Council Election Karnataka : ಬಿಎಸ್‌ವೈ ಎಂಟ್ರಿ - ಇಲ್ಲೀಗ ಬಿಜೆಪಿಯದ್ದೆ ಗೆಲುವಿನ ನಿರೀಕ್ಷೆ

By Kannadaprabha News  |  First Published Dec 1, 2021, 10:09 AM IST
  • ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ
  •  ಮೈಸೂರು- ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್‌. ರಘು ಅವರ ಪರವಾಗಿ ಬಿ.ಎಸ್‌. ಯಡಿಯೂರಪ್ಪ ಪ್ರಚಾರ

ಮೈಸೂರು(ಡಿ.01):   ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ (Election ) ಮೈಸೂರು- ಚಾಮರಾಜನಗರ (Mysuru  Chamarajanagar)  ದ್ವಿಸದಸ್ಯ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ಆರ್‌. ರಘು ಅವರ ಪರವಾಗಿ ಡಿ.5 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa)  ಅವರು ಮತಯಾಚಿಸಲಿದ್ದಾರೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ (ST Somashekar)  ತಿಳಿಸಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಪಿರಿಯಾಪಟ್ಟಣ, ಎಚ್‌.ಡಿ. ಕೋಟೆ ಮತ್ತು ಹುಣಸೂರು ತಾಲೂಕುಗಳಲ್ಲಿ ಪ್ರಚಾರ ಮಾಡಿದ್ದೇವೆ. 2 ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಪ್ರಚಾರಕ್ಕಾಗಿ 15 ತಂಡ ರಚಿಸಿದ್ದೇವೆ. ಡಿ.5 ರಂದು ಮೈಸೂರು- ಚಾಮರಾಜನಗರದಲ್ಲಿ ಯಡಿಯೂರಪ್ಪ ಅವರು ಚುನಾವಣಾ ರಾರ‍ಯಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ರಘು ಕಳೆದ ಬಾರಿ ಕಡಿಮೆ ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಬಿಜೆಪಿ (BJP) ಗೆಲುವು ಖಚಿತ. 2 ಜಿಲ್ಲೆಗಳ ಮುಖಂಡರು ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಪಂಚಾಯಿತಿ ಸದಸ್ಯರ ಭೇಟಿ ಮಾಡಿ ಮನವಿ ಮಾಡುತ್ತಿದ್ದೇವೆ ಎಂದರು.

Tap to resize

Latest Videos

ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸಿದ ಕ್ಷೇತ್ರಗಳಲ್ಲಿ ಬೆಂಬಲ ನೀಡುವಂತೆ ಯಡಿಯೂರಪ್ಪ ಅವರು ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಬೆಂಬಲ ಕೋರಿದ್ದಾರೆ. ಹಾಗೆಂದು ಡಿ.ಕೆ. ಶಿವಕುಮಾರ್‌ (DK Shivakumar) ಅವರು ಬಿಜೆಪಿ ಬಲ ಕುಗ್ಗಿದೆ ಎನ್ನುವುದು ಸರಿಯಲ್ಲ. ಶಿವಕುಮಾರ್‌ ಅವರು ತಮ್ಮ ಪಕ್ಷದ ಬಗ್ಗೆ ಚಿಂತಿಸುವುದು ಒಳಿತು ಎಂದು ಅವರು ತಿರುಗೇಟು ನೀಡಿದರು.

ಸಿದ್ದರಾಮಯ್ಯ (Siddaramaiah) 2ನೇ ಮತ ಹಾಕಬೇಡಿ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಮೂರು ಪಕ್ಷಗಳ ಅಭ್ಯರ್ಥಿಗಳು ಒಂದೇ ಮತ ಕೇಳುತ್ತಿರುವುದು. ಆದರೆ, ಗ್ರಾಪಂ ಸದಸ್ಯರು ಬುದ್ಧಿವಂತರಿದ್ದಾರೆ. ಶೇ. 70 ಯುವಕರಿದ್ದಾರೆ. ಯಾರನ್ನು ಮೇಲ್ಮನೆಗೆ ಕಳುಹಿಸಬೇಕೆಂದು ನಿರ್ಧರಿಸಿದ್ದಾರೆ. ಹೀಗಾಗಿ, ಬಿಜೆಪಿ ಅಭ್ಯರ್ಥಿ ಆರ್‌. ರಘು ಅವರು ಪ್ರಥಮ ಪ್ರಾಶಸ್ತ್ಯ ಮತಗಳಲ್ಲೇ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆರ್‌. ರಘು ಅವರು ಈಗಾಗಲೇ ಎಲ್ಲಾ ಕಡೆ ಪಂಚಾಯಿತಿ ಮಟ್ಟದಲ್ಲಿ ಸುತ್ತಾಡಿಕೊಂಡು ಬಂದಿದ್ದಾರೆ. ನಾವು ಕೂಡ ಯಾರಿಗೂ ಎರಡನೇ ಪ್ರಾಶಸ್ತ್ಯ ಮತ ಕೇಳ್ತಿಲ್ಲ. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದರು.

