ಕಾಂಗ್ರೆಸ್ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯನ್ನು ಕೇಂದ್ರವಾಗಿರಿಸಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದ್ದು, ಈ ಮೂಲಕ ಇಲ್ಲಿನ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ (ಜೂ.17) ಕಾಂಗ್ರೆಸ್ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯನ್ನು ಕೇಂದ್ರವಾಗಿರಿಸಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದ್ದು, ಈ ಮೂಲಕ ಇಲ್ಲಿನ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಶುಕ್ರವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅಭಿವೃದ್ಧಿಗೆ ವಿಫುಲ ಅವಕಾಶ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿಯನ್ನು ಬದಿಗಿಟ್ಟು, ಕೇವಲ ಒಂದು ಸಮುದಾಯದ ಓಲೈಕೆಗಾಗಿಯೇ ಈ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.
undefined
Mangaluru crimes: ಪತ್ನಿ ಕೊಲೆಗೈದ ಪ್ರಕರಣ ನ್ಯಾಯಾಲಯದಲ್ಲಿ ಸಾಬೀತು
ಸರ್ಕಾರದ ಈ ಕೆಲಸದಿಂದ, ಮಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತರು ಭಯಭೀತರಾಗುತ್ತಾರೆ. ಉನ್ನತ ಶಿಕ್ಷಣ ಕಾಲೇಜುಗಳಿಗೆ ಹೊರಜಿಲ್ಲೆ ರಾಜ್ಯಗಳಿಂದ ಬರುವವರು ಹಿಂಜರಿಯುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದವರು ಆತಂಕ ವ್ಯಕ್ತಪಡಿಸಿದರು.
ಈ ಹಿಂದ ಮಂಗಳೂರಿನಲ್ಲಿ ಎನ್‌ಐಎ ಘಟಕ(NIA ) ಸ್ಥಾಪನೆಗೆ ಪ್ರಸ್ತಾಪ ಸಲ್ಲಿಸಿದಾಗ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಸಂಘಟನೆಗಳು ಸಹಕಾರ ನೀಡಿಲ್ಲ, ಆದರೆ ಆ್ಯಂಟಿ ಕಮ್ಯುನಲ್ ವಿಂಗ್ ಪ್ರಾರಂಭಕ್ಕೆ ಸ್ವಾಗತಿಸುವ ಮೂಲಕ ಎಸ್‌ಡಿಪಿಐ ನಿಜ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಹಿಂದಿನ ಬಾಗಿಲಿನಿಂದ ಎಸ್‌ಡಿಪಿಐ ಜೊತೆ ಕೈ ಜೋಡಿಸಿದೆ ಎಂದರು.
ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆಯನ್ನು ಗಂಭೀರವಾಗಿ ಪರಿಗಣಿಸದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಟಾರ್ಗೆಟ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕತೆ ಹಾಗೂ ಅಭಿವೃದ್ಧಿಗೆ ಕೊಡಲಿ ಏಟು ಹಾಕುವ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು. ಆ್ಯಂಟಿ ಕಮ್ಯುನಲ್ ವಿಂಗ್ ಯಾವ ಚೌಕಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಹಿಜಾಬ್ ಬಗ್ಗೆ ಸಾಹಿತಿಗಳಿಂದ ಅನಗತ್ಯ ಗೊಂದಲ: ಶಾಸಕ ಯಶ್ಪಾಲ್ ಗರಂ
ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ನಮ್ಮೂರಿನ ಇತಿಹಾಸ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ದೇಶ ಭಕ್ತರ ಪಾಠಗಳನ್ನು ಸೇರಿಸಲಾಗಿತ್ತು. ಆದರೆ ಸಿದ್ದರಾಮಯ್ಯ ಅವರ ಕಮ್ಯುನಲ್ ಸರ್ಕಾರ ಒಂದು ಸಮಯದಾಯದ ಓಲೈಕೆಗೋಸ್ಕರ ಪಠ್ಯ ಬದಲಾವಣೆಗೆ ಮುಂದಾಗಿದೆ. ಪಠ್ಯ ಪುಸ್ತಕ ಬದಲಾವಣೆ ವಿಚಾರದಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಶಾಸಕ ಯಶ್ಪಾಲ್ ಸುವರ್ಣ ಖಡಕ್ ಎಚ್ಚರಿಕೆ ನೀಡಿದ್ದಾರೆ.