ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಸಂಸದ ಬೊಮ್ಮಾಯಿ

Published : Dec 21, 2025, 07:06 PM IST
Basavaraj Bommai

ಸಾರಾಂಶ

ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಹಾವೇರಿ (ಡಿ.21): ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ಪಿ‌ಎಚ್‌ಡಿ. ಪಡೆದಿದ್ದಾರೆ. ಉತ್ತರ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ ಆಗಿರುವುದು ಕಾಂಗ್ರೆಸ್ಸಿನಿಂದ, ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ ಮಾಡಿದ್ದು ಬಿಜೆಪಿ ಎಂಬ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದವರು ಕೇಸ್ ಹಾಕಿದ್ರು, ನಾವು ಕಳೆದ ಬಾರಿ ಅಸೆಂಬ್ಲಿಯಲ್ಲಿ ಗಲಾಟೆ ಮಾಡಿದ ಮೇಲೆ ಇವರು ಕೇಸ್ ಹಾಕಿದ್ದಾರೆ ಎಂದರು. ಒಪ್ಪಂದದಂತೆ ಸಿಎಂ ನಡೆದುಕೊಳ್ತಾರೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಆಟ ಹೈಕಮಾಂಡ್ ಆಡಿಸುತ್ತಿದೆ. ಹೈಕಮಾಂಡೇ ಇಬ್ಭಾಗ ಆಗಿದೆ.

ಕಾಂಗ್ರೆಸ್ ಹೈಕಮಾಂಡ್ ಎರಡು ಗುಂಪಾಗಿದೆ. ಹೀಗಾಗಿ ಯಾವುದೇ ನಿರ್ಣಯ ತಗೆದುಕೊಳ್ಳಲು ಆಗುತ್ತಿಲ್ಲ. ಇಬ್ಬರ ನಡುವೆ ಜಗಳ ಹಚ್ಚಿ ಎಲ್ಲಿವರೆಗೂ ಲಾಭ ತಗೊಳೋಕೆ ಆಗುತ್ತದೆಯೋ ತೆಗೆದುಕೊಳ್ಳುತ್ತಾರೆ. ಕರ್ನಾಟಕವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂ ತರ ಬಳಕೆ ಮಾಡುತ್ತಾರೆ ಅಷ್ಟೆ ಎಂದು ಹೇಳಿದರು. ಆರ್‌ಎಸ್‌ಎಸ್ ಮಾದರಿ ಸಂಘ ರಚನೆ ಮಾಡುವುದಾಗಿ ಕಾಂಗ್ರೆಸ್ ಎಂ.ಎಲ್ ಸಿ ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್‌ ಮಾದರಿ ಸಂಘಟನೆ ಮಾಡುತ್ತಾರೆ ಅಂದರೆ ಯಾರು ಬೇಡ ಅಂದರು, ಮಾಡಲಿ ಅದನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು.

