ಸಂಸದೆ ಸುಮಲತಾ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ: ಸಿ.ಪಿ.ಯೋಗೇಶ್ವರ್‌

By Govindaraj SFirst Published Jan 14, 2023, 2:40 AM IST
Highlights

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ನನ್ನ ಜೊತೆ ಸಂಪರ್ಕದಲ್ಲಿದ್ದು, ಸಂಕ್ರಾಂತಿ ಬಳಿಕ ಅವರು ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯೋಗೇಶ್ವರ್‌ ಪ್ರತಿ​ಕ್ರಿ​ಯಿ​ಸಿ​ದರು. 

ಚನ್ನ​ಪ​ಟ್ಟಣ (ಜ.14): ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ನನ್ನ ಜೊತೆ ಸಂಪರ್ಕದಲ್ಲಿದ್ದು, ಸಂಕ್ರಾಂತಿ ಬಳಿಕ ಅವರು ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯೋಗೇಶ್ವರ್‌ ಪ್ರತಿ​ಕ್ರಿ​ಯಿ​ಸಿ​ದರು. ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಂಕ್ರಾಂತಿ ನಂತರ ಜನ​ವರಿ 16 ಅಥವಾ 17ರಂದು ಸಂಸದೆ ಸುಮ​ಲತಾ ಸೂಕ್ತ ನಿರ್ಧಾರ ಕೈಗೊ​ಳ್ಳು​ತ್ತಾರೆ. ಮಂಡ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ದೋಸ್ತಿ ವಿಚಾರದ ಬಗ್ಗೆ ನನಗೆ ತಿಳಿದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವು ಸಾಧಿಸಲು ಅಗತ್ಯವಿರುವ ಎಲ್ಲಾ ರೀತಿಯ ಕಾರ್ಯತಂತ್ರಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ವಿಪ​ಕ್ಷ​ಗ​ಳಿಗೆ ಪ್ರಧಾನಿ ಭಯ: ಪ್ರಧಾನಿ ಮೋದಿ ಅವರ ಬಗ್ಗೆ ವಿರೋಧ ಪಕ್ಷಗಳಿಗೆ ಭಯಕಾಡುತ್ತಿದೆ. ಅದಕ್ಕೆ ಅವರ ಬಗ್ಗೆ ಟೀಕೆ ಮಾಡುತ್ತಾರೆ. ಬಿಜೆಪಿಗೆ ಪ್ರಧಾನಿ ಮೋದಿ ಅವರೇ ದೊಡ್ಡಬಲ, ಅವರಿಗೆ ಹೆಚ್ಚು ಜನಪ್ರಿಯತೆ ಇದೆ. ಜನತೆ ಅವರ ನಾಯಕತ್ವವನ್ನು ಒಪ್ಪಿದ್ದಾರೆ. ಅವರು ಬಂದರೆ ಎಲ್ಲಿ ಜನಾಭಿಪ್ರಾಯ ಬದಲಾದೀತೋ ಎಂಬ ಭಯದಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ. ಆದರೆ, ಜನತೆ ಇವರ ಮಾತನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ವಿರೋಧ ಪಕ್ಷಗಳಿಗೆ ಟಾಂಗ್‌ ನೀಡಿದರು.

