ವಿಜಯೇಂದ್ರ ರಾಜ್ಯಾಧ್ಯಕ್ಷನಾದರೆ ಹಿಂದುತ್ವದ ಆಧಾರದಲ್ಲಿ ಹೊಸ ಪಕ್ಷ ಗ್ಯಾರಂಟಿ: ಶಾಸಕ ಯತ್ನಾಳ

Govindaraj S   | Kannada Prabha
Published : Jul 24, 2025, 05:47 AM ISTUpdated : Jul 25, 2025, 04:13 AM IST
Yatnal

ಸಾರಾಂಶ

ಬಿ.ವೈ.ವಿಜಯೇಂದ್ರ ಅವರನ್ನೇ ಮತ್ತೆ ಅಧ್ಯಕ್ಷರನ್ನಾಗಿ ಮಾಡಿದರೆ ಹಿಂದುತ್ವದ ಆಧಾರದಲ್ಲಿ ಹೊಸಪಕ್ಷ ಕಟ್ಟುವುದು ಗ್ಯಾರಂಟಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು.

ಕೊಪ್ಪಳ (ಜು.24): ಬಿಜೆಪಿ ಬಹುತೇಕ ನಾಯಕರು ಒಪ್ಪದ ಹಾಗೂ ರಾಜ್ಯದ ಜನರು ಸಹ ತಿರಸ್ಕರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನೇ ಮತ್ತೆ ಅಧ್ಯಕ್ಷರನ್ನಾಗಿ ಮಾಡಿದರೆ ಹಿಂದುತ್ವದ ಆಧಾರದಲ್ಲಿ ಹೊಸಪಕ್ಷ ಕಟ್ಟುವುದು ಗ್ಯಾರಂಟಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ನಗರದ ಗವಿಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಪ್ರಾಮಾಣಿಕ ನಾಯಕತ್ವ ಬೇಕು ಎನ್ನುವುದು ಎಲ್ಲರ ಆಶಯವಾಗಿದೆ ಎಂದರು.

ಮತ್ತೆ ವಿಜಯೇಂದ್ರ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಿದರೆ ರಾಜ್ಯದಲ್ಲಿ ಪಕ್ಷಕ್ಕೆ ಭವಿಷ್ಯವಿಲ್ಲ ಎಂದ ಅವರು, ಹೈಕಮಾಂಡ್ ವಿಜಯೇಂದ್ರ ಅವರನ್ನು ತಲೆ ಮೇಲೆ ಕೂಡ್ರಿಸಿಕೊಂಡರೆ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತದೆ. ಅವರನ್ನು ಬದಲಾವಣೆ ಮಾಡುವುದು, ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು. ಆದರೆ, ವಿಜಯೇಂದ್ರ ಹೊರತುಪಡಿಸಿ ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ನಮ್ಮ ಸಮ್ಮತಿ ಇದೆ. ಆದರೆ, ಅದನ್ನು ಬಿಜೆಪಿ ಹೈಕಮಾಂಡ್ ಮಾಡಬೇಕು ಎಂದರು.

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಭವಿಷ್ಯ ಇರುವುದೇ ಕರ್ನಾಟಕದಲ್ಲಿ ಮಾತ್ರ. ಹೀಗಿರುವಾಗ ಸೂಕ್ತ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ನಾವು ಹೇಳಿದೆವು. ಆದರೆ, ಪಕ್ಷ ಕೇಳಲಿಲ್ಲ ಎಂದ ಅವರು, ಶ್ರೀರಾಮುಲು ಅವರು ಒಡೆದ ಮನಸ್ಸುಗಳು ಒಂದಾಗುತ್ತವೆ ಎಂದಿದ್ದಾರೆ. ಆದರೆ, ಇದು ವಿಜಯೇಂದ್ರ ಇರುವಾಗ ಸಾಧ್ಯವಿಲ್ಲ. ಶ್ರೀರಾಮುಲು ಅವರು ವಿಜಯೇಂದ್ರ ಜತೆಗೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ನನಗೆ ಗೊತ್ತಿಲ್ಲ ಎಂದರು. ಯಡಿಯೂರಪ್ಪ ಅವರನ್ನು ಅಪ್ಪಾಜಿ ಎನ್ನಬೇಕು. ಅಂಥವರಿಗೆ ಮಾತ್ರ ಮಣೆ ಹಾಕಲಾಗುತ್ತದೆ. ಯಾರಿಗೋ ಹುಟ್ಟಿ, ಇನ್ಯಾರಿಗೋ ಅಪ್ಪಾಜಿ ಅನ್ನುವುದಿಲ್ಲ ಎಂದರು.

ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸಿರುವುದನ್ನು ಧರ್ಮಸ್ಥಳ ಧರ್ಮಾಧಿಕಾರಿಗಳೇ ಸ್ವಾಗತಿಸಿದ್ದಾರೆ. ಆದರೆ, ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುವವರೇ ಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ಅಯ್ಯಪ್ಪ ಸ್ವಾಮೀಜಿ ದೇವಸ್ಥಾನ ಟಾರ್ಗೆಟ್ ಮಾಡಿದ್ದರು. ಈಗ ಧರ್ಮಸ್ಥಳ ಮಾಡಿದ್ದಾರೆ ಎಂದ ಅವರು, ಧರ್ಮಸ್ಥಳಕ್ಕೆ ಧಕ್ಕೆಯಾದರೆ ಹಿಂದೂ ಸಮಾಜ ಸುಮ್ಮನೇ ಇರುವುದಿಲ್ಲ ಎಂದು ಎಚ್ಚರಿಸಿದರು. ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿಗೆ ವಿಷಪ್ರಾಸನ ಮಾಡಿರುವುದು ನನಗೆ ಗೊತ್ತಿಲ್ಲ. ಆದರೆ, ಸ್ವಾಮೀಜಿಗಳು ಸಮಾಜಕ್ಕಾಗಿ ಮನೆಬಿಟ್ಟು ಕೆಲಸ ಮಾಡಿದ್ದಾರೆ. ಅಂಥವರ ವಿರುದ್ಧ ಈ ರೀತಿ ಮಾಡುವುದು ಸರಿಯಲ್ಲ. ನಮ್ಮಲ್ಲಿಯೂ ಅಯೋಗ್ಯರಿದ್ದು ಈ ರೀತಿ ಮಾಡುತ್ತಿದ್ದಾರೆ. ಅವರ ಹೆಸರು ತೆಗೆದುಕೊಳ್ಳಬೇಡಿ ಎಂದು ನಮ್ಮ ಹಿರಿಯರು ಹೇಳಿದ್ದಾರೆ ಎಂದರು.

ಯಾರು ಮಠಕ್ಕೆ ಬೀಗ ಹಾಕಿದ್ದಾರೆ. ಯಾರು ಹಣ ತಿಂದಿದ್ದಾರೆ. ಅವರ ಮನೆ ಬಾಗಿಲು ಬಂದಾಗುವ ದಿನಗಳು ದೂರವಿಲ್ಲ ಎಂದ ಅವರು, ನಾನು ಸಹ ಒಂದು ಸಂಸ್ಥೆ ನಡೆಸುತ್ತಿದ್ದೇನೆ. ಆದರೂ ಒಂದು ರುಪಾಯಿ ತಿಂದಿಲ್ಲ. ಮಠದ ಹಣ ತಿಂದವರು ಉದ್ಧಾರ ಆಗಲ್ಲ ಎಂದರು. ವೀರಶೈವ ಲಿಂಗಾಯತ ಎರಡೂ ಒಂದೇ, ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ ಎಂದು ಶ್ರೀಶೈಲ ಪೀಠದ ಜಗದ್ಗುರಗಳ ಹೇಳಿಕೆಗೆ, ಸ್ವಾಮಿಜಿಗಳು ದೊಡ್ಡ ದೊಡ್ಡ ಶ್ರೀಮಂತರ ಮನೆಗೆ ಹೋಗುತ್ತಾರೆ. ಬಡವರ ಮನೆಗೆ ಹೋಗುವುದಿಲ್ಲ. ಪೂಜೆಗೆ ₹ 11 ಲಕ್ಷ ಫಿಕ್ಸ್ ಮಾಡಿದ್ದಾರೆ. ಇಂಥವರಿಗೆ ಯಡಿಯೂರಪ್ಪ ಹಾಗೂ ಶಾಮನೂರು ಶಿವಶಂಕರಪ್ಪ ಅಂಥವರೇ ಮಾತ್ರ ಭಕ್ತರು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!