ಮುಡಾ ಹಗರಣದ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬುದು ಕೋರ್ಟ್‌ನ ತೀರ್ಪು ಮತ್ತೆ ಸ್ಪಷ್ಟಪಡಿಸಿದೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ವಿಚಾರಣೆಗೆ ಒಳಗಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
ಶಿವಮೊಗ್ಗ (ಸೆ.25): ಮುಡಾ ಹಗರಣದ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ್ದು, ಕಾನೂನು ಎಲ್ಲರಿಗೂ ಒಂದೇ ಎಂಬುದು ಕೋರ್ಟ್‌ನ ತೀರ್ಪು ಮತ್ತೆ ಸ್ಪಷ್ಟಪಡಿಸಿದೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ ವಿಚಾರಣೆಗೆ ಒಳಗಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ವಿರುದ್ಧ ತೀರ್ಪು ಬಂದಿದೆ. ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಲಯವೇ ಒಪ್ಪಿಗೆ ನೀಡಿದೆ,
ನ್ಯಾಯ ಸಾಮಾನ್ಯ ವ್ಯಕ್ತಿಗೂ ಒಂದೇ, ರಾಜಕೀಯ ವ್ಯಕ್ತಿಗೂ ಒಂದೇ ಎಂಬುದು ಅರ್ಥ ಮಾಡಿಕೊಳ್ಳಬೇಕು. ಇನ್ನಾದರೂ ಸಿದ್ದರಾಮಯ್ಯನವರು ಅಧಿಕಾರದಿಂದ ದೂರ ಇರಬೇಕು, ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ವಿಚಾರಣೆಗೆ ಒಳಗಾಗಬೇಕು ಎಂದು ಹೇಳಿದರು. ಬಹಳ ದಿನಗಳಿಂದ ತಪ್ಪು ಮಾಡಿಯೇ ಇಲ್ಲ ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದರು, ಆದರೆ ನ್ಯಾಯಾಲಯದ ಆದೇಶಕ್ಕೆ ಬೆಲೆ ನೀಡಬೇಕು. ಸಿದ್ದರಾಮಯ್ಯ ಅವರು ಆರೋಪ ಮುಕ್ತರಾಗಿ ಬರಲಿ ಎಂದು ದೇವರಲ್ಲಿ ನಾನು ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಹೇಳಿದರು.
undefined
ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ
ಬಿ.ಎಸ್‌ವೈ ನಿವಾಸಕ್ಕೆ ಭದ್ರತೆ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅಸ್ತು ಎಂದ ಬೆನ್ನಲ್ಲೇ ವಿನೋಬ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಎಎಸ್‌ಐ ಸೇರಿ ಐದು ಜನ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಸಿದ್ದು ತಲೆದಂಡಕ್ಕೆ ಬಿಜೆಪಿಗರ ಒತ್ತಡ: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ. ತೀರ್ಪು ಹೊರಬೀಳುತ್ತಿದ್ದಂತೆಯೇ ಹಲವೆಡೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ತಕ್ಷಣವೇ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವಂತೆ ಸೂಚನೆಯನ್ನೂ ರವಾನಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹೈಕೋರ್ಟ್ ನೀಡಿರುವ ತೀರ್ಪು ಪ್ರತಿಪಕ್ಷಗಳು ನಡೆಸಿದ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಸಂದ ಮೊದಲ ಹಂತದ ಜಯ. ಈ ತೀರ್ಪನ್ನು ಗೌರವಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಲವಾಗಿ ಆಗ್ರಹಿಸಿದರು.
ಮುಡಾ ಹಗರಣದಿಂದ ಸಿದ್ದರಾಮಯ್ಯ ಭವಿಷ್ಯ ಅಂತ್ಯ: ಶಾಸಕ ಅರವಿಂದ ಬೆಲ್ಲದ
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಕಪ್ಪುಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಸಿದ್ದರಾಮಯ್ಯ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಷ್ಟೆಲ್ಲ ಆದ ನಂತರವೂ ರಾಜೀನಾಮೆ ನೀಡದೆ ಕುರ್ಚಿಗೆ ಅಂಟಿಕೊಂಡು ಕುಳಿತರೆ ಅದು ಅವರೇ ಹೇಳಿಕೊಳ್ಳುವ 40 ವರ್ಷಗಳ ರಾಜಕೀಯ ಬದುಕಿಗೆ ಹಾಗೂ ರಾಜ್ಯದ ಜನರಿಗೆ ಮಾಡುವ ಅಪಮಾನವಾಗುತ್ತದೆ ಎಂದು ಕಿಡಿಕಾರಿದರು.