ಪಂಚ ಗ್ಯಾರಂಟಿ ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ: ಸಂಸದ ಬೊಮ್ಮಾಯಿ

Published : Feb 21, 2025, 05:34 PM ISTUpdated : Feb 21, 2025, 05:38 PM IST
ಪಂಚ ಗ್ಯಾರಂಟಿ ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ: ಸಂಸದ ಬೊಮ್ಮಾಯಿ

ಸಾರಾಂಶ

ಗ್ಯಾರಂಟಿ ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಯಾಗಿದೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹರಿಹಾಯಯ್ದರು.   

ಗದಗ (ಫೆ.21): ಗ್ಯಾರಂಟಿ ರಾಜಕೀಯ ಲಾಭಕ್ಕಾಗಿ, ಮತಕ್ಕಾಗಿ ಮಾಡಿದ ಯೋಜನೆಯಾಗಿದೆ. ಜನರಿಗೆ, ತಾಯಂದಿರಿಗೆ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹರಿಹಾಯಯ್ದರು. ಗದಗನಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಹಣ ಸರಿಯಾಗಿ ಯಾವ ತಿಂಗಳೂ ಬಂದಿಲ್ಲ. ಗೃಹಲಕ್ಷ್ಮೀ ಯೋಜನೆ ಹಣ ಸಂಬಳವೇ ಅಂತಾ ಕೇಳ್ತಾರೆ. ಅದು ಗೌರವ ಧನ. ತಿಂಗಳು ತಿಂಗಳಿಗೆ ಕೊಟ್ಟಿಲ್ಲ ಅಂದರೆ ಗೌರವ ಕೊಟ್ಟಿಲ್ಲ ಅಂತಲೇ ಅರ್ಥ ಹೆಣ್ಣು ಮಕ್ಕಳಿಗೆ ಗೌರವ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.

ಹಣಕಾಸಿನ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಸಿಎಂ ಭಂಡತನದಿಂದ ಒಪ್ಪಿಕೊಳ್ತಿಲ್ಲ. ಕೇವಲ ಗ್ಯಾರಂಟಿಗೆ ಅಷ್ಟೇ ಅಲ್ಲ. ಯಾವುದೇ ಅಭಿವೃದ್ಧಿಗೂ ಹಣ ಇಲ್ಲ. ಸಾಲದ ರೂಪದ ಯೋಜನೆಗಳನ್ನು ಬಿಟ್ಟರೆ ಯಾವುದು ಇಲ್ಲ. ಕುಡಿಯುವ ನೀರಿನ ಯೋಜನೆಗೆ ಹಣ ಕೊಡದೇ ಕುಂಠಿತವಾಗಿದೆ. ರಾಜ್ಯ ಸರ್ಕಾರ ಜನರನ್ನ ಸಂಕಷ್ಟಕ್ಕೆ ದೂಡುತ್ತಿದೆ. ಜನ ಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ತೆರಿಗೆ ಪಡೆದು ಅದನ್ನೇ ಗ್ಯಾರಂಟಿ‌ ರೂಪದಲ್ಲಿ ಮರಳಿ ಕೊಡಲು ಮುಂದಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ಗೆ ಅಭಿವೃದ್ಧಿ ಮಾಡಲು ಮನಸ್ಸಿಲ್ಲ: ಕಾಂಗ್ರೆಸ್ ವೈಫಲ್ಯ ಮುಚ್ಚಿಹಾಕಿಕೊಳ್ಳಲು ಉದಯ ನಗರ ಗಲಾಟೆ, ಆತಂಕರಿಗೆ ಗಲಭೆ ಸೃಷ್ಟಿ ಮಾಡಿದೆ. ಹಿಜಾಬ್ ವಿಷಯವಾಗಿ ಹೈಕೋರ್ಟ್ ಆದೇಶಕೊಟ್ಟಿದೆ. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ. 1980 ರ ಶಿಕ್ಷಣ ನೀತಿಯ ಪ್ರಕಾರ ಸಮವಸ್ತ್ರ ಒಪ್ಪಿಕೊಳ್ಳಲಾಗಿದೆ. ಹಿಜಾಬ್, ಮತ್ತೊಂದು ತರುವ ಯೋಚನೆ ಮಾಡಲಾಗ್ತಿದೆ. ಕೆಲ ಸಂಘಟನೆಗಳು ಹಿಜಾಬ್ ತರಲು ಮುಂದಾಗಿದ್ದು ಸರ್ಕಾರದ ಕುಮ್ಮಕ್ಕು ನೀಡ್ತಿದೆ. ವಿಶ್ವ ವಿದ್ಯಾಲಯ ಉಳಿಸಿ ಹೋರಾಟ ತೀವ್ರಗೊಂಡಿದೆ. ವಿಶ್ವವಿದ್ಯಾಲಯ ಬಿಳಿ ಆನೆಗಳಾಗಿ ಪರಿವರ್ತನೆಗೊಂಡಿವೆ. ನೂರಾರು ಕೋಟಿ ಖರ್ಚು ಮಾಡ್ತಾರೆ. ಸರಿಯಾಗಿ ಪರೀಕ್ಷೆ ನಡೀತಿಲ್ಲ. 

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿ: ಸಂಸದ ಬೊಮ್ಮಾಯಿ ಕಿಡಿ

ರಿಸರ್ಚ್ ಆಗ್ತಿಲ್ಲ. ಪೇಪರ್ ಪ್ರಸೆಂಟೇಷನ್ ಆಗ್ತಿಲ್ಲ. ಯಾವುದೇ ಕೆಲಸ ಆಗ್ತಿಲ್ಲ. ಭ್ರಷ್ಟಾಚಾರದ ಕೂಪಗಳಾಗ್ತಿವೆ. ಅದನ್ನ ಸರಿ ಪಡೆದೋದು ಬಿಟ್ಟು ಹೊಸ ವಿಶ್ವವಿದ್ಯಾಲಯ ಬಂದ್ ಮಾಡುತ್ತಿದ್ದಾರೆ. ಅತೀ ಕಡಿಮೆ ವೆಚ್ಚದಲ್ಲಿ ಲೋಕಲ್ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗ್ತಿತ್ತು. ವಿಶೇಷ ಎಸ್ ಸಿ ಎಸ್ ಟಿ, ಒಬಿಸಿ ಹೆಣ್ಣುಮಕ್ಕಳು ದೊಡ್ಡಮಟ್ಟದಲ್ಲಿ ವಿವಿಯಲ್ಲಿ‌ ನೋಂದಾಯಿತರು. ಇವರ ಭವಿಷ್ಯಕ್ಕೆ ದೊಡ್ಡಮಟ್ಟದ ಕೊಡಲಿ ಪೆಟ್ಟನ್ನ ಕೊಟ್ಟಿದ್ದಾರೆ. ಹೊಸ ವಿಶ್ವವಿದ್ಯಾಲಯ ಮುಚ್ಚಲು ಬಿಡಲ್ಲ. ಕಾನೂನು ಹೋರಾಟ ಮಾಡುತ್ತಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