರಸ್ತಾಪಿಸಿ ಜನರ ನೆಮ್ಮದಿಯಿಂದ ಇಲ್ಲದಂತಿದ್ದರು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತ ಹೆಜ್ಜೆ ಹಾಕಿದ್ದು, ಇಂದು ರಾಜ್ಯದ ಜನ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ ಎಂದರು.
ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನು ನೀಡಲಾಗಿತ್ತು. ಅದರಲ್ಲಿ ಮಹಿಳೆಯರಿಗೆ ಬಸ್ ಉಚಿತ ಪ್ರಯಾಣಕ್ಕೆ ಅನುಮತಿ, ನೀಡಿದ್ದು ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದೆ. 200 ಯುನಿಟ್ ಉಚಿತ ವಿದ್ಯುತ್ ಪ್ರೀ, ಪ್ರತಿ ಬಿಪಿಎಲ್, ಪಡಿತರದಾರರಿಗೆ 5 ಕೆಜಿ ಅಕ್ಕಿ ಹಾಗೂ .170 ಸೇರಿದಂತೆ ಉಳಿದ ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು. ಬಿಜೆಪಿಗರು ಜನರಲ್ಲಿ ಗೊಂದಲ ಮೂಡಿಸುತ್ತಿದ್ದು, ಜನತೆ ಬಿಜೆಪಿಗರ ಮಾತಿಗೆ ಕಿವಿಗೊಡಬೇಡಿ ಎಂದು ಕೋರಿದರು.
ಕೊಡಗು-ಮೈಸೂರು ಲೋಕಸಭೆ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿ ಯಾರಿದ್ದಾರೆ?: ಪ್ರತಾಪ್ ಸಿಂಹ
ಈ ವೇಳೆ ಪಿಎಲ್‌ಡಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರಾಜಗೌಡ ಪಾಟೀಲ ಹಾಗೂ ಮುಖಂಡರು ಶಾಸಕ ರಾಜು ಕಾಗೆಯವರಿಗೆ ಪೇಠ ಹಾಕಿ ಸನ್ಮಾನಿಸಿದರು. ಈ ವೇಳೆ ಅಣ್ಣಾಸಾಬ್ ಪಾಟೀಲ, ವಿಯ ಅಕಿವಾಟೆ, ಕಾಕಾ ಪಾಟೀಲ, ಶಂಕರ ಪಾಟೀಲ, ಅನೀಲ ಪಾಟೀಲ, ಅಣ್ಣಾಸಾಬ್ ಪಾಟೀಲ, ಅನೀಲ ಕಡೋಲಿ, ಸೌರಭ ಪಾಟೀಲ, ಜ್ಯೋತಿಕುಮಾರ ಪಾಟೀಲ, ಉಮೇಶಗೌಡ ಪಾಟೀಲ, ರುದ್ರಗೌಡ ಪಾಟೀಲ, ಶಂಕರಗೌಡ ಪಾಟೀಲ, ಪರಗೌಡ ಪಾಟೀಲ, ಸುರೇಶ ಪಾಟೀಲ, ಬಾಳಗೌಡ ಪಾಟೀಲ, ರವಿ ಕುರಣೆ, ಅವಿನಾಶ ಪಾಟೀಲ, ಬಾಬಾಸಾಬ್ ತಾರದಾಳೆ ಸೇರಿದಂತೆ ಅನೇಕ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದವರು ಅರಸು: ಶೋಭಾ ಕರಂದ್ಲಾಜೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆಂಬ ಕಾರಣಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ವಂಚಿಸುತ್ತಿದ್ದು, ಇದಕ್ಕೆ ಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷ ಎಂದಿಗೂ ಜಾತಿ, ಧರ್ಮ ನೋಡಿ ಯೋಜನೆಗಳನ್ನು ರೂಪಿಸುವುದಿಲ್ಲ. ನಮ್ಮದು ಜನಪರ ಸರ್ಕಾರ. ಜನರಿಗಾಗಿ ಒಳಿತನ್ನೇ ಮಾಡುತ್ತೇವೆ ವಿನಃ ವಂಚನೆ ಮಾಡಲ್ಲ.
-ರಾಜು ಕಾಗೆ, ಶಾಸಕರು, ಕಾಗವಾಡ ಮತಕ್ಷೇತ್ರ