ಗ್ಯಾರಂಟಿ ಟೀಕಿಸುವವರು ಯೋಜನೆಯ ಸಹ ಫಲಾನುಭವಿಗಳಾಗಿದ್ದಾರೆ: ಶಾಸಕ ಆರ್.ವಿ.ದೇಶಪಾಂಡೆ

Published : Oct 31, 2025, 08:27 AM IST
RV Deshpande

ಸಾರಾಂಶ

ಇಂದು ಗ್ಯಾರಂಟಿ ಯೋಜನೆಗಳಿಂದ ಬಡವರ, ಶೊಷಿತರ ಬದುಕು ಹಸನಾಗಿದೆ, ಯಾರೂ ಎಷ್ಟೇ ಟೀಕಿಸಲಿ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಸರ್ವರು ಪಕ್ಷಾತೀತವಾಗಿ ಪಡೆಯಲಾರಂಭಿಸಿದ್ದಾರೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಹಳಿಯಾಳ (ಅ.31): ಯಾರೂ ಎಷ್ಟೇ ಟೀಕಿಸಲಿ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಸರ್ವರು ಪಕ್ಷಾತೀತವಾಗಿ ಪಡೆಯಲಾರಂಭಿಸಿದ್ದಾರೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ದುರ್ಗಾ ನಗರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಿಸಿಎಂ ಇಲಾಖೆಯ ವಿವಿಧ ಸಮುದಾಯಗಳ ಅಭಿವೃದ್ಧಿ ಯೋಜನೆಯಡಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಇಂದು ಹಳಿಯಾಳ ತಾಲೂಕಿನಲ್ಲಿ 28.582 ಗ್ರಾಹಕರು ವಿದ್ಯುತ್ ಸಂಪರ್ಕ ಹೊಂದಿದ್ದು, ಅದರಲ್ಲಿ ಕೇವಲ 132 ಗ್ರಾಹಕರು ಮಾತ್ರ ವಿದ್ಯುತ್ ಬಿಲ್ ಪಾವತಿಸುತ್ತಿದ್ದಾರೆ. ಇಂದು ಗ್ಯಾರಂಟಿ ಯೋಜನೆಗಳಿಂದ ಬಡವರ, ಶೊಷಿತರ ಬದುಕು ಹಸನಾಗಿದೆ ಎಂಬ ಸತ್ಯವನ್ನು ಎಲ್ಲರೂ ಒಪ್ಪುತ್ತಾರೆ ಎಂದರು. ಚುನಾವಣಾ ಸಮಯದಲ್ಲಿ ನೀಡಿದ ವಾಗ್ದಾನದಂತೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ದೇಶದಲ್ಲಿ ಗ್ಯಾರಂಟಿ ಯೋಜನೆಗಳನ್ನು ಮೊದಲ ಬಾರಿಗೆ ಜಾರಿಗೊಳಿಸಿದ್ದು ನಮ್ಮ ರಾಜ್ಯದಲ್ಲಿ ಅದೂ ನಮ್ಮ ಕಾಂಗ್ರೆಸ್ ಪಕ್ಷದಿಂದ. ಅಂದೂ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳು ಸಹ ಇಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾರಂಭಿಸಿವೆ ಎಂದರು.

