ಸಮಾಜದಲ್ಲಿ ವಿಷ ಬೀಜ ಬಿತ್ತುತ್ತಿರುವ ಬಿಜೆಪಿ ಸರ್ಕಾರ: ಶಾಸಕ ಯತೀಂದ್ರ ಸಿದ್ದರಾಮಯ್ಯ

By Govindaraj S  |  First Published Oct 31, 2022, 12:07 AM IST

ಬಿಜೆಪಿ ಸರ್ಕಾರವು ಅಭಿವೃದ್ಧಿ ಕೆಲಸಕ್ಕಿಂತ ಹಿಂದೂತ್ವವನ್ನು ತೇಲಿ ಬಿಟ್ಟು ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿ ಸಮಾಜ-ಸಮಾಜಗಳ ನಡುವೆ ಒಡೆದಾಡುವ ಕೆಲಸ ಮಾಡುತ್ತಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. 


ಮೈಸೂರು (ಅ.31): ಬಿಜೆಪಿ ಸರ್ಕಾರವು ಅಭಿವೃದ್ಧಿ ಕೆಲಸಕ್ಕಿಂತ ಹಿಂದೂತ್ವವನ್ನು ತೇಲಿ ಬಿಟ್ಟು ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿ ಸಮಾಜ-ಸಮಾಜಗಳ ನಡುವೆ ಒಡೆದಾಡುವ ಕೆಲಸ ಮಾಡುತ್ತಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದ ಕಾಂಗ್ರೆಸ್‌ ಭವನದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಗಳ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆ ಸಮೀಪಿಸುತ್ತಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯವನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ದೇಶದ ಅಭಿವೃದ್ಧಿಗಿಂತಲೂ ಬೇರೆ ಬೇರೆ ವಿಷಯಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ. ದೇಶದ ಆರ್ಥಿಕತೆ ಕುಸಿಯುತ್ತಿದ್ದರೂ ಆ ಬಗ್ಗೆ ಸರ್ಕಾರ ತಲೆಕೆಡಸಿಕೊಂಡಿಲ್ಲ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಕೆಲಸ ಮಾಡುತ್ತಿದ್ದೆಯೇ ಹೊರತು ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ನಡೆಸಿಲ್ಲ ಎಂದು ಅವರು ಆರೋಪಿಸಿದರು.

Tap to resize

Latest Videos

Mysuru: 22 ದಿನಗಳಿಂದ 5 ಸಾವಿರ ಎಕರೆ ಭತ್ತದ ಬೆಳೆಗೆ ನೀರಿಲ್ಲ

ರಾಜ್ಯ ಸರ್ಕಾರವು ಪ.ಜಾತಿ, ಪ.ಪಂಗಡ, ಹಿಂದುಳಿದವರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಅನುದಾನವನ್ನು ಕಡಿತಗೊಳಿಸಿದೆ. ಮೂರು ವರ್ಷದಲ್ಲಿ ಜನಪರ ಯೋಜನೆಯನ್ನು ನಿಲ್ಲಿಸಿಲ್ಲಿದೆ. ಬಡವಪರ ಪರವಾದ ಯಾವುದೇ ತೀರ್ಮಾನ ಕೈಗೊಳ್ಳದ ಸರ್ಕಾರ ಕೇವಲ ಶ್ರೀಮಂತರು ಮತ್ತು ಮೇಲ್ವರ್ಗದವರನ್ನು ಗುರಿಯಾಗಿಸಿಕೊಂಡಿದೆ ಎಂದು ಅವರು ಟೀಕಿಸಿದರು. ಚುನಾವಣೆಗೆ ಐದು ತಿಂಗಳು ಇರುವ ಕಾರಣ ಪಕ್ಷ ಸಂಘಟನೆಯ ಜೊತೆಗೆ ಸರ್ಕಾರದ ವೈಫಲ್ಯವನ್ನು ಪ್ರತಿ ಮನೆಗೂ ತಲುಪಿಸಬೇಕು. ಪಕ್ಷದಲ್ಲಿ 17 ರೀತಿಯ ಸಂಘಟನೆಗಳು ಇದ್ದು, ಜವಾಬ್ದಾರಿ ಹೊತ್ತಿರುವ ಪದಾಧಿಕಾರಿಗಳು ಸಂಘಟನೆಗೆ ಮುಂದಾಗಬೇಕು. ಕಾರ್ಯಕರ್ತರನ್ನು ಕಡೆಗಣಿಸದೆ ಎಲ್ಲರೊಂದಿಗೆ ಬೆರೆತು ಪಕ್ಷದ ಕಡೆಗೆ ಸೆಳೆಯಬೇಕು ಎಂದು ಅವರು ಸಲಹೆ ನೀಡಿದರು.

ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷ ಸಂಘಟನೆ ದೊಡ್ಡ ಸವಾಲಾಗಿದೆ. ಬಿಜೆಪಿ ಸವಾಲುಗಳನ್ನು ಎದುರಿಸುವ ಜತೆಗೆ ಬೇರೆ ಪಕ್ಷಗಳ ನಾಯಕರು ಮಾಡುವ ಅಪಪ್ರಚಾರಕ್ಕೆ ಪ್ರತ್ಯುತ್ತರ ಕೊಡಬೇಕು. ಸಿದ್ದರಾಮಯ್ಯ ಸರ್ಕಾರದ 5 ವರ್ಷಗಳ ಆಡಳಿತದಲ್ಲಿ ಜಾರಿಗೆ ತಂದ ಯೋಜನೆಗಳು ಮತ್ತು ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಮನವರಿಕೆ ಮಾಡಿಕೊಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಸ್ಥಳೀಯ ಜನರಿಗೆ ಅಧಿಕಾರ ನೀಡಬೇಕು ಎಂಬ ಕಾರಣಕ್ಕಾಗಿ ರಾಜೀವ್‌ಗಾಂಧಿ ಅವರು ಮೂರು ಹಂತದ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಜಾರಿಗೆ ತಂದರು. ಅಧಿಕಾರ ವಿಕೇಂದ್ರೀಕರಣಗೊಳಿಸಿ ಲಕ್ಷಾಂತರ ನಾಯಕರು ರಾಜಕೀಯವಾಗಿ ಬೆಳೆಯಲು ಕಾರಣರಾದರು. ಆದರೆ, ಈಗಿನ ಬಿಜೆಪಿ ಸರ್ಕಾರ ಅಧಿಕಾರವನ್ನು ಏಕೀಕೃತ ವ್ಯವಸ್ಥೆಗೆ ತರಲು ಮುಂದಾಗಿದೆ. ಸ್ಥಳೀಯ ಸಂಸ್ಥೆಗಳ ಬಲ ತುಂಬುವ ಕೆಲಸ ಮಾಡದೆ ಜಿಪಂ, ತಾಪಂ ಅಧಿಕಾರ ಮುಗಿದು ವರ್ಷವೇ ಕಳೆದರೂ ಚುನಾವಣೆ ನಡೆಸಲಿಲ್ಲ. ಹಾಗಾಗಿ, ರಾಜೀವ್‌ ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆಗಳ ಸಮಿತಿ ಪದಾಧಿಕಾರಿಗಳು ಗ್ರಾಮಾಂತರ ಪ್ರದೇಶದಲ್ಲಿ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದರು.

ಜನವರಿ ವೇಳೆಗೆ ಅರ್ಕಾವತಿ ಹಗರಣ ಬೆಳಕಿಗೆ ಬರಲಿದೆ: ನಳೀನ್‌ಕುಮಾರ್‌ ಕಟೀಲ್‌

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ರಾಜೀವ್‌ಗಾಂಧಿ ಪಂಚಾಯತ್‌ ರಾಜ್‌ ಸಂಘಟನೆ ಜಿಲ್ಲಾಧ್ಯಕ್ಷ ಬಿ. ಮಲ್ಲೇಶ್‌ ಕೋಟೆ, ವರುಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಮುದ್ದೇಗೌಡ, ತಗಡೂರು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ಹುಣಸೂರು ಬಸವಣ್ಣ, ಹೆಡತಲೆ ಮಂಜುನಾಥ್‌, ನಾಗರಾಜು, ಬಸವರಾಜು, ಮೊದಲಾದವರು ಇದ್ದರು.

click me!