ಶಾಸಕ ಎಸ್‌.ಟಿ. ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಚರ್ಚೆ: ಯಶವಂತಪುರಕ್ಕೆ 7.63 ಕೋಟಿ ರೂ. ಅನುದಾನ ಮಂಜೂರು

Published : Aug 22, 2023, 11:44 AM ISTUpdated : Aug 22, 2023, 11:49 AM IST
ಶಾಸಕ ಎಸ್‌.ಟಿ. ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಚರ್ಚೆ: ಯಶವಂತಪುರಕ್ಕೆ 7.63 ಕೋಟಿ ರೂ. ಅನುದಾನ ಮಂಜೂರು

ಸಾರಾಂಶ

ಲೋಕಸಭಾ ಚುನಾವಣೆಗೂ ಮುನ್ನ ಶಾಸಕ ಎಸ್‌.ಟಿ. ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಚರ್ಚೆ ನಡೆದಿರುವ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ 7 ಕೋಟಿ ರೂ. ಅನುದಾನ ಕೊಡಲಾಗಿದೆ.

ಬೆಂಗಳೂರು (ಆ.22): ಲೋಕಸಭಾ ಚುನಾವಣೆ 2024ಕ್ಕೆ ಮುಂಚಿತವಾಗಿ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಅದರಲ್ಲಿಯೂ ಸಮ್ಮಿಶರ ಸರ್ಕಾರ ಬೀಳಲು ಹಾಗೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಕಾರಣವಾಗಿದ್ದ ಶಾಸಕ ಎಸ್‌ಟಿ. ಸೋಮಶೇಖರ್‌ ಈಗ ಪುನಃ ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಸುಳಿವಿನ ಬೆನ್ನಲ್ಲಿಯೇ ಸೋಮಶೇಖರ್ ಅವರ ಯಶವಂತಪುರ ವಿಧಾನಸಭಾ ಕ್ಷೇತ್ರದಕ್ಕೆ ಕಾಂಗ್ರೆಸ್‌ ಸರ್ಕಾರವು 7.63 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ.

ರಾಜ್ಯದಲ್ಲಿ ಗ್ಯಾರಂಟಿಗಳ ಭರವಸೆಯ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರದಿಂದ ಈಗ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಉಳಿದೆರಡು ಗ್ಯಾರಂಟಿ ಜಾರಿ ಸಿದ್ಧತೆಯಲ್ಲಿವೆ. ಆದರೆ, ಗ್ಯಾರಂಟಿ ಕಾರ್ಯಕ್ರಮಗಳ ಜಾರಿಗಾಗಿ ಹೆಚ್ಚಿನ ಅನುದಾನ ಬೇಕಾಗಿದ್ದು, ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರಗಳಿಗೂ ವಿಶೇಷ ಅಥವಾ ಹೆಚ್ಚುವರಿ ಅನುದಾನ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದರು. ಆದರೆ, ಲೋಸಕಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ 20 ಸೀಟು ಗೆಲ್ಲಲು ಗುರು ಇಟ್ಟುಕೊಂಡಿದೆ. ಈ ಹಿನ್ನೆಲೆಯಲ್ಲಿ ಗೆಲ್ಲುವ ಕುದುರೆಗಳಿಗೆ ಗಾಳ ಹಾಕುತ್ತಿದೆ.

ಸಹಕಾರ ಕ್ಷೇತ್ರದಲ್ಲಿ ನಾನು ಈ ಮಟ್ಟಕ್ಕೆ ಬೆಳೆಯಲು ನನ್ನ ಗುರು ಡಿಕೆಶಿ ಕಾರಣ: ಎಸ್‌ಟಿ ಸೋಮಶೇಖರ್

ಆಪರೇಷನ್‌ ಹಸ್ತದ ಗಾಳಕ್ಕೆ ಸೋಮಶೇಖರ್‌ ಮೊದಲ ಮೀನು?
ಇನ್ನು ಈಗಾಗಲೇ ರಾಜ್ಯದಲ್ಲಿ ಆಪರೇಷನ್‌ ಹಸ್ತವನ್ನು ಆರಂಭಿಸಲಾಗಿದೆ, ಈ ಕುರಿತಂತೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ ತೊರೆದು ಹೋಗಿದ್ದ ಶಾಸಕರಿಗೆ ಘರ್‌ ವಾಪಸಿಗೆ ಚಾಲನೆ ನೀಡಿದೆ. ಇದರ ಮೊದಲ ಹಂತದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌ಟಿ. ಸೋಮಶೇಖರ್‌ ಅವರನ್ನು ಸೆಳೆಯಲು ಚರ್ಚೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಸರ್ಕಾರ ಆರ್ಥಿಕ ಸಂಕಷ್ಟದ ನಡುವೆಯೂ 7.63 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ. ಈ ಮೂಲಕ ಎಸ್ ಟಿ ಸೋಮಶೇಖರ್ ಕ್ಷೇತ್ರಕ್ಕೆ ಬಂಪರ್‌ ಅನುದಾನ ಸಿಕ್ಕಂತಾಗಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲು ಅನುದಾನದ ಹಣ ಹಂಚಿಕೆ ಮಾಡಲಾಗಿದೆ. ಇದರಲ್ಲಿ ಟ್ಯಾಂಕರ್‌ ಮೂಲಕ ನೀರಿನ ಸರಬರಾಜು, ಬೋರ್‌ವೆಲ್‌ಗಳನ್ನು ಕೊರೆಸುವುದು ಹಾಗೂ ಅವುಗಳ ನಿರ್ವಹಣೆ ಸೇರಿದಂತೆ ವಿವಿಧ ಕಾರ್ಯಕ್ಕೆ ಹಣ ಹಂಚಿಕೆ ಮಾಡಲಾಗಿದೆ.

