ವಿಜಯೇಂದ್ರ, ಯಡಿಯೂರಪ್ಪ ಕಾಲಿನ ಧೂಳಿಗೂ ಸಮನಲ್ಲ: ರಮೇಶ ಜಾರಕಿಹೊಳಿ

By Kannadaprabha News  |  First Published Dec 3, 2024, 10:15 AM IST

ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರನ್ನು ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ಪಾಪ ರೇಣುಕಾಚಾರ್ಯ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ. ಇನ್ ಡೋರ್ ಸಭೆ ಮಾಡಿ ಕೇಳಲಿ ಹೇಳುತ್ತೇನೆ: ರಮೇಶ ಜಾರಕಿಹೊಳಿ 


ಬೆಳಗಾವಿ(ಡಿ.03): ಶಾಸಕ ಬಿ.ವೈ.ವಿಜಯೇಂದ್ರಗೆ ನಾಲ್ಕು ವರ್ಷದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕಿತ್ತು ಎಂದು ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದ್ದಾರೆ. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಎರಡು ದಿನಗಳ ಹಿಂದೆಯೇ ಶೋಕಾಸ್‌ ನೋಟಿಸ್ ಬಂದಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹುಟ್ಟು ಹೋರಾಟಗಾರ. ಆದರೆ, ವಿಜಯೇಂದ್ರ, ಬಿಎಸ್‌ವೈ ಅವರ ಕಾಲಿನ ಧೂಳಿಗೂ ಸಮನಲ್ಲ. ಜೀನ್ಸ್ ಪ್ಯಾಂಟ್, ಟೀ ಶರ್ಟ್ ಹಾಕಿ ಅಡ್ಡಾಡುವ ವಯಸ್ಸು ಅವರದು. ಇನ್ನೂ 4 ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು. ನಾವು ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ. ಕೇಂದ್ರ ನಾಯಕರ ಮನವೊಲಿಸುತ್ತೇವೆ ಎಂದರು.

Tap to resize

Latest Videos

undefined

ಕಾಂಗ್ರೆಸ್ ಸರ್ಕಾರ ಬೀಳಿಸೋದಾಗಿದ್ರೆ ನಾನೇ ನೇತೃತ್ವ ವಹಿಸ್ತಿದ್ದೆ: ರಮೇಶ ಜಾರಕಿಹೊಳಿ

ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರನ್ನು ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ಪಾಪ ರೇಣುಕಾಚಾರ್ಯ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ. ಇನ್ ಡೋರ್ ಸಭೆ ಮಾಡಿ ಕೇಳಲಿ ಹೇಳುತ್ತೇನೆ ಎಂದು ಹೇಳಿದರು.

ಯತ್ನಾಳ್ ಬೆನ್ನಿಗೆ ನಿಲ್ಲೇವೆ: ಕುಮಾರ ಬಂಗಾರಪ್ಪ 

ಬೆಳಗಾವಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನಾವು ಹೈಕಮಾಂಡ್ ನಾಯಕರ ಭೇಟಿ ಮಾಡಿ ಯತ್ನಾಳ್ ಅವರ ಪರವಾಗಿ ಮಾತನಾಡುತ್ತೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ತಿಳಿಸಿದ್ದಾರೆ. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಕ್ಫ್‌ ಬೋರ್ಡ್ ಭೂಕಬಳಿಕೆ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಶೋಕಾಸ್ ನೋಟಿಸ್‌ ನೀಡಿಲ್ಲ ಅನಿಸುತ್ತದೆ. ನಮ್ಮ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಮನವೊಲಿಸುತ್ತೇವೆ. ಬಿಜೆಪಿ ಸಂಘಟನೆಯಲ್ಲಿ ಯತ್ನಾಳ್ ಅವರ ಪಾತ್ರ ಬಹುಮುಖ್ಯವಾಗಿದ್ದು, ನಾವೆಲ್ಲರೂ ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರೆಬಲ್ ಅನ್ನೋದೆ ಸಚಿವ ಸ್ಥಾನವಿದ್ದಂತೆ, ನನಗೆ ಕಾಂಗ್ರೆಸ್‌, ಬಿಜೆಪಿಯಲ್ಲೂ ಅನ್ಯಾಯ: ರಮೇಶ ಜಾರಕಿಹೊಳಿ

ಗೋಕಾಕ: ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೆಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೆಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದರು. 

ಹುಲಿಯಂತಿದ್ದ ಸಿದ್ದು ಈಗ ಇಲಿ ಆಗಿದ್ದಾರೆ, ಅವರ ಈಗಿನ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತೆ: ಜಾರಕಿಹೊಳಿ

ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿದ ರಾಜಋಷಿ ಶ್ರೀ ಭಗೀರಥರ ಮೂರ್ತಿ ಅನಾವರಣ ಕಾರ್ಯಕ್ರಮ ಹಾಗೂ ಶುಕ್ರವಾರ ಆಯೋಜಿಸಿದ್ದ ಜಗದ್ಗುರು ಶ್ರೀ ಪುರುಷೋತ್ತಮಾ ನಂದಪುರಿ ಮಹಾಸ್ವಾಮಿಗಳ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಪಕ್ಷದಲ್ಲೂ ಅನ್ಯಾಯ ಆಗಿದೆ. ಬಿಜೆಪಿ ಕೆಲ ಮುಖಂಡರಿಂದಲೂ ಅನ್ಯಾಯವಾಗಿದೆ. ನನ್ನದು ಹೋರಾಟದ ಬದುಕು ಎಂದರು. 

ಹಿಂದುಳಿದ ಜನಾಂಗಗಳನ್ನು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ. ಹಿಂದುಳಿದ ಜನಾಂಗ ಸುಮಾರು ಶೇ.70ಕ್ಕಿಂತ ಹೆಚ್ಚಿದ್ದು, ಅವರಿಗೆ ಸಿಗಬೇಕಾದ ಮೀಸಲಾತಿ ಸಿಗುತ್ತಿಲ್ಲ. ಅದರ ಬಗ್ಗೆ ಈಗಾಗಲೇ ಶ್ರೀಗಳ ಸಮ್ಮುಖದಲ್ಲಿ ಚರ್ಚಿಸಿದ್ದೇನೆ. ಅವರೆಲ್ಲರ ಮಾರ್ಗದರ್ಶನ ಪಡೆದು ಬೃಹತ್ ಹೋರಾಟ ಆಯೋಜಿಸಲಾಗುವುದು ಎಂದು ವಿರೋಧ ಪಕ್ಷದಲ್ಲಿದ್ದಾಗ ಬೇರೆ ಮಾತಾಡುತ್ತಾರೆ. ಅಧಿಕಾರಕ್ಕೆ ಬಂದಾಗ ಮಾತನಾಡಿದ್ದನ್ನು ಕಾರ್ಯ ರೂಪಕ್ಕೆ ತರುವುದಿಲ್ಲ, ನಾವು ನೋಡಿದ ಒಳ್ಳೆಯ ರಾಜಕಾರಣಿ ಮಾಜಿ ಸಿಎಂ ಬಂಗಾರಪ್ಪನವರು. ಅವರಂತೆ ನಾನು ನುಡಿದಂತೆ ನಡೆಯುತ್ತಿದ್ದೇನೆ. ಹಿಂದುಳಿದ ವರ್ಗಗಳು ಎಸ್ಪಿಗೆ ಸೇರಲು ಅರ್ಹತೆ ಹೊಂದಿವೆ. ಎಸ್ಪಿಗೆ ಸೇರಲು ನಾವು ವಿರೋಧ ಮಾಡಲ್ಲ, ಈಗಿರುವ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದರು. 

click me!