ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಮಾನ್ಯತೆ ಸಿಗುವುದು ಕಷ್ಟ. ಯಾರೇ ಪ್ರಾದೇಶಿಕ ಪಕ್ಷ ಕಟ್ಟಿದರೂ ಸುದೀರ್ಘ ಕಾಲ ಉಳಿಯುವುದು ಕಷ್ಟ ಎಂದು ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಬಿ. ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿ (ಮಾ.15): ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ರಾಜಕೀಯ ಪಕ್ಷ ಕಟ್ಟುವುದು ಊಹಾಪೋಹ. ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಮಾನ್ಯತೆ ಸಿಗುವುದು ಕಷ್ಟ. ಯಾರೇ ಪ್ರಾದೇಶಿಕ ಪಕ್ಷ ಕಟ್ಟಿದರೂ ಸುದೀರ್ಘ ಕಾಲ ಉಳಿಯುವುದು ಕಷ್ಟ ಎಂದು ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಬಿ. ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯತ್ನಾಳ್ ಪಕ್ಷ ಕಟ್ಟುತ್ತಾರೆಂಬ ವಿಚಾರ ನನಗೆ ಗೊತ್ತಿಲ್ಲ. ನಾನೂ ಸಹ ಹಿಂದೆ ಸ್ವಂತ ರಾಜಕೀಯ ಪಕ್ಷ ಕಟ್ಟಿದೆ. ಆದರೆ, ಯಶಸ್ವಿಯಾಗಲಿಲ್ಲ ಎಂದರು.
ಬೆಂಗಳೂರು ಅರಮನೆ ವಿವಾದ ಕುರಿತು ಪ್ರತಿಕ್ರಿಯಿಸಿ, ಮೈಸೂರು ರಾಜಮನೆತನಕ್ಕೆ ಸೇರಿದ ಬೆಂಗಳೂರು ಅರಮನೆ ಮೈದಾನವನ್ನು ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ಭೂಸ್ವಾಧೀನ ಮಸೂದೆ ಜಾರಿಗೆ ತಂದಿರುವುದು ಕಾಂಗ್ರೆಸ್ಸಿನ ದ್ವೇಷದ ರಾಜಕೀಯಕ್ಕೆ ಹಿಡಿದ ಕನ್ನಡಿ. ಅರಮನೆ ಮೈದಾನದ ಜಾಗ ವಶಪಡಿಸಿಕೊಳ್ಳುವ ಪ್ರಕರಣ ಸುಪ್ರೀಂಕೋಟ್೯ನಲ್ಲಿ ವಿಚಾರಣೆ ನಡೆಯುತ್ತಿರುವ ನಡುವೆಯೂ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ಇದು ರಾಜಕೀಯ ವೈಷಮ್ಯದಿಂದ ಕೂಡಿದ ನಿಲುವು ಎಂಬುದು ಎಂಥವರಿಗೂ ಗೊತ್ತಾಗುತ್ತದೆ ಎಂದರು.
ಸರ್ಕಾರ ಬದಲಾವಣೆಯಾಗುವ ಮುನ್ಸೂಚನೆ: ಮಹಾರಾಷ್ಟ್ರ ರಾಜ್ಯದಂತೆ ಡಿ.ಕೆ. ಶಿವಕುಮಾರ್ ಅವರಿಂದ ಕರ್ನಾಟಕ ರಾಜ್ಯದಲ್ಲೂ ಹೊಸ ವಿದ್ಯಮಾನಗಳು ಘಟಿಸಿ ಸರ್ಕಾರ ಬದಲಾವಣೆಯಾಗುವ ಮುನ್ಸೂಚನೆ ಇದೆ ಎಂದು ಮಾಜಿ ಸಚಿವ ಶ್ರೀರಾಮುಲು ಭವಿಷ್ಯ ನುಡಿದರು. ಕಾರ್ಯಕ್ರಮದ ನಿಮಿತ್ತ ಚಾಮರಾಜನಗರಕ್ಕೆ ತೆರಳುತ್ತಿದ್ದ ವೇಳೆ ಶುಕ್ರವಾರ ನಂಜನಗೂಡಿನ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಯ ಬಳಿ ಅವರನ್ನು ಅದ್ದೂರಿಯಾಗಿ ಸನ್ಮಾಸಿ ಬರಮಾಡಿಕೊಂಡ ನಂತರ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಒಳಗಿನ ಆಂತರಿಕ ಕಚ್ಚಾಟ ಮಿತಿ ಮೀರಿದೆ, ಮಹಾರಾಷ್ಟ್ರ ರಾಜ್ಯದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್ ಸರ್ಕಾರ ಪತನವಾದಂತೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ಅವರ ನಿರ್ಧಾರದಿಂದ ಹೊಸ ವಿದ್ಯಮಾನಗಳು ಘಟಿಸಲಿವೆ, ಆದ ಕಾರಣ ಮುಖ್ಯಮಂತ್ರಿಗಳು ಬದಲಾವಣೆಯಾಗಿ ಸರ್ಕಾರವೇ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದರು.
ನಿತ್ಯ ನಿಮಗಾಗಿ ಕಾಯುವಂತಾಗಿದೆ: ಸ್ಪೀಕರ್ ಕಾಲೆಳೆದ ಸಚಿವ ಕೃಷ್ಣ ಬೈರೇಗೌಡ
ಡಿಕೆಶಿ ಬಿಜೆಪಿಗೆ ಬಂದಲ್ಲಿ ಪಕ್ಷದ ಬಲ ಹೆಚ್ಚಲಿದೆ: ಡಿ.ಕೆ. ಶಿವಕುಮಾರ್ ಅವರು ಬಿಜೆಪಿಗೆ ಬರಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತರುವ ನಿರ್ಧಾರವನ್ನು ಬಿಜೆಪಿಯ ಉನ್ನತ ವರಿಷ್ಠರು ನಿರ್ಧಾರ ಮಾಡಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಬಿಜೆಪಿಗೆ ಬಂದಲ್ಲಿ ಪಕ್ಷದ ಬಲ ಹೆಚ್ಚಲಿದೆ ಎಂದು ಅವರು ಹೇಳಿದರು.