ಯಾವ ಕಾರ್ಯಕ್ಕೆ ಎಷ್ಟು ಅನುದಾನ ಮೀಸಲು: ಸರ್ಕಾರ ಯಶವಂತಪುರ ಕ್ಷೇತ್ರಕ್ಕೆ ನೀಡಿದ ಅನುದಾನದಲ್ಲಿ ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ 1.63 ಕೋಟಿ ರೂ.,ಗಳನ್ನು ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಮೀಸಲು ಇಡಲಾಗಿದೆ. ಇನ್ನು ಹೊಸದಾಗಿ ಬೋರ್‌ವೆಲ್‌ (ಕೊಳವೆ ಬಾವಿ) ಕೊರೆಸಲು 4 ಕೋಟಿ ರೂ.ಗಳನ್ನು ಹಾಗೂ ನೀರಿನ ಸರಬರಾಜು ನಿರ್ವಹಣೆ ಕಾರ್ಯಕ್ಕೆ 2 ಕೋಟಿ ರೂ. ಅನುದಾನ ಮೀಸಲು ಇಡಲಾಗಿದೆ. ಈ ಅನುದಾನದ ಬೆನ್ನಲ್ಲಿಯೇ ಸೋಮಶೇಖರ್‌ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬಿಬಿಎಂಪಿ ಮೂಲಕ‌ ಭರ್ಜರಿ ಗಿಫ್ಟ್ ನೀಡಿದ್ದಾರೆಯೇ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.

ಬಿಜೆಪಿ ಶಾಸಕ ಸೋಮಶೇಖರ್‌ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ಪರಮೇಶ್ವರ್‌

ಸೋಮಶೇಖರ್‌ ಅವರನ್ನು ಕಾಂಗ್ರೆಸ್‌ಗೆ ಸ್ವಾಗತ ಕೋರಿದ್ದ ಗೃಹ ಸಚಿವ ಪರಮೇಶ್ವರ್‌: ಈ ಕರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ  ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಹಿಂದೆ ಕಾಂಗ್ರೆಸ್‌ಗೆ ದುಡಿದಿದ್ದವರು. ಕಾಂಗ್ರೆಸ್‌ ಪಕ್ಷದಲ್ಲಿ ಉತ್ತಮ ಕೆಲಸ ಮಾಡಿದ್ದರು. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಅವರನ್ನು ಬೆಂಗಳೂರು ನಗರ ಜಿಲ್ಲಾಧ್ಯಕ್ಷನ್ನಾಗಿಯೂ ಮಾಡಿದ್ದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತ, ನಾವು ಅವರಿಗೆ ಯಾವುದೇ ಭೇದ ಮಾಡುವುದಿಲ್ಲ’ ಎಂದು ತಿಳಿಸಿದ್ದರು.  ಎಸ್‌.ಟಿ. ಸೋಮಶೇಖರ್‌ ಪಕ್ಷಕ್ಕೆ ಬರುತ್ತೇನೆ ಎಂದರೆ ಒಪ್ಪುತ್ತೇವೆ. ಆದರೆ ಈವರೆಗೆ ನಾನು ಅವರನ್ನು ಸಂಪರ್ಕ ಮಾಡಿಲ್ಲ. ನಾನು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷನಾಗಿದ್ದಾಗ ಜಿಲ್ಲಾಧ್ಯಕ್ಷರಾಗಿ ಅವರು ಒಳ್ಳೆಯ ಕೆಲಸ ಮಾಡಿದ್ದರು. ಪಕ್ಷವೂ ಅವರನ್ನು ಅದೇ ರೀತಿ ನೋಡಿಕೊಂಡಿದ್ದರು. ನಮ್ಮ ಪಕ್ಷದಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಇಲ್ಲೇ ಇದ್ದಿದ್ದರೆ ಅವರಿಗೆ ಸಚಿವ ಸ್ಥಾನ ಸಿಗುತ್ತಿತ್ತು. ಈಗಲೂ ಅವರಿಗೆ ಅಲ್ಲಿ ಬೇಸರವಾಗಿ ಪಕ್ಷಕ್ಕೆ ವಾಪಸು ಬರುವುದಾದರೆ ಒಪ್ಪುತ್ತೇವೆ ಎಂದು ಹೇಳಿದ್ದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