Udupi: ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ರೇಸ್ ನಲ್ಲಿ ಯಶ್ ಪಾಲ್ ಸುವರ್ಣ

By Suvarna NewsFirst Published Feb 2, 2023, 6:59 PM IST
Highlights

ರಾಜ್ಯ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮೊಗವೀರ ಸಮುದಾಯದ ಶಕ್ತಿ ಪ್ರದರ್ಶನ ನಡೆದಿದೆ. ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ರೇಸ್ ನಲ್ಲಿರುವ ಯಶ್ ಪಾಲ್ ಸುವರ್ಣ, ಪರ ಸಮುದಾಯದ ನಾಯಕರು ಬ್ಯಾಟಿಂಗ್ ಆರಂಭಿಸಿದ್ದಾರೆ.

ಉಡುಪಿ (ಫೆ.2): ರಾಜ್ಯ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮೊಗವೀರ ಸಮುದಾಯದ ಶಕ್ತಿ ಪ್ರದರ್ಶನ ನಡೆದಿದೆ. ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ರೇಸ್ ನಲ್ಲಿರುವ ಯಶ್ ಪಾಲ್ ಸುವರ್ಣ, ಪರ ಸಮುದಾಯದ ನಾಯಕರು ಬ್ಯಾಟಿಂಗ್ ಆರಂಭಿಸಿದ್ದಾರೆ. ಮೊಗವೀರ ಸಮಾಜದ ಕೂಗು ದೆಹಲಿಯವರೆಗೆ ಮುಟ್ಟಿಸಬೇಕಾಗಿದೆ. ಯಶ್ಪಾಲ್ ಸುವರ್ಣ ಅವರಿಗೆ ಕೇವಲ ಸಹಕಾರಿ ರತ್ನ ಕೊಟ್ಟರೇ ಸಾಲದು. ರಾಜಕೀಯದಲ್ಲೂ ಪ್ರಾತಿನಿಧ್ಯ ದೊರಕಬೇಕು ಎಂದು ನಾಡೋಜ ಜಿ.ಶಂಕರ್ ಎಂದು ಹೇಳಿದ್ದಾರೆ. 

ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ.ಶಂಕರ್ ತೆರೆದ ಸಭಾಂಗಣದಲ್ಲಿ, ಯಶ್ಪಾಲ್ ಸುವರ್ಣ ಅಭಿನಂದನಾ ಸಮಿತಿ, ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ, ಮೀನು ಮಾರಾಟ ಫೆಡರೇಶನ್ ನಿ.ಮಂಗಳೂರು ವತಿಯಿಂದ ಅವಿಭಜಿತ ದ.ಕ ಜಿಲ್ಲೆಯ ವಿವಿಧ ಸಹಕಾರಿ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ, ಯಶ್ಪಾಲ್ ಎ ಸುವರ್ಣ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೈವ ದೇವರ ಕೃಪೆಯಿಂದ ಯಶ್ಪಾಲ್ ಸುವರ್ಣ ಅವರು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಲಿ ಎಂದು ಬೆಳೆಯುವಂತಾಗಲಿ ಎಂದು ಹರಸಿದರು. 

ಇಂಧನ ಸಚಿವ ಸುನೀಲ್ ಕುಮಾರ್ ಮಾತನಾಡಿ, ಕಳೆದ 25 ವರ್ಷಗಳಿಂದ ಹಿಂದುತ್ವದ ಹೋರಾಟ ಮಾಡುತ್ತಾ ಯಶ್ಪಾಲ್ ಸುವರ್ಣ ಬೆಳೆದಿದ್ದಾರೆ. ಬಿಜೆಪಿಯಲ್ಲಿ ಹತ್ತು ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿ, ಸಹಕಾರಿ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡುತ್ತಿರುವ ಯಶ್ಪಾಲ್ ಅವರ ಮುಂದಿನ ಭವಿಷ್ಯ ಉತ್ತಮವಾಗಿರಲಿ, ಶ್ರದ್ದೆ, ಪರಿಶ್ರಮದಿಂದ ಯಶ್ಪಾಲ್ ನಾಯಕನಾಗಿದ್ದಾರೆ ಎಂದವರು ಹೇಳಿದರು. 

ವೇದಿಕೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಬಿ.ಎಮ್.ಸುಕುಮಾರ್ ಶೆಟ್ಟಿ, ಲಾಲಾಜಿ ಮೆಂಡನ್, ರಘುಪತಿ ಭಟ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ ಅಧ್ಯಕ್ಷ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಗುರ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಬಿಜೆಪಿ ಮುಖಂಡ ಮಟ್ಟಾರು ರತ್ನಾಕರ ಹೆಗ್ಡೆ, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ.ಸಿ.ಕೋಟ್ಯಾನ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ, ಉದ್ಯಮಿಗಳಾದ ಮನೋಹರ. ಎಸ್.ಶೆಟ್ಟಿ, ಜೆರ್ರಿ ವಿನ್ಸೆಂಟ್ ಡಯಾಸ್, ಆನಂದ.ಪಿ.ಸುವರ್ಣ, ಹರಿಯಪ್ಪ ಕೋಟ್ಯಾನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ದೇವಾಡಿಗರ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ.

ರಾಜ್ಯ ಕುಂಬಾರರ ಮಹಾಸಂಘದ ರಾಜ್ಯ ಕಾರ್ಯಾಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಉಳ್ತೂರು, ಬಾರ್ಕೂರು ಮಾಲ್ತಿದೇವಿ ದೇವಸ್ಥಾನದ ಆಡಳಿತ ಮೊಕೇಸ್ತರ ಗೋಕುಲ್ ದಾಸ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಕೊಡವೂರು ಶಂಕರ ನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಕಚ್ಚೂರು ನಾಗೇಶ್ವರ ದೇವಸ್ಥಾನದ ಆಡಳಿತ ಮೊಕೇಸ್ತರ ಕಡಂದಲೆ ಸುರೇಶ್ ಭಂಡಾರಿ, ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಉಮೇಶ್ ಚೇರ್ಕಾಡಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕೇಸ್ತರ ದೇವಾನಂದ ಗುರಿಕಾರ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷ ಶೀಲಾ.ಕೆ.ಶೆಟ್ಟಿ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ಅಭಿನಂದನಾ ಸಮಿತಿ ಅಧ್ಯಕ್ಷ ಆನಂದ. ಸಿ.ಕುಂದರ್ ಉಪಸ್ಥಿತರಿದ್ದರು.

Kodagu: ಗಡಿಪಾರು ಪ್ರಕರಣದಲ್ಲಿ ಕೋರ್ಟಿಗೆ ಗೈರಾದ ಇಬ್ಬರ ಪರ ವಕೀಲರಿಂದ ವಕಾಲತ್ತು, ಪ್ರತಿಭಟನೆ

ಸಂಚಾಲಕ ಮಂಜುನಾಥ್ ಎಸ್.ಕೆ ಸ್ವಾಗತಿಸಿ, ಪ್ರ.ಕಾರ್ಯದರ್ಶಿ ಕುತ್ಯಾರು ಪ್ರಸಾದ್ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅಭಿನಂದನಾ ಮಾತುಗಳನ್ನಾಡಿದರು.

ಉಡುಪಿಯಲ್ಲಿ ಐಟಿಪಾರ್ಕ್‌ ನಿರ್ಮಿಸುವಂತೆ ಪೇಜಾವರ ಶ್ರೀಗಳ ಒತ್ತಾಯ : ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ಗೆ ಪತ್ರ

ಆನೆಗುಂದಿ ಮಹಾಸಂಸ್ಥಾನ ಮಠದ ಕಾಳಹಸ್ತೇಂದ್ರ ಸರಸ್ವತೀ ಆರ್ಶಿವಚಿಸಿದರು. ನೂರಾರು ಸಂಘ ಸಂಸ್ಥೆಗಳು ಯಶ್ಪಾಲ್ ಸುವರ್ಣ ಅವರನ್ನು ಅಭಿನಂದಿಸಿದರು. ಹತ್ತು ಸಾವಿರಕ್ಕೂ ಮಿಕ್ಕಿ ಜನರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದರು.

click me!