MLC Election: ಚುನಾವಣೆ ಕಣದಿಂದ ಹಿಂದೆ ಸರಿದ ಜೆಡಿಎಸ್, ಕಾಂಗ್ರೆಸ್-ಬಿಜೆಪಿ ನಡುವೆ ಫೈಟ್

By Suvarna News  |  First Published Nov 26, 2021, 9:08 PM IST

* ರಾಜ್ಯದಲ್ಲಿ ರಂಗೇರಿದ ವಿಧಾನಪರಿಷತ್ ಚುನಾವಣೆ
* ಚುನಾವಣೆ ಕಣದಿಂದ ಹಿಂದೆ ಸರಿದ ಜೆಡಿಎಸ್
* ಚುನಾವಣಾ ಕಣ ರಂಗೇರುತ್ತಿರುವಾಗಲೇ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್


ಕೊಡಗು, (ನ.26): ರಾಜ್ಯದಲ್ಲಿ 25 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆಗೆ (Karnataka Council Election :) ದಿನಾಂಕ ಘೋಷಣೆಯಾಗಿದ್ದು, ರಾಜ್ಯ ರಾಜಕೀಯ ರಂಗೇರಿದೆ.

ಚುನಾವಣಾ ಕಣ ರಂಗೇರುತ್ತಿರುವಾಗಲೇ ಕೊಡಗು (Kodagu) ಜೆಡಿಎಸ್ ಅಭ್ಯರ್ಥಿ (JDS Candidate) ನಾಮಪತ್ರ ವಾಪಸ್ ಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

Tap to resize

Latest Videos

undefined

Karnataka Council Election : ಮೈಸೂರಲ್ಲಿ ಕೈ ವಲಸಿಗ ಅಭ್ಯರ್ಥಿಗೆ ಟಿಕೆಟ್ ಕೊಟ್ಟು ಜೆಡಿಎಸ್‌ ತಂತ್ರ

ಕೊಡಗು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ (Kodagu MLC) ಜೆಡಿಎಸ್‌ನಿಂದ ಅಖಾಡಕ್ಕಿಳಿಸಿದ್ದ ಇಸಾಕ್ ಖಾನ್(Ishaq Khan ) ನಾಮಪತ್ರ ವಾಪಸ್ ಪಡೆಯುವ ಮೂಲಕ ಚುನಾವಣೆ ಕಣದಿಂದ ಹಿಂದೆ ಸರಿಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನೇರ ಹಣಾಹಣಿಗೆ ವೇದಿಕೆ ಸಜ್ಜಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸಾಕ್ ಖಾನ್, ಮಧ್ಯಾಹ್ನ ಹೈಕಮಾಂಡ್‍ನಿಂದ ಸೂಚನೆ ಬಂದಿದೆ. ಕುಮಾರಸ್ವಾಮಿ ಅವರೇ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದರು. ಹೀಗಾಗಿ ಹೈಕಮಾಂಡ್ ಸೂಚನೆಯಂತೆ ನಾಮಪತ್ರ ವಾಪಸ್ ಪಡೆದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇಂದು (ನ.26) ಬೆಳಗ್ಗೆವರೆಗೆ ಚುನಾವಣೆ ಎದುರಿಸುತ್ತೇವೆ ಎಂದು ದೃಢವಾದ ನಿರ್ಧಾರದಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಇಸಾಕ್ ಖಾನ್, ನಾಮಪತ್ರ ವಾಪಸ್ ಪಡೆಯುವಂತೆ ನನ್ನ ಮೇಲೆ ಕಾಂಗ್ರೆಸ್ ಮುಖಂಡರು ಒತ್ತಡ ಹಾಕುತ್ತಿದ್ದಾರೆ. ಜೆಡಿಎಸ್ ಅಲ್ಪಸಂಖ್ಯಾತರನ್ನು ಗುರುತಿಸಿ ಟಿಕೆಟ್ ನೀಡಿತ್ತು. ಆದರೆ ಅಲ್ಪಸಂಖ್ಯಾತರ ವೋಟುಗಳನ್ನು ಹಾಳು ಮಾಡುವುದಕ್ಕಾಗಿಯೇ ಜೆಡಿಎಸ್ ಅಭ್ಯರ್ಥಿ ಹಾಕಿದೆ ಎಂದು ಕಾಂಗ್ರೆಸ್ಸಿನವರು ಆರೋಪಿಸಿ ನಮಗೆ ಮಾನಸಿಕ ಒತ್ತಡ ಹಾಕುತ್ತಿದ್ದಾರೆ ಎಂದು ಇಸಾಕ್ ಖಾನ್ ಹೇಳಿದ್ದರು.

