ರಾಜ್ಯದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 3 ಕ್ಷೇತ್ರ ಆಯ್ಕೆ ಮಾಡಿಕೊಂಡು ಅರ್ಜಿ ಹಾಕಿದ್ದೇನೆ. ಅದರಲ್ಲಿ ಯಾವ ಕ್ಷೇತ್ರಕ್ಕೆ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್ ವರಿಷ್ಠರು ನಿರ್ಧಾರ ಮಾಡುತ್ತಾರೆ.
ವರದಿ- ಷಡಕ್ಷರಿ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್
ವಿಜಯಪುರ (ಫೆ.26) : ರಾಜ್ಯದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 3 ಕ್ಷೇತ್ರ ಆಯ್ಕೆ ಮಾಡಿಕೊಂಡು ಅರ್ಜಿ ಹಾಕಿದ್ದೇನೆ. ಅದರಲ್ಲಿ ಯಾವ ಕ್ಷೇತ್ರಕ್ಕೆ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್ ವರಿಷ್ಠರು ನಿರ್ಧಾರ ಮಾಡುತ್ತಾರೋ, ನಾನು ಅಲ್ಲಿಯೇ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಸ್ಪಷ್ಟಪಡಿಸಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಸ್ವ ಕ್ಷೇತ್ರ ಬಸವನಬಾಗೇವಾಡಿ, ನನ್ನ ಹಳೆಯ ಕ್ಷೇತ್ರ ಬಬಲೇಶ್ವರ ಹಾಗೂ ವಿಜಯಪುರ ನಗರ ಕ್ಷೇತ್ರದಲ್ಲೊಂದು ಸ್ಪರ್ಧಿಸುವ ಇಚ್ಚೆಯಿಂದ ಅರ್ಜಿ ಸಲ್ಲಿಸಿದ್ದೇನೆ. ಕೆಲವರು ಇದು ಬ್ಲ್ಯಾಕ್ ಮೇಲ್ ತಂತ್ರ ಎಂದು ಪ್ರಚಾರ ಮಾಡುತ್ತಿದ್ದಾರೆ, ಆದರೆ ತಾನು ಜೀವನ ದಲ್ಲಿ ಈ ರೀತಿ ಬ್ಲ್ಯಾಕ್ ಮೇಲ್ ಮಾಡಿಲ್ಲ ಎಂದರು. ಬಬಲೇಶ್ವರ ಮೊದಲು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿತ್ತು. ಮತದಾರರಿಗೆ ಹೇಳದೇ ಕ್ಷೇತ್ರ ಬಿಟ್ಟು ಹೋಗಿದ್ದೇನೆ. ಇದು ನನ್ಮ ತಪ್ಪು ನಿರ್ಧಾರ ವಾಗಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.
Vijayapura: ರಾಜ್ಯದಲ್ಲಿಯೇ ಬಬಲೇಶ್ವರ ಮತಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುವೆ: ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲರು ಸ್ಪರ್ಧಿಸಿದರೆ ಗೆಲ್ಲಿಸಿಕೊಡುತ್ತೇನೆ: ವರಿಷ್ಠರು ಬಸವನಬಾಗೇವಾಡಿ ಕ್ಷೇತ್ರಕ್ಕೆ ನನಗಿಂತ ಯೋಗ್ಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಮುಂದಾದರೆ ಅವರನ್ನು ಸಹ ಸ್ವಾಗತಿಸುತ್ತೇನೆ. ಅದು ಏಕೆ ಎಂ.ಬಿ.ಪಾಟೀಲರು ನನ್ನ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರನ್ನು ಗೆಲ್ಲಿಸಿಕೊಡುವದು ನನ್ನ ಜವಾಬ್ದಾರಿಯಾಗಿದೆ ಎಂದ ಅವರು ಮೊನ್ನೆ ಸಿದ್ದರಾಮಯ್ಯ ಆಗಮಿಸಿದ್ದ ಪ್ರಜಾಧ್ವನಿ ಯಾತ್ರೆಯಲ್ಲಿ ಬಬಲೇಶ್ವರ ಕ್ಷೇತ್ರದ ಕಾರ್ಯಕ್ರಮದಲ್ಲಿ ನಾನು ಗೈರಾಗಿದ್ದು, ಅದಕ್ಕೆ ಕಾರಣವಿದೆ, ಎಲ್ಲ ಕ್ಷೇತ್ರದಲ್ಲಿ ಭಾಗವಹಿಸಿದ್ದೆ, ದೇವರಹಿಪ್ಪರಗಿಯಲ್ಲಿ ಭಾಗವಹಿಸಿದ್ದ ವೇಳೆ ಒಬ್ಬರು ನಿಧನರಾದ ಸುದ್ದಿ ತಿಳಿದು ಸಿದ್ದರಾಮಯ್ಯ ಅವರ ಅನುಮತಿ ಪಡೆದು ಗೈರಾಗಿದ್ದೇನೆ ಹೊರತು ಅನ್ಯಥಾ ಭಾವಿಸಬೇಡಿ ಎಂದು ಸ್ಪಷ್ಟಪಡಿಸಿದರು.
ಟಿಕೆಟ್‌ಗೆ ಅರ್ಜಿ ಹಾಕದಂತೆ ಸೂಚನೆ: ಶಾಸಕ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಈ ಚುನಾವಣೆಯಲ್ಲಿ ಪ್ರಬಲ ಆಕಾಂಕ್ಷಿ ಯಾಗಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಶಾಸಕ ಶಿವಾನಂದ ಪಾಟೀಲ, ನಾನು ಮೊದಲೇ ಹೇಳಿದ್ದೇನೆ. ನನ್ನ ಪುತ್ರಿ ಅಥವಾ ಪುತ್ರನಾಗಲಿ ಅರ್ಜಿ ಹಾಕಬೇಡಿ ಎಂದು ಆದರೆ ಯುವ ಜನತೆ ಚಿಂತನೆ ಬೇರೆ ಇರುತ್ತದೆ. ವರಿಷ್ಠರು ಟಿಕೇಟ್ ನೀಡಿದರೆ ಸ್ಪರ್ಧಿಸಲಿ. ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಈ ವೇಳೆ ಬಬಲೇಶ್ವರ ಕ್ಷೇತ್ರ ಸ್ಪರ್ಧೆಗೆ ಇಂಗಿತ ವ್ಯಕ್ತಪಡಿಸುತ್ತಿರುವದು ಎಷ್ಟು ಸರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಚಾರ ಮಾಡಲಿ ಬಿಡಿ ನಾನು ಬಾಗೇವಾಡಿಯಲ್ಲಿ ಪ್ರಚಾರ ಮಾಡುತ್ತಿಲ್ಲ, ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ತಾನೆ ಎಂದರು.
Bagalkote: ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬರೋ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ: ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದು ಕೋಲಾರ ಕಡೆ ಹೊರಟಿರಬಹುದು. ಅದೇ ಒಬ್ಬ ಲೀಡರ್ ಗುಣ, ಸಾಮರ್ಥ್ಯ ಯಾವ ಮೂಲೆಯಲ್ಲಿ ನಿಂತರು ಗೆಲ್ಲುವ ಸಾಮರ್ಥ್ಯವಿದೆ. ಅವರಿಗೆ ರಾಜ್ಯದ ಯಾವ ಮೂಲೆಯಲ್ಲಿ ನಿಂತರೂ ಜನರು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸುತ್ತಾರೆ. ಅವರೊಬ್ಬ ಮಾಸ್ ಲೀಡರ್ ಎಂದು ಹೇಳಿದರು.