ಕಾವೇರಿ ನೀರು ವಿಚಾರದಲ್ಲಿ ಡಿಕೆಶಿಗೆ ಕರ್ನಾಟಕ ಜನರ ಕಷ್ಟ ಗೊತ್ತಿಲ್ಲ: ಸಿ.ಪಿ.ಯೋಗೇಶ್ವರ್

Published : Sep 07, 2023, 01:09 PM IST
ಕಾವೇರಿ ನೀರು ವಿಚಾರದಲ್ಲಿ ಡಿಕೆಶಿಗೆ ಕರ್ನಾಟಕ ಜನರ ಕಷ್ಟ ಗೊತ್ತಿಲ್ಲ: ಸಿ.ಪಿ.ಯೋಗೇಶ್ವರ್

ಸಾರಾಂಶ

ಕಾವೇರಿ ನದಿ ನೀರಿನ ವಿಚಾರವನ್ನು ನಿಭಾಯಿಸುವಲ್ಲಿ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಿಡಿಕಾರಿದರು. 

ರಾಮನಗರ (ಸೆ.07): ಕಾವೇರಿ ನದಿ ನೀರಿನ ವಿಚಾರವನ್ನು ನಿಭಾಯಿಸುವಲ್ಲಿ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಗೆ ಕಾವೇರಿ ಕೊಳ್ಳದ ಅಂದರೆ ಕರ್ನಾಟಕ ಜನರ ಕಷ್ಟ ಗೊತ್ತಿಲ್ಲ. ಕಾವೇರಿ ನೀರು ಉಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನಸ್ಸಿಲ್ಲ. ಅವರು ರಾಜಕೀಯ ದುರದ್ದೇಶದಿಂದ ಇಂಡಿಯಾ ಮೈತ್ರಿ ಕೂಟದಲ್ಲಿರುವ ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ಕಾವೇರಿ ನೀರನ್ನು ನಿರಾಂತಕವಾಗಿ ಹರಿಸುತ್ತಿದ್ದಾರೆ ಎಂದು ಟೀಕಿಸಿದರು.

ತಮಿಳುನಾಡು ಸಿಎಂ ಸ್ಟಾಲಿನ್ ಮತ್ತು ಡಿ.ಕೆ. ಶಿವಕುಮಾರ್ ಗೂ ಸಂಬಂಧ ಇದೆ. ಅವರಿಬ್ಬರು ಒಳ್ಳೆಯ ಸ್ನೇಹಿತರು. ಬೆಂಗಳೂರಿನಲ್ಲಿ ವ್ಯಾಪಾರ, ವ್ಯವಹಾರ ಸಂಬಂಧ ಇದೆ. ಇವರಿಬ್ಬರು ರಾಜಕೀಯವಾಗಿ ಪಾರ್ಟ್‌ನರ್ಸ್‌. ರಾಜಕೀಯ ಲಾಭಕ್ಕಾಗಿ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ. ಆದ್ದರಿಂದ ಕರ್ನಾಟಕ, ಮಂಡ್ಯ, ರಾಮನಗರ ಜನರ ಹಿತಾಸಕ್ತಿ ಮುಖ್ಯವಾಗಿಲ್ಲ. ಹಳೇ ಮೈಸೂರು ಭಾಗದಲ್ಲಿ ಇರುವುದು ಒಂದೇ ಜಲಾಶಯ. ನೀರು ಬರಿದಾದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗುತ್ತದೆ. ಸಮಸ್ಯೆ ಬಂದಾಗ ಮೇಕೆದಾಟು ಯೋಜನೆ ಅಂತ ಡ್ರಾಮಾ ಮಾಡುತ್ತಾರೆ. ಡಿ.ಕೆ. ಶಿವಕುಮಾರ್ ಅವರಿಂದ ನಾಡಿನ ಜನರು ಏನನ್ನೂ ನಿರೀಕ್ಷೆ ಮಾಡಲಾಗದು ಎಂದು ಯೋಗೇಶ್ವರ್ ಟೀಕಿಸಿದರು.

ಡಿಕೆ ಸಹೋದರರಿಂದ ಕಳ್ಳ ಮಾರ್ಗದಲ್ಲಿ ಮೆಡಿಕಲ್ ಕಾಲೇಜು ಸ್ಥಳಾಂತರ: ಅಶ್ವತ್ಥ ನಾರಾಯಣ

ಸಂಸತ್ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಗತ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅನ್ನು ಸೋಲಿಸಲು ಬಿಜೆಪಿ - ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಜೆಡಿಎಸ್ ವರಿಷ್ಠರಾದ ದೇವೇಗೌಡ ಮತ್ತುಕುಮಾರಸ್ವಾಮಿ ಅವರಲ್ಲಿಯೂ ವೈಯಕ್ತಿಕವಾಗಿ ಮನವಿ ಮಾಡುತ್ತೇನೆ ಎಂದರು.

ಪಕ್ಷ ಸಂಘಟನೆ ಉದ್ದೇಶ: ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮತ್ತೊಂದು ಪಾದಯಾತ್ರೆ

ಮೋದಿರವರು ಮತ್ತೆ ಪ್ರಧಾನಿಯಾಗಿ ಚುಕ್ಕಾಣಿ ಹಿಡಿಯಲು ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕಿದೆ. ನಾನು ಮತ್ತು ಕುಮಾರಸ್ವಾಮಿರವರು 25-30 ವರ್ಷಗಳಿಂದ ರಾಜಕೀಯವಾಗಿ ವಿರೋಧಿಗಳಾಗಿದ್ದೇವು. ನಮ್ಮ ನಡುವೆ ಯಾವುದೇ ರೀತಿಯ ಒಳಒಪ್ಪಂದ ನಡೆದಿರಲಿಲ್ಲ. ಬದಲಾದ ಪರಿಸ್ಥಿತಿಯಲ್ಲಿ ಹೊಂದಾಣಿಕೆ ಅತ್ಯಗತ್ಯವಾಗಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನೂರಕ್ಕೆ ನೂರು ಈ ಬಾರಿ ಬಿಜೆಪಿ ಗೆಲುವು ಸಾಸಲಿದೆ. ಯೋಗೇಶ್ವರ್, ಅಶ್ವತ್ಥ ನಾರಯಾಣ ಅಥವಾ ಅಶ್ವತ್ಥ ನಾರಯಾಣಗೌಡ ಪೈಕಿ ಯಾರು ಬೇಕಾದರು ಸ್ಪರ್ಧೆ ಮಾಡಬಹುದು. ಇಲ್ಲಿ ವ್ಯಕ್ತಿಗಳು ಗೌಣ. ಪಕ್ಷದ ಸಿದ್ಧಾಂತ ಇಟ್ಟುಕೊಂಡು ಚುನಾವಣೆಗೆ ಹೋಗಿ ಗೆಲುವು ಸಾಸುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಟಾಕ್ಸಿಕ್ ಸಿನಿಮಾ ರಿಲೀಸ್ ಸಮೀಪಿಸುತ್ತಿದ್ದಂತೆ ಐಟಿ ಪ್ರಕರಣದಲ್ಲಿ ನಟ ಯಶ್‌ಗೆ ಹೈಕೋರ್ಟ್ ರಿಲೀಫ್