ಎಲ್ಲಾ ಪಕ್ಷಗಳಲ್ಲಿಯು ಇದೆ  ಪೈಪೋಟಿ :  ಮೈಸೂರು- ಚಾಮರಾಜನಗರ (Mysuru - chamarajanagar) ಸ್ಥಳೀಯ ಸಂಸ್ಥೆಗಳ ದ್ವಿ ಸದಸ್ಯ ಕ್ಷೇತ್ರದಿಂದ ಡಿ.10 ರಂದು ಮೇಲ್ಮನೆಗೆ ನಡೆಯುವ ಚುನಾವಣಾ ಪ್ರಚಾರ ನಿಧಾನವಾಗಿ ರಂಗೇರುತ್ತಿದೆ. ಅಭ್ಯರ್ಥಿಗಳು ತಮ್ಮ ಪಕ್ಷದ ಶಾಸಕರು, ಮಾಜಿ ಶಾಸಕರ ಜೊತೆ ಹಳ್ಳಿ ಹಳ್ಳಿ ಸುತ್ತಿ, ಮತಬೇಟೆ ಆರಂಬಿಸಿದ್ದಾರೆ.  ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddatamaiah) ಅವರ ನೇತೃತ್ವದಲ್ಲಿ ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್‌ (Congress) ಜನಜಾಗೃತಿ ಸಮಾವೇಶ ಏರ್ಪಡಿಸಿದೆ. ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ- ಈ ಮೂರು ಪ್ರಮುಖ ಪಕ್ಷಗಳ ಮತ್ತಷ್ಟು ನಾಯಕರು ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ.

ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಿ, ನಿಯಮಿತವಾಗಿ ಚುನಾವಣೆ (Election) ನಡೆಸಲು ಆರಂಭಿಸಿದ ನಂತರ ಈವರೆಗೆ ಐದು ಚುನಾವಣೆಗಳು ನಡೆದಿದ್ದು, ಮೊದಲ ಬಾರಿ ಕಾಂಗ್ರೆಸ್‌ನ ಟಿ.ಎನ್‌. ನರಸಿಂಹಮೂರ್ತಿ- ಜನತಾಪಕ್ಷದ ವಿ.ಎಚ್‌. ಗೌಡ, ಎರಡನೇ ಬಾರಿ ಕಾಂಗ್ರೆಸ್‌ನ ಸಿ. ರಮೇಶ್‌- ಜನತಾದಳದ ವೈ. ಮಹೇಶ್‌, ಮೂರನೇ ಬಾರಿ ಕಾಂಗ್ರೆಸ್‌ನ (Congress) ಎನ್‌. ಮಂಜುನಾಥ್‌- ಜೆಡಿಎಸ್‌ನ ಬಿ. ಚಿದಾನಂದ, ನಾಲ್ಕನೇ ಬಾರಿ ಜೆಡಿಎಸ್‌ನ ಸಂದೇಶ್‌ ನಾಗರಾಜ್‌- ಬಿಜೆಪಿಯ ಪ್ರೊ.ಕೆ.ಆರ್‌. ಮಲ್ಲಿಕಾರ್ಜನಪ್ಪ ಗೆದ್ದಿದ್ದರು. ಮಲ್ಲಿಕಾರ್ಜನಪ್ಪ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ (Assembly Election) ಚಾಮರಾಜನಗರ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ ಇನ್ನೂ ಎರಡೂವರೆ ವರ್ಷ ಇರುವಾಗಲೇ ರಾಜಿನಾಮೆ ನೀಡಿದ್ದರಿಂದ ಉಪ ಚುನಾವಣೆ ನಡೆಯಿತು. ಆಗ ಕಾಂಗ್ರೆಸ್‌ನ ಆರ್‌. ಧರ್ಮಸೇನ ಚುನಾಯಿತರಾಗಿದ್ದರು. ಬಿಜೆಪಿ ಹಾಗೂ ಜೆಡಿಎಸ್‌ ಸ್ಪರ್ಧಿಸಿರಲಿಲ್ಲ. ಕೆಜೆಪಿಯಿಂದ ಯು.ಎಸ್‌. ಶೇಖರ್‌ ಕಣದಲ್ಲಿದ್ದರು. 2015ರಲ್ಲಿ ನಡೆದ ಐದನೇ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್‌. ಧರ್ಮಸೇನ ಹಾಗೂ ಜೆಡಿಎಸ್‌ನ ಸಂದೇಶ್‌ ನಾಗರಾಜ್‌ ಪುನಾರಾಯ್ಕೆಯಾಗಿದ್ದರು. ಬಿಜೆಪಿಯ (BJP) ಆರ್‌. ರಘು ಪರಾಭವಗೊಂಡಿದ್ದರು. ಈ ಬಾರಿ ಧರ್ಮಸೇನ ಹಾಗೂ ಸಂದೇಶ್‌ ನಾಗರಾಜ್‌ ಅವರಿಗೆ ಆಯಾ ಪಕ್ಷಗಳು ಟಿಕೆಟ್‌ ನಿರಾಕರಿಸಿವೆ. ಆದರೆ ರಘುಗೆ ಬಿಜೆಪಿ ಮತ್ತೊಂದು ಅವಕಾಶ ನೀಡಿದೆ.

