ಯಾವ ಆಕಾರದಲ್ಲಿ ಟಿಪ್ಪು ಪ್ರತಿಮೆ ಮಾಡಬೇಕೆಂದು ನಿರ್ಧಾರವಾಗಿಲ್ಲ: ತನ್ವೀರ್ ಸೇಠ್

Published : Nov 12, 2022, 12:15 PM ISTUpdated : Nov 12, 2022, 01:39 PM IST
ಯಾವ ಆಕಾರದಲ್ಲಿ ಟಿಪ್ಪು ಪ್ರತಿಮೆ ಮಾಡಬೇಕೆಂದು ನಿರ್ಧಾರವಾಗಿಲ್ಲ: ತನ್ವೀರ್ ಸೇಠ್

ಸಾರಾಂಶ

ರಾಷ್ಟ್ರದ ಏಕತೆ, ಅಭಿವೃದ್ಧಿ ಎಲ್ಲವೂ ಭಾರತದ ಸಂವಿಧಾನದ ಅಡಿಯಲ್ಲಿ ನಡೆಯಬೇಕು. ನಾನು ಯಾರಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. 

ಮೈಸೂರು (ನ.12): ರಾಷ್ಟ್ರದ ಏಕತೆ, ಅಭಿವೃದ್ಧಿ ಎಲ್ಲವೂ ಭಾರತದ ಸಂವಿಧಾನದ ಅಡಿಯಲ್ಲಿ ನಡೆಯಬೇಕು. ನಾನು ಯಾರಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಭಾರತದಲ್ಲಿ ಇತರರಿಗೆ ಇಸ್ಲಾಂ ಸಂಪ್ರದಾಯದಲ್ಲಿ ಯಾವುದೇ ಪ್ರತಿಮೆ ಹಾಕುವುದಿಲ್ಲ. ಪ್ರತಿಮೆ ಹಾಕಿದ್ರೆ ಎಲ್ಲಾ ಕಡೆಗಳಲ್ಲಿ ನಮ್ಮ ಪ್ರತಿಮೆ ರಾರಾಜಿಸುತ್ತಿತ್ತು. ಯಾವ ಆಕಾರದಲ್ಲಿ ಟಿಪ್ಪು ಸುಲ್ತಾನರ ಪ್ರತಿಮೆ ಮಾಡಬೇಕೆಂದು ಇನ್ನೂ ನಿರ್ಧಾರವಾಗಿಲ್ಲ. ಕಂಚಿನಲ್ಲಿ ಮಾಡಬೇಕ, ಯಾವ ಆಕಾರದಲ್ಲಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು. 

ರಾಜ್ಯ ಮತ್ತು ಕೇಂದ್ರ ಸರ್ಕಾರ ಅಭಿವೃದ್ಧಿಯಲ್ಲಿ ಶೂನ್ಯ. ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಪ್ರತಿಮೆ ಮಾಡಲು‌ ಚಿಂತನೆ ಮಾಡಲಾಗಿದ್ದು, ಟಿಪ್ಪು ಆಳ್ವಿಕೆಯ ನೈಜ್ಯ ಸಂಗತಿಯನ್ನ ಯುವ ಪೀಳಿಗೆಗೆ ತಿಳಿಸಲು ಪ್ರತಿಮೆ ಮಾಡುತ್ತೇವೆ ಎಂದರು. ಇನ್ನು ರಂಗಾಯಣದಲ್ಲಿ ಟಿಪ್ಪು ಕನಸು ನಾಟಕ ವಿಚಾರವಾಗಿ ನಾಟಕಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಟ ನಡೆಸುತ್ತೇ‌ನೆ ಎಂದು ತನ್ವೀರ್ ಸೇಠ್ ಹೇಳಿದರು.