ಜೈನ ಧರ್ಮ ನಿಸರ್ಗದ ಜೊತೆ ಬೆಳೆಯುವ, ಉಳಿಯುವ ಧರ್ಮ

ಜೈನ ಧರ್ಮ ನಿಸರ್ಗದ ಜೊತೆ ಬೆಳೆಯುವ ಉಳಿಯುವ ಧರ್ಮ. ಉಸಿರಾಟದಲ್ಲಿ ಸಣ್ಣ ಕ್ರಿಮಿಗೂ ತೊಂದರೆ ಆಗಬಾರದು ಎಂದು ಜೈನ ಧರ್ಮ ಹೇಳುತ್ತದೆ. ಜೈನ ಧರ್ಮದ ಆಚರಣೆ ಮಾಡಿದರೆ ಮಾನವರಲ್ಲಿ ಶ್ರೇಷ್ಠ ಮಾನವರಾಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ರಜನಿ ಸಭಾಂಗಣದಲ್ಲಿ ಬೃಹತ್ ಶ್ರೀ ಸಿದ್ಧಚಕ್ರ ಮಹಾಮಂಡಲ ವಿಧಾನ ಮಹೋತ್ಸವ ಸಮಿತಿ ಹಾಗೂ ಭಗವಾನ ಶ್ರೀ 1008 ನೇಮಿನಾಥ ದಿಗಂಬರ ಜೈನ್ ಮಂದಿರ ಕಮಿಟಿ ವತಿಯಿಂದ ಏರ್ಪಡಿಸಿದ ಬೃಹತ್ ಶ್ರೀ ಸಿದ್ಧಚಕ್ರ ಮಹಾಮಂಡಲ ವಿಧಾನ ಮಹೋತ್ಸವ ಹಾಗೂ ಪಿಂಛಿ ಪರಿವರ್ತನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಈ ಬದುಕು ಒಂದು ಸಂಘರ್ಷ. ಹುಟ್ಟಿದ ಮನುಷ್ಯ ಸಾಯುವವರೆಗೂ ಪ್ರತಿಯೊಂದು ಉಸಿರಾಟದಲ್ಲಿ ಪ್ರಯತ್ನ ಮಾಡಬೇಕು, ಆ ಪ್ರಯತ್ನ ನಮಗೆ ಗೊತ್ತಾಗುವುದಿಲ್ಲ. ಉಸಿರಾಡುವ ಪ್ರಾಣ ಪ್ರಕ್ರಿಯೆಯನ್ನು ಭಗವಂತ ನಡೆಸುತ್ತಾನೆ, ಯಾವುದನ್ನು ಭಗವಂತ ನಡೆಸುತ್ತಾನೆ ಅದು ಗೊತ್ತಾಗುವುದಿಲ್ಲ. ನಾವು ಮಾಡುವ ಪ್ರಯತ್ನಕ್ಕೆ ಆಯಾಸ ಇದೆ. ಕೋಟಿಗಟ್ಟಲೆ ಉಸಿರಾಟ ಮಾಡಿಸುವ ಭಗವಂತ ಎಷ್ಟು ಶ್ರೇಷ್ಠವಾಗಿರಬೇಕು. ಉಸಿರಾಟವನ್ನು ಹೇಗೆ ಮಾಡಬೇಕೆಂದು ಹೇಳುವುದು ಜೈನ ಧರ್ಮ. ಉಸಿರಾಟದಲ್ಲಿ ಸಣ್ಣ ಕ್ರಿಮಿಗೂ ತೊಂದರೆ ಆಗಬಾರದು ಎಂದು ಜೈನ ಧರ್ಮ ಹೇಳುತ್ತದೆ. ಬದುಕು ಹೇಗೆ ನಡೆಸಬೇಕೆಂದು ಹೇಳಿ ಕೊಟ್ಟಿದ್ದಾರೆ. ಆ ಬದುಕಿನ ಉಸಿರಾಟದ ಬಗ್ಗೆ ಜೈನ ಧರ್ಮ ಹೆಳುತ್ತದೆ. ಗುರುಗಳು ಹೇಳಿದಂತೆ ಜೈನ ಧರ್ಮದ ಆಚರಣೆಗಳನ್ಬು ಮಾಡಿದರೆ ಮಾನವರಲ್ಲಿ ಶ್ರೇಷ್ಠ ಮಾನವರಾಗಲು ಸಾಧ್ಯ. ಅಹಿಂಸೆಯೇ ಪರಮೋ ಧರ್ಮ. ಜೈನ ಧರ್ಮ ನಿಸರ್ಗದ ಜೊತೆ ಬೆಳೆಯುವ ಉಳಿಯುವ ಧರ್ಮ. ನಿಸರ್ಗದಲ್ಲಿ ಒಂದು ಪಕ್ಷಿ, ಕ್ರಿಮಿ ಪ್ರಾಣಿಗಳಿಗೆ ತನ್ನದೇ ರೀತಿಯಲ್ಲಿ ಬದುಕಲು ಭಗವಂತ ಅವಕಾಶ ಕೊಟ್ಟಿದ್ದಾನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ
ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ: ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