ಇನ್ನು ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಬಳಿ ಪ್ರತಿಕ್ರಿಯೆ ಕೇಳಿದರೆ, ನಾವು ಯಾವುದೇ ಒತ್ತಡ ಹಾಕಿಲ್ಲ. ಅವರು ನಾಮಪತ್ರ ವಾಪಸ್ ಪಡೆಯುತ್ತಿರುವುದು ನಮಗೆ ಗೊತ್ತಿಲ್ಲ. ಜೆಡಿಎಸ್ ಹೈಕಮಾಂಡ್ ಮನಸ್ಸಿನಲ್ಲಿ ಯಾವ ನಿರ್ಧಾರ ಇತ್ತೋ ಗೊತ್ತಿಲ್ಲ. ಬಹುಶಃ ಕೋಮುವಾದಿಗಳಿಗೆ ಅನುಕೂಲ ಆಗಬಾರದೆಂದು ಅವರ ಅಭ್ಯರ್ಥಿಯ ನಾಮಪತ್ರ ವಾಪಸ್ ತೆಗೆದುಕೊಳ್ಳಲು ಹೇಳಿರಬಹುದು ಎಂದು ಹೇಳಿದರು.

ಅವರು ನಾಮಪತ್ರ ವಾಪಸ್ ಪಡೆದಿರುವುದರಿಂದ ನಾವು ಜೆಡಿಎಸ್ ಮುಖಂಡ ಬೆಂಬಲವನ್ನು ಕೋರುತ್ತೇವೆ. ಬೆಂಬಲ ಕೋರುವುದು ನನ್ನ ಜವಾಬ್ದಾರಿ. ಬೆಂಬಲ ಕೊಡುವುದು ಬಿಡುವುದು ಜೆಡಿಎಸ್ ನಾಯಕರಿಗೆ ಬಿಟ್ಟಿದ್ದು. ಆದರೆ ಹಲವು ವರ್ಷಗಳಿಂದ ಕೊಡಗಿನಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಇದರಿಂದ ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೇ ಈ ಬಾರಿ ಬದಲಾವಣೆ ಆಗಲೇಬೇಕೆಂದು ನೇರವಾಗಿ ನಮ್ಮ ಬಳಿ ಹೇಳುತ್ತಿದ್ದಾರೆ. ಹೀಗಾಗಿ ನಾವು ಗೆಲ್ಲುವ ವಿಶ್ವಾಸದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಕೊಡಗಿನ 103 ಗ್ರಾಮ ಪಂಚಾಯಿತಿಗಳಲ್ಲಿ 1,334 ಮತಗಳಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದ್ದು, ಬಿರುಸಿನ ಪ್ರಚಾರ ನಡೆಯುತ್ತಿದೆ. ಆದರೆ ಮತದಾರರು ಯಾರ ಕೈ ಹಿಡಿಯುತ್ತಾರೊ ಕಾದು ನೋಡಬೇಕಿದೆ.

ಬಿಜೆಪಿಗೆ ಬೆಂಬಲ ಕೊಡುತ್ತಾ ಜೆಡಿಎಸ್?
ಯೆಸ್..ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಒಪ್ಪಂದದ ಮಾತುಗಳು ಕೇಳಿಬರುತ್ತಿವೆ. ಜೆಡಿಎಸ್‌ ಇಲ್ಲದ ಕಡೆ ಬಿಜೆಪಿಗೆ, ಬಿಜೆಪಿ ಇಲ್ಲದ ಕಡೆ ಜೆಡಿಎಸ್‌ಗೆ ಬೆಂಬಲಿಸುವ ಬಗ್ಗೆ ಉಭಯ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಸ್ವತಃ ಬಿಎಸ್ ಯಡಿಯೂರಪ್ಪ ಅವರೇ ಜೆಡಿಎಸ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿದ್ದರು.

ಇದೀಗ ಕೊಡಗು ಜಿಲ್ಲೆಯೂ ಸಹ ಜೆಡಿಎಸ್, ಬಿಜೆಪಿ ಬೆಂಬಲ ಸೂಚಿಸುವ ಸಾಧ್ಯತೆಗಳಿವೆ. ಗೆಲ್ಲುವ ವಾತಾವರಣ ಇಲ್ಲದ ಕಾರಣ ಕುಮಾರಸ್ವಾಮಿ ಅವರು ತಮ್ಮ ಅಭ್ಯರ್ಥಿಗೆ ನಾಪಮತ್ರ ವಾಪಸ್ ತೆಗೆದುಕೊಳ್ಳುವಂತೆ ಹೇಳಿರುವ ಸಾಧ್ಯತೆಗಳಿವೆ.

click me!