ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಘೋಷಿಸಿರುವ ಶೋಕಾ ಚರಣೆ ಹಿನ್ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ, ಹೊಸ ವರ್ಷಾಚರಣೆಗೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು (ಡಿ.30): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಘೋಷಿಸಿರುವ ಶೋಕಾ ಚರಣೆ ಹಿನ್ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ, ಹೊಸ ವರ್ಷಾಚರಣೆಗೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಏಳು ದಿನ ಶೋಕಾಚಾರಣೆ ಘೋಷಣೆ ಮಾಡಿದ್ದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ತಡೆ ಹಿಡಿಯಲಾಗಿದೆ. ಖಾಸಗಿ ಕಾರ್ಯ ಕ್ರಮಗಳಲ್ಲಿ ಹಸ್ತಕ್ಷೇಪ ಮಾಡಲ್ಲ, ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಬಹುದು ಎಂದರು. ಹೊಸ ವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ.
ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ.ಯಾರೊಬ್ಬರೂ ಕೆಟ್ಟ ತೋರುವಂತಿಲ್ಲ, ಅನುಚಿತ ವರ್ತನೆ, ಕಾನೂನು ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು. ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ, ಗಾಂಭೀರ್ಯ ಕಾಪಾಡಬೇಕು ಎಂದು ಈ ವೇಳೆ ಮನವಿ ಮಾಡಿದರು.
ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಶಕ್ತಿ ಏನೆಂಬುದು ಬಿಜೆಪಿಯವ್ರಿಗೂ ಗೊತ್ತಿದೆ: ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ. ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವ ಕಣ್ತುಂಬಿಕೊಳ್ಳಬೇಕು ಎಂದು ತಿಳಿಸಿದರು. ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮ ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರೂ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ.
ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡುತ್ತೇನೆ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದೆನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಕೇವಲ ಕಾಂಗ್ರೆಸ್ ಅಲ್ಲ, ಎಲ್ಲರ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ಡಿ.26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನೆ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ.26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ತಿಳಿಸಿದರು.