ಕರ್ನಾಟಕದ ಮತ್ತೋರ್ವ ವಿಧಾನಪರಿಷತ್ ಸದಸ್ಯಗೆ ಕೊರೋನಾ: ಮನೆಯಲ್ಲೇ ಚಿಕಿತ್ಸೆ

By Suvarna News  |  First Published Sep 8, 2020, 4:44 PM IST

ಈಗಾಗಲೇ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿರುವಂತ ಕೊರೋನಾ, ಇದೀಗ ಮತ್ತೋರ್ವ ವಿಧಾನಪರಿಷತ್ ಸದಸ್ಯರಿಗೆ ಕೊರೋನಾ ಸೋಂಕು ತಗುಲಿದೆ.
 


ಶಿವಮೊಗ್ಗ,(ಸೆ.08): ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರಿಗೂ ಇಂದು (ಮಂಗಳವಾರ) ಕೊರೋನಾ ಪಾಸಿಟೀವ್  ದೃಢಪಟ್ಟಿದೆ.

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಖಚಿತಪಡಿಸಿದ್ದು, ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲವಾದರೂ, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Latest Videos

undefined

ಕೊರೋನಾ ಹೆಚ್ಚಳ: ಕರ್ನಾಟಕ ಸೇರಿ ಹಾಟ್ ಸ್ಪಾಟ್ ಜಿಲ್ಲೆಗಳ ಮೇಲೆ ಕೇಂದ್ರ ನೇರ ನಿಗಾ

ನಾನು ಇಂದು COVID19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲವಾದರೂ, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೊಳಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. 
ನಿಮ್ಮ ಶುಭಾಶೀರ್ವಾದಗಳೊಂದಿಗೆ ಶೀಘ್ರದಲ್ಲೇ ನಿಮ್ಮ ಸೇವೆಗೆ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಂತಹ ಎಲ್ಲರೂ ಜಾಗರೂಕರಾಗಿರಿ ಎಂದು ಆಯನೂರು ಮಂಜುನಾಥ್ ಫೇಸ್‌ಬುಕ್‌ ಮೂಲಕ  ಮನವಿ ಮಾಡುತ್ತಿದ್ದೇನೆ.

ಆತ್ಮೀಯರೇ, ನಾನು ಇಂದು #COVID19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು...

Posted by on Tuesday, September 8, 2020
click me!