ಮೂಲಭೂತ ಸೌಲಭ್ಯ: ಕುಡಿಯುವ ನೀರು, ಆರೋಗ್ಯಕರ ಪರಿಸರ, ಕಾನೂನು ಸುವ್ಯವಸ್ಥೆ, ನಿಲುಗಡೆಯಿಲ್ಲದ ವಿದ್ಯುತ್ ಪೂರೈಕೆ, ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿರುವುದರಿಂದ ಹಳಿಯಾಳ ಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳಿರುವುದರಿಂದ ಹಳಿಯಾಳ ಇಂದು ಬೆಳೆಯಲಾರಂಭಿಸಿದೆ ಎಂದರು. ಐಟಿಐ, ಡಿಪ್ಲೋಮಾ, ಎಂಜಿನಿಯರಿಂಗ್, ಪದವಿ ಶಿಕ್ಷಣ ಸೌಲಭ್ಯವಿರುವುದಿಂದ ನೆರೆಯ ತಾಲೂಕು, ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಳಿಯಾಳ ಬರುತ್ತಿದ್ದು, ಇಂದು ಹಳಿಯಾಳ ಶೈಕ್ಷಣಿಕ ಕೇಂದ್ರವಾಗಿಯೂ ಗುರುತಿಸಲ್ಪಡುತ್ತಿದೆ ಎಂದರು. ತಾಲೂಕಿನ ಗ್ರಾಮಾಂತರ ಭಾಗದ ಹಾಗೂ ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಿ ಕೈಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಪಟ್ಟಣದ ನೀರಿನ ಸಮಸ್ಯೆಗೆ ಬಗೆಹರಿಸುವ ದಿಸೆಯಲ್ಲಿ ಕೈಗೊಂಡಿರುವ ಅಮೃತ್-2 ಯೋಜನೆಯ ಕಾರ್ಯ ಅಂತೀಮ ಹಂತಕ್ಕೆ ತಲುಪಿದ್ದು, ಅತೀ ಶೀಘ್ರದಲ್ಲಿ ಈ ಯೋಜನೆಗಳು ಕಾರ್ಯಾರಂಭಿಸಲಿವೆ ಎಂದರು.

ಶಿಲಾನ್ಯಾಸ

ತಾಲೂಕಿನ ಮದನಳ್ಳಿ ಗ್ರಾಮದಲ್ಲಿ ₹60 ಲಕ್ಷ ವೆಚ್ಚದಲ್ಲಿ ರಸ್ತೆ ಸುಧಾರಣಾ ಕಾಮಗಾರಿ, ₹15 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ, ಪರಿಶಿಷ್ಟ ಬಡಾವಣೆಗಳಲ್ಲಿ ರಸ್ತೆ ಸುಧಾರಣೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಹಳಿಯಾಳ ಪುರಭವನದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣೆ ಹಾಗೂ ಶಿಕ್ಷಣ ಇಲಾಖೆಯಿಂದ 85 ವಿಕಲಚೇನತರಿಗೆ ಸಾಧನ ಸಲಕರಣೆ ವಿತರಣೆಗೆ ಚಾಲನೆ ನೀಡಿದರು. ಪುರಸಭಾ ಅಧ್ಯಕ್ಷೆ ದ್ರೌಪದಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಅನಿಲ ಚವ್ಹಾನ, ಸಂಗೀತಾ ವಾಟ್ಲೆಕರ, ಶಮೀಮಬಾನು ಜಂಬೂವಾಲೆ, ಶಂಕರ ಬೆಳಗಾಂವಕರ, ಬಿಸಿಎಮ್ ಇಲಾಖೆಯ ಜಿಲ್ಲಾ ಆದಿಕಾರಿ ಶಿವಕ್ಕ ಮಾದರ, ಹಳಿಯಾಳ ಬಿಸಿಎಮ್ ಅಧಿಕಾರಿ ಸುಜಾತಾ ಖಡತರೆ, ಪುರಸಭಾ ಮಾಜಿ ಅಧ್ಯಕ್ಷ ಉಮೇಶ ಬೊಳಶೆಟ್ಟಿ ಹಾಗೂ ಇತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದ್ವೇಷ ಭಾಷಣ ಮಾಡಲೆಂದೇ ವಿರೋಧ ಪಕ್ಷದವರು ಮಸೂದೆಗೆ ವಿರೋಧ?: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಪ್ರಶ್ನೆ
ನರೇಗಾ ಸಮರ: ಹೆಚ್‌ಡಿಕೆ ಸವಾಲು ಸ್ವೀಕರಿಸಿದ ಡಿಕೆಶಿ; 'ಇಂದೇ ಡಿಬೇಟ್‌ಗೆ ಬರ್ತೀನಿ' ಎಂದು ಪಂಥಾಹ್ವಾನ!