ಪ್ರತಿಮೆಗೆ ಸರ್ಕಾರದ ಹಣ ಬೇಡ ಎಂದು ಮೊದಲೇ ಹೇಳಿದ್ದೆ: ಡಿಕೆಶಿ

ತನ್ವೀರ್ ಸೇಠ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಎಂ.ಬಿ.ಪಾಟೀಲ್‌: ನಾವು ಸಹ ಟಿಪ್ಪು ಪ್ರತಿಮೆ ಕಟ್ಟುತ್ತೇವೆ ಎಂಬ ತನ್ವೀರ್ ಸೇಠ್ ಹೇಳಿಕೆ ವಿಚಾರವಾಗಿ ಎಂ.ಬಿ.ಪಾಟೀಲ್‌ ಪ್ರತಿಕ್ರಿಯಿಸಿದ್ದು, ಟಿಪ್ಪು ಅವರು ಬ್ರಿಟಿಷ್  ವಿರುದ್ಧ ಹೋರಾಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮ  ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಅವರ ಪ್ರತಿಮೆಗಳನ್ನು ಅಪೇಕ್ಷೆ ಇದ್ದರೆ ಅದಕ್ಕೆ ಯಾರು ವಿರೋಧ ವ್ಯಕ್ತಪಡಿಸಬಾರದು. ಅವರೆಲ್ಲ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಎಂದು ಹೇಳಿದರು.

ಟಿಪ್ಪು ಉತ್ಸವ ಆಚರಣೆ: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದರು. ರಾಜೀವ್‌ನಗರ ಅಲ್‌ ಬದರ್‌ ಮೈದಾನದಲ್ಲಿ ಟಿಪ್ಪು ಕನ್ನಡ ರಾಜ್ಯೋತ್ಸವ ವೇದಿಕೆಯು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣವಾಗುತ್ತಿತ್ತು. 

ನಮ್ಮನ್ನು ಒಗ್ಗಟ್ಟಾಗಿಸುವ ಶಕ್ತಿ ಟಿಪ್ಪು ಹೆಸರಿಗಿದೆ. ಇಂದು ವಿವಿಧ ಪಕ್ಷಗಳಲ್ಲಿರುವ ಒಂದೇ ಸಮುದಾಯದ ಮುಖಂಡರು ಟಿಪ್ಪು ಹೆಸರಲ್ಲಿ ಒಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು. ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನು ಮಾಡಲಾಗುತ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟ ಉತ್ತರ ನೀಡುತ್ತೇವೆ ಎಂದು ಅವರು ತಿಳಿಸಿದರು.

Bengaluru: ಕನೆಕ್ಟ್ ಕರ್ನಾಟಕ ಎಕ್ಸ್‌ಪೋಗೆ ಚಾಲನೆ ನೀಡಿದ ಸಚಿವ ಅಶ್ವತ್ಥ್‌

ಟಿಪ್ಪು ಇಸ್ಲಾಂ ಧರ್ಮದ ಪವಿತ್ರ ಗ್ರಂಥ ಕುರಾನ್‌ ಮುಂದಿಟ್ಟು ಸರ್ವಶಕ್ತವಾದ ಅಲ್ಲಾಹ್‌ ನನ್ನು ಸಾಕ್ಷೀಕರಿಸಿ ಜನಪರ ಆಡಳಿತ ನಡೆಸಿದರು. ಮೈಸೂರು ರಾಜ್ಯವನ್ನಾಳಿದರೂ 260 ವರ್ಷಗಳ ಹಿಂದೆಯೇ ಶ್ರೀರಂಗಪಟ್ಟಣದ ಗುಂಬಜ್‌ ದ್ವಾರದ ಮೇಲೆ ರಿಯಾಸತೇ ದಖನ್‌ ಕರ್ನಾಟಕ್‌ ಎಂದು ಬರೆಸಿದ್ದಾರೆ. ಅಂದರೆ ಕರ್ನಾಟಕ ಎಂಬ ಹೆಸರಿನ ಕಲ್ಪನೆಯೇ ಇಲ್ಲದ ಅವರ ಆಳ್ವಿಕೆಯಲ್ಲಿ ಈ ರಾಜ್ಯವನ್ನು ಕರ್ನಾಟಕ ಎಂದು ಮೊಟ್ಟಮೊದಲ ಬಾರಿಗೆ ಸಂಬೋಧಿಸಿದ ಕೀರ್ತಿ ಟಿಪ್ಪುಗೆ ಸಲ್ಲುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ - ಸಿಎಂ ಡಿಸಿಎಂ