ಆರು ವರ್ಷಗಳ ಹಿಂದೆ ನಡೆದ ಚುನಾವಣೆಯ (election) ನಂತರ ರಾಜಕೀಯವಾಗಿ ಸಾಕಷ್ಟುಬದಲಾವಣೆಗಳಾಗಿವೆ. ಮೊದಲೆಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಎಂದರೇ ಕಾಂಗ್ರೆಸ್‌ ಹಾಗೂ ಜನತಾ ಪರಿವಾರಕ್ಕೆ ತಲಾ ಒಂದೊಂದು ಸ್ಥಾನ ಎಂಬಂತಿತ್ತು. ಇದು 2010 ರಲ್ಲಿ ಸುಳ್ಳಾಗಿದೆ. ನಾನಾ ಕಾರಣಗಳಿಂದ ಬಿಜೆಪಿ ಕೂಡ ಈಗ ಪೈಪೋಟಿ ಕೊಡುವ ಮಟ್ಟಕ್ಕೆ ಬೆಳೆದಿದೆ. ಈ ಬಾರಿ ಗೆಲ್ಲಲು ಬಿಜೆಪಿ ಭಾರಿ ಪ್ರಯತ್ನ ಮಾಡುತ್ತಿದೆ.

ಕಾಂಗ್ರೆಸ್‌ನಿಂದ ಆರೋಗ್ಯ ಇಲಾಖೆಯ (Health Department) ನಿವೃತ್ತ ಯೋಜನಾ ನಿರ್ದೇಶಕ, ದಲಿತರಲ್ಲಿ ಎಡಗೈ ಸಮೂದಾಯದ ಡಾ.ಡಿ. ತಿಮ್ಮಯ್ಯಅವರಿಗೆ ಟಿಕೆಟ್‌ ನೀಡಿದೆ. ಬಿಜೆಪಿಯಿಂದ ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹಿಂದುಳಿದ ಸೂಕ್ಷ್ಮಾತಿಸೂಕ್ಷ್ಮ ಮಡಿವಾಳ ಜನಾಂಗಕ್ಕೆ ಸೇರಿದ ಆರ್‌. ರಘು ಎರಡನೇ ಬಾರಿ ಅದೃಷ್ಟಪರೀಕ್ಷಿಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದ ಗ್ರಾಪಂ, ತಾಪಂ ಮಾಜಿ ಸದಸ್ಯ, ಕೇಂದ್ರ ಪರಿಹಾರ ಸಮಿತಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಿ.ಎನ್‌. ಮಂಜೇಗೌಡ ಟಿಕೆಟ್‌ ಗಿಟ್ಟಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಜೆಡಿಎಸ್‌ ಪರವಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪಕ್ಷದ ಮುಖಂಡರ ಸಭೆ ನಡೆಸಿದ್ದರು.ಶಾಸಕರಾದ ಸಾ.ರಾ. ಮಹೇಶ್‌, ಕೆ. ಮಹದೇವ್‌, ಎಂ. ಅಶ್ವಿನ್‌ಕುಮಾರ್‌ ಮೊದಲಾದವರು ಭಾಗವಹಿಸಿದ್ದರು. ಮತ್ತೊರ್ವ ಶಾಸಕ ಜಿ.ಟಿ. ದೇವೇಗೌಡ ಜೆಡಿಎಸ್‌ನಿಂದ ದೂರ ಉಳಿದಿದ್ದಾರೆ. ಕಾಂಗ್ರೆಸ್‌ ನಾಮಪತ್ರ ಸಲ್ಲಿಕೆಗೂ ಮೊದಲು ಮಾಜಿ ಸಿಎಂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖಂಡರ ಸಭೆ ನಡೆಸಿದ್ದರು. ನಂತರ ಕಳೆದ ಮೂರು ದಿನಗಳಿಂದ ನಗರದಲ್ಲಿಯೇ ಉಳಿದು ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ತಂತ್ರ ರೂಪಿಸುತ್ತಿದ್ದಾರೆ.

click me!