ಅಮಿತ್ ಶಾ ಮೈಸೂರು ಭಾಗದಲ್ಲಿ ಬಂದಾಕ್ಷಣ ಲಗ್ಗೆ ಇಟ್ಟಹಾಗ? ಅವರು ರೋಡ್ ಶೋ ಮಾಡಿದಾಕ್ಷಣ ಭದ್ರಕೋಟೆಗೆ ಲಗ್ಗೆ ಹಾಕಿದ್ರು ಅನ್ನೋ ಭ್ರಮೆ ಬೇಡ. ಅದೆಲ್ಲ ಮತ ವಾಗಿ ಬದಲಾಗಬೇಕಲ್ಲ? ಅಮಿತ್ ಶಾ ಅವರ ಕಾರ್ಯಕ್ರಮ ನೋಡಿದ್ದೇನೆ. ನನಗೆ ಬಂದಿದ್ದ ಜನ ಅವರಿಗೆ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮೈಸೂರು (ಏ.26) : ಅಮಿತ್ ಶಾ ಮೈಸೂರು ಭಾಗದಲ್ಲಿ ಬಂದಾಕ್ಷಣ ಲಗ್ಗೆ ಇಟ್ಟಹಾಗ? ಅವರು ರೋಡ್ ಶೋ ಮಾಡಿದಾಕ್ಷಣ ಭದ್ರಕೋಟೆಗೆ ಲಗ್ಗೆ ಹಾಕಿದ್ರು ಅನ್ನೋ ಭ್ರಮೆ ಬೇಡ. ಅದೆಲ್ಲ ಮತ ವಾಗಿ ಬದಲಾಗಬೇಕಲ್ಲ? ಅಮಿತ್ ಶಾ ಅವರ ಕಾರ್ಯಕ್ರಮ ನೋಡಿದ್ದೇನೆ. ನನಗೆ ಬಂದಿದ್ದ ಜನ ಅವರಿಗೆ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) ವಾಗ್ದಾಳಿ ನಡೆಸಿದರು.
ಮೈಸೂರಿನ ಚಾಮುಂಡಿಬೆಟ್ಟ(Chamundeshwari temple)ಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿಗಿಂತ ನಮ್ಮ ಜೆಡಿಎಸ್ ಸ್ಥಾನ ದೊಡ್ಡ ದಿರುತ್ತದೆ. ಅಮಿತ್ ಶಾ(Amit shah), ಪ್ರಿಯಾಂಕ ಗಾಂಧಿ(Priyanka gandhi) ಆಟ ನಮ್ಮ ರಾಜ್ಯದಲ್ಲಿ ನಡೆಯುವುದಿಲ್ಲ. ಕನ್ನಡ ನಾಡಿಗೆ ಅವರ ಕೊಡುಗೆ ಏನೂ ಇಲ್ಲ ಅಮಿತ್ ಶಾಗೆ ರಾಜ್ಯದಲ್ಲಿ ಜನ ಬೆಂಬಲ ವ್ಯಕ್ತವಾಗುತ್ತಿಲ್ಲ. ಅವರ ರಾರಯಲಿಗೆ ಹೆಚ್ಚಿನ ಜನರು ಬರುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಜನ ಬೆಂಬಲ ಕಳೆದುಕೊಂಡಿದ್ದಾರೆ ಎಂದು ಕಟಕಿದರು.
ರೈತರ ಕಣ್ಣೀರು ಒರೆಸಲು ಎಚ್‌ಡಿಕೆ ಸಿಎಂ ಆಗಬೇಕು: ಎಚ್‌ಡಿ ದೇವೇಗೌಡ
ವರುಣದಲ್ಲಿ ಬಿಜೆಪಿ ಜತೆ ಒಳ ಒಪ್ಪಂದವಿಲ್ಲ:
ವರುಣ ಕ್ಷೇತ್ರ(Varuna assembly constituency)ದಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್-ಬಿಜೆಪಿ ಒಳ ಒಪ್ಪಂದದಂಥ ಯಾವ ತೀರ್ಮಾನವನ್ನೂ ತೆಗೆದುಕೊಂಡಿಲ್ಲ. ನಮಗೆ ಇನ್ನೊಬ್ಬ ಅಭ್ಯರ್ಥಿಯನ್ನು ಸೋಲಿಸು ವುದು ಮುಖ್ಯವಲ್ಲ. ನಮಗೆ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದರು.
HD Kumaraswamy: ಎರಡು ದಿನಗಳ ವಿಶ್ರಾಂತಿ ಬಳಿಕ ಚುನಾವಣಾ ಅಖಾಡಕ್ಕೆ ಎಚ್‌ಡಿಕೆ!
ಕಾಂಗ್ರೆಸ್ ಮುಗಿಸಲು ಸಿದ್ದು ಲಿಂಗಾಯತ ಹೇಳಿಕೆ?
ಲಿಂಗಾಯತ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ ಎಂದರು. ಇನ್ನು ಲಿಂಗಾಯತ ಸಮುದಾಯ ದ ಬಗ್ಗೆ ಸಿದ್ದರಾಮಯ್ಯ ಅವರ ಹೇಳಿಕೆಯೂ ಸರಿಯಲ್ಲ. ಅವರೊಬ್ಬ ಅನುಭವಿ ರಾಜಕಾರಣಿ. ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದರೋ ಗೊತ್ತಿಲ್ಲ. ಬಹುಶಃ ಕಾಂಗ್ರೆಸ್ ಮುಗಿಸ ಬೇಕು ಅಂತ ಆ ರೀತಿ ಹೇಳಿರಬಹುದು. ಭ್ರಷ್ಟಾಚಾರ ವಿಚಾರ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಎಂದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.