Mandya: ಇಬ್ರಾಹಿಂರಿಂದಲೇ ಜೆಡಿಎಸ್‌ ಅವನತಿ: ಸಿ.ಪಿ.ಯೋಗೇಶ್ವರ್‌

ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪಿದೆ. ಸಿಎಂ ಸ್ಥಾನಕ್ಕಾಗಿ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಕಿತ್ತಾಡುತ್ತಿದ್ದಾರೆ. ಮೇಲ್ನೋಟಕ್ಕೆ ಈ ಇಬ್ಬರು ನಾಯಕರು ಜೊತೆಯಲ್ಲಿದ್ದರೂ ಒಳಗೊಳಗೆ ಕಿತ್ತಾಡುತ್ತಿದ್ದು, ಇವರಿಬ್ಬರ ನಡುವಿನ ಸಂಘರ್ಷದಿಂದಾಗಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು. ಇನ್ನು ಕಾಂಗ್ರೆಸ್‌ ಪಕ್ಷದ 200 ಯೂನಿಚ್‌ ಉಚಿತ ವಿದ್ಯುತ್‌ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಉಚಿತ ಸೌಲಭ್ಯ ನೀಡಿದರೂ ಆರ್ಥಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಉಚಿತ ಯೋಜನೆಗಳನ್ನು ನೀಡಿ ಜನರನ್ನು ಮರಳು ಮಾಡುವ ಬದಲು ಪ್ರತಿಯೊಬ್ಬರು ಸ್ವಾವಲಂಬಿಗಳಾಗುವಂತೆ ಮಾಡುವ ಯೋಜನೆಗಳನ್ನು ಜಾರಿಗೆ ತರಬೇಕು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ, ಅವರು ಉಚಿತವಾಗಿ ಕೊಡುಗೆ ನೀಡಲು ಸಾಧ್ಯವಾಗುವುದೂ ಇಲ್ಲ ಎಂದರು.

ಎಲ್ಲಿಂದ ಬೇಕಾದರೂ ಸ್ಪರ್ಧಿ​ಸಲಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ನಾಯಕರು. ಅವರು ಎಲ್ಲಿಂದ ಬೇಕಾದರೂ ಸ್ಪರ್ಧೆ ಮಾಡಬಹುದು. ಕುಮಾರಸ್ವಾಮಿ ಸಾತನೂರು, ಚಿಕ್ಕಬಳ್ಳಾಪುರ, ರಾಮನಗರ, ಈಗ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಏನು ಬೇಕೋ ಅದನ್ನು ಮಾಡುತ್ತೇವೆ ಎಂದು ತಿಳಿ​ಸಿದರು.

ಜೆಡಿಎಸ್‌ನಿಂದ ಜಿಲ್ಲೆಗೂ ಒಳ್ಳೆಯದಲ್ಲ, ರಾಜ್ಯಕ್ಕೂ ಒಳ್ಳೆಯದಲ್ಲ: ಸಿ.ಪಿ.ಯೋಗೇಶ್ವರ್‌

ವಿದ್ಯಾರ್ಥಿಗಳಿಗೆ ಸ್ವೆಟರ್‌ ವಿತರಣೆ: ಸ್ವಗ್ರಾಮದ ಚಕ್ಕೆರೆ ಸರ್ಕಾರಿ ಶಾಲಾ ಮಕ್ಕಳಿಗೆ ಯೋಗೇಶ್ವರ್‌ ತಮ್ಮ ತಂದೆಯ ಹೆಸರಿನಲ್ಲಿ ಉಚಿತವಾಗಿ ಸ್ವೆಟರ್‌ ಹಂಚಿಕೆ ಮಾಡಿದರು. ಶಾಲೆಯ 430 ಮಕ್ಕಳಿಗೆ ಸ್ವೆಟರ್‌ ವಿತರಣೆ ಮಾಡಿದ ಯೋಗೇ​ಶ್ವರ್‌, ಗ್ರಾಮೀಣ ಮಕ್ಕಳು ಬೆಳಗಿನ ಜಾವ ಶಾಲೆಗೆ ಬರಲು ಚಳಿಯಿಂದ ಸಮಸ್ಯೆಯಾಗುತ್ತಿರುವ ಕಾರಣ ಕೆಲವರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸ್ವೆಟರ್‌ ವಿತರಣೆ ಮಾಡುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶೀಲಾಯೋಗೇಶ್ವರ್‌, ಚಕ್ಕೆರೆ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಹರಿದಾಸ್‌ ​ಮ​ತ್ತಿ​ತ​ರರು ಹಾಜ​ರಿ​ದ್ದರು.

click me!