ಮಹಿಳಾ ಮೀಸಲು ಕಾಂಗ್ರೆಸ್‌, ಯುಪಿಎ ಪ್ರಯತ್ನಕ್ಕೆ ಸಂದ ಜಯ: ಶಾಸಕ ದೇಶಪಾಂಡೆ

By Kannadaprabha News  |  First Published Sep 20, 2023, 7:22 AM IST

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಮಂಡನೆ ಆಗಿರುವುದು ಕಾಂಗ್ರೆಸ್‌ ಪಕ್ಷ ಹಾಗೂ ಯುಪಿಎ ಸರ್ಕಾರದ ಪ್ರಯತ್ನಗಳಿಗೆ ಸಂದ ಜಯವಾಗಿದೆ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಸಂತಸ ವ್ಯಕ್ತಪಡಿಸಿದ್ದಾರೆ. 


ಬೆಂಗಳೂರು (ಸೆ.20): ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕ ಮಂಡನೆ ಆಗಿರುವುದು ಕಾಂಗ್ರೆಸ್‌ ಪಕ್ಷ ಹಾಗೂ ಯುಪಿಎ ಸರ್ಕಾರದ ಪ್ರಯತ್ನಗಳಿಗೆ ಸಂದ ಜಯವಾಗಿದೆ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಮಹಿಳೆಯರಿಗೆ ಸಂಸತ್ತು ಮತ್ತು ವಿಧಾನ ಸಭೆಯಲ್ಲಿ ಶೇಕಡ 33ರಷ್ಟು ಸ್ಥಾನಗಳನ್ನು ಮೀಸಲಿಡಲು ಕೇಂದ್ರ ಸಚಿವ ಸಂಪುಟ ಸಭೆ ಕೈಗೊಂಡ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಮಹಿಳಾ ಮೀಸಲಾತಿಯು ಕಾಂಗ್ರೆಸ್‌ನ ಯೋಜನೆ ಮತ್ತು ಕನಸಾಗಿತ್ತು. 

ಇದು ಕಾಂಗ್ರೆಸ್‌ ಮತ್ತು ಯುಪಿಎ ಸರ್ಕಾರದ ವಿಜಯವೆಂದೇ ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷ ಸದಾ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಾ ಬಂದಿದೆ. ರಾಜ್ಯದಲ್ಲಿ ಮಹಿಳೆಯರ ಅಭಿವೃದ್ಧಿಗಾಗಿ ಗೃಹಲಕ್ಷ್ಮಿ ಮತ್ತು ಸ್ತ್ರೀ ಶಕ್ತಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ತನ್ನ ಕಾಳಜಿಯನ್ನು ತೋರಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Tap to resize

Latest Videos

65 ವರ್ಷಗಳ ಹಿಂದೆಯೇ ಶಿಷ್ಯವೇತನ ನೀಡಿದ್ದ ನನ್ನ ಅಜ್ಜಿ: ಜಿಎಸ್‌ಬಿ ಸಮಾಜದ ಬಡ ಪ್ರತಿಭಾವಂತ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಸದುದ್ದೇಶದಿಂದ ನನ್ನ ಅಜ್ಜಿ ಗೋಪಿಕಾಬಾಯಿ 65 ವರ್ಷಗಳ ಹಿಂದೆಯೇ ಶಿಷ್ಯವೇತನ ವಿತರಿಸುವ ಯೋಜನೆಗೆ ಮುಂದಾಗಿರುವುದು ಮಾದರಿ ಹೆಜ್ಜೆಯಾಗಿದೆ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು. ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ದಿ. ಗೋವಿಂದರಾವ್ ವಿಶ್ವನಾಥರಾವ್ ದೇಶಪಾಂಡೆ ಮತ್ತು ಗೋಪಿಕಾಬಾಯಿ ಗೋವಿಂದರಾವ್ ದೇಶಪಾಂಡೆ ಶಿಕ್ಷಣ ಟ್ರಸ್ಟ್ ವತಿಯಿಂದ ಜಿಎಸ್‌ಬಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ 202-23ನೇ ಸಾಲಿನ ಶಿಷ್ಯವೇತನ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಚೈತ್ರಾ ವಂಚನೆ ಕೇಸ್‌: ಕೊನೆಗೂ ಹಾಫ್ ಪ್ಯಾಂಟ್, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!

ಆಧುನಿಕ ಜಗತ್ತು ಸ್ಪರ್ಧಾತ್ಮಕ ಯುಗವಾಗಿದ್ದು, ಇದಕ್ಕೆ ನಾವು ಸಜ್ಜಾಗಬೇಕಿದೆ. ಬುದ್ಧಿಮತ್ತೆ, ಜಾಣ್ಮೆ, ಕೌಶಲ್ಯ ಇದ್ದವರು ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದರು. 47 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ವಿತರಿಸಲಾಯಿತು. ಜಿಎಸ್‌ಬಿ ಸಮಾಜದ ಅಧ್ಯಕ್ಷ ನಿತೀನ ದೇಶಪಾಂಡೆ, ವಿಆರ್‌ಡಿಎಂ ಟ್ರಸ್ಟ್ ಧರ್ಮದರ್ಶಿ ರಾಧಾಬಾಯಿ ದೇಶಪಾಂಡೆ, ಉಪನ್ಯಾಸಕ ಅಭಯ ಇಂಚಲ, ಜಯಶ್ರೀ ಇಂಚಲ, ಪ್ರಸಾದ ಹುನ್ಸವಾಡಕರ, ಉದಯ ಮಾನಗೆ, ದೇಶಪಾಂಡೆ ಭವನದ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ. ಮಾನಗೆ ಇದ್ದರು.